ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಅಮಿತ್ ಶಾ; ʼಚಾಣಕ್ಯʼನ ಮುಂದಿನ ನಡೆ ಬಗ್ಗೆ ಹೆಚ್ಚಿದ ಕುತೂಹಲ

Amit Shah Meets PM Modi: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಿದ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ವಿದ್ಯಾರ್ಥಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸರ್ಕಾರದ ಮುಂದಿನ ಕ್ರಮಗಳು ಹಾಗೂ ಸಿಜೆಪಿ ಪ್ರತಿನಿಧಿಗಳೊಂದಿಗೆ ನಡೆಯಲಿರುವ ಮಾತುಕತೆಗಳ ಕುರಿತು ಚರ್ಚೆ ನಡೆದಿರುವ ಸಾಧ್ಯತೆ ಇದೆ.

ನರೇಂದ್ರ ಮೋದಿ-ಅಮಿತ್ ಶಾ (ಸಂಗ್ರಹ ಚಿತ್ರ)

ನವದೆಹಲಿ, ಜು. 25: ನೀಟ್ (NEET) ಸೇರಿ ವಿವಿಧ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿದ್ದ ವಿದ್ಯಾರ್ಥಿಗಳ ಭಾರಿ ಪ್ರತಿಭಟನೆಯ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ (Dharmendra Pradhan) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಪ್ರಧಾನಿ ನರೇಂದ್ರ ಮೋದಿ(Narendra Modi) ಅವರನ್ನು ಭೇಟಿಯಾಗಿದ್ದು, ಮಹತ್ವದ ಸಮಾಲೋಚನೆ ನಡೆಸಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಹಾಗೂ ಜಿತೇಂದ್ರ ಸಿಂಗ್ ಶೀಘ್ರದಲ್ಲೇ ಅಮಿತ್ ಶಾ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಗೆ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವ ವಹಿಸಿತ್ತು. ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳಲ್ಲಿ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆ, ಪ್ರತಿಭಟನಾಕಾರರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಬಾರದು ಹಾಗೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂಬುದು ಸೇರಿತ್ತು.

ಸರ್ಕಾರ ಈಗಾಗಲೇ ಪ್ರತಿಭಟನಾಕಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಹಾಗೂ ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡುವ ಬೇಡಿಕೆಗಳನ್ನು ಒಪ್ಪಿಕೊಂಡಿತ್ತು. ಆದರೆ ಸಚಿವರ ರಾಜೀನಾಮೆ ಕುರಿತು ಅನಿಶ್ಚಿತತೆ ಮುಂದುವರಿದಿತ್ತು. ಇದೀಗ ರಾಜೀನಾಮೆ ಬೇಡಿಕೆಯೂ ಅಂಗೀಕಾರಗೊಂಡಿದೆ.

ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಬೆನ್ನಲ್ಲೇ ದೆಹಲಿ ಪ್ರತಿಭಟನೆ ಅಂತ್ಯಗೊಳಿಸಿದ ಸಿಜೆಪಿ

ರಾಜೀನಾಮೆ ಪತ್ರದಲ್ಲಿ ಧರ್ಮೇಂದ್ರ ಪ್ರಧಾನ, "ಜಂತರ್ ಮಂತರ್ ಮತ್ತು ದೇಶದಾದ್ಯಂತ ನಿರ್ಮಾಣವಾಗಿರುವ ಪರಿಸ್ಥಿತಿಯನ್ನು ರಾಷ್ಟ್ರವಿರೋಧಿ ಶಕ್ತಿಗಳು ದುರುಪಯೋಗಪಡಿಸಿಕೊಳ್ಳಬಾರದು, ದೇಶದ ಏಕತೆ ಅಬಾಧಿತವಾಗಿರಬೇಕು, ಒಬ್ಬ ವಿದ್ಯಾರ್ಥಿಯ ಭವಿಷ್ಯವೂ ಕಾನೂನು ತೊಡಕುಗಳಲ್ಲಿ ಸಿಲುಕಬಾರದು ಹಾಗೂ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮತ್ತು ಭವಿಷ್ಯದತ್ತ ಗಮನಹರಿಸಬೇಕು ಎಂಬ ಉದ್ದೇಶದಿಂದ ಪ್ರಧಾನಮಂತ್ರಿಗೆ ನನ್ನ ರಾಜೀನಾಮೆ ಸಲ್ಲಿಸಿದ್ದೇನೆ" ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ (Abhijeet Dipke), "ಇದೇ ಪ್ರಜಾಪ್ರಭುತ್ವ. ಅವರು ರಾಜೀನಾಮೆ ನೀಡಿದ್ದಾರೆ. ನೆನಪಿರಲಿ, ಕಾಕ್ರೋಚ್ ಜತೆ ತಲೆ ಹಾಕಬೇಡಿ" ಎಂದು ಹೇಳಿದ್ದಾರೆ. ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಯ ನಂತರ ಸರ್ಕಾರ ಮತ್ತು ಸಿಜೆಪಿ ಪ್ರತಿನಿಧಿಗಳ ನಡುವಿನ ಮೂರನೇ ಸುತ್ತಿನ ಮಾತುಕತೆ ನಡೆಯಲಿದ್ದು, ಮುಂದಿನ ಬೆಳವಣಿಗೆಗಳತ್ತ ದೇಶದ ಗಮನ ಕೇಂದ್ರೀಕೃತವಾಗಿದೆ