ಬೆಂಗಳೂರು: ಕರ್ನಾಟಕದಲ್ಲಿ (Karnataka) ಅತಿವೃಷ್ಟಿಯಿಂದ (disaster relief) ಉಂಟಾದ ಹಾನಿಗೆ ಪರಿಹಾರವಾಗಿ ಕೇಂದ್ರ ಸರ್ಕಾರದ ಎಸ್‌ಡಿಆರ್‌ಎಫ್ (SDRF) ನಿಧಿಯಿಂದ 384 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಕೇಂದ್ರ ಗೃಹ ಸಚಿವಾಲಯ (home ministry) ಅನುಮೋದಿಸಿದೆ. ರಾಜ್ಯದಲ್ಲಿ ನೈರುತ್ಯ ಮುಂಗಾರಿನಿಂದಾಗಿ ಉತ್ತರ ಕರ್ನಾಟಕ ಸೇರಿದಂತೆ ವಿವಿಧೆಡೆ ಅತಿವೃಷ್ಟಿ ಉಂಟಾಗಿತ್ತು. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದಲ್ಲೂ ಇದೇ ಪರಿಸ್ಥಿತಿ ಉಂಟಾಗಿತ್ತು. ಈ ಹಿನ್ನಲೆಯಲ್ಲಿ ಕರ್ನಾಟಕ ಹಾಗೂ ಮಹಾರಾಷ್ಟ್ರಕ್ಕೆ ಒಟ್ಟು 1,950 ಕೋಟಿಯನ್ನು ರಾಜ್ಯ ವಿಪತ್ತು ಪರಿಹಾರ ನಿಧಿ (SDRF) ಅಡಿಯಲ್ಲಿ ಮುಂಗಡವಾಗಿ ಬಿಡುಗಡೆ ಮಾಡೋದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅನುಮತಿ ನೀಡಿದ್ದಾರೆ. ಕೇಂದ್ರ ಸರ್ಕಾರದ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಮಹಾರಾಷ್ಟ್ರಕ್ಕೆ 1,566.40 ಕೋಟಿ ಹಾಗೂ ಕರ್ನಾಟಕಕ್ಕೆ 384 ಕೋಟಿ ಅತಿವೃಷ್ಠಿ ಪರಿಹಾರ ದೊರೆತಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿಪತ್ತುಗಳ ಸಂದರ್ಭದಲ್ಲೂ, ಅದರ ನಂತರವೂ ಜನರ ಜೊತೆಯೇ ಮೋದಿ ಸರ್ಕಾರ ನಿಂತಿದೆ. ಇಂದು ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ SDRF ನ ಕೇಂದ್ರ ಪಾಲಿನ ಎರಡನೇ ಕಂತಾಗಿ ರೂ. 1,950.80 ಕೋಟಿಯನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ. ಈ ವರ್ಷ ಅತಿವೃಷ್ಠಿ ಮತ್ತು ಪ್ರವಾಹದಿಂದ ಹಾನಿಗೊಳಗಾದ ಜನರಿಗೆ ತಕ್ಷಣದ ಪರಿಹಾರ ನೆರವು ನೀಡಲು ಈ ನಿಧಿಯನ್ನು ಬಳಸಲಾಗುವುದು. ಈ ವರ್ಷ ಕೇಂದ್ರ ಸರ್ಕಾರವು SDRF ಅಡಿಯಲ್ಲಿ 27 ರಾಜ್ಯಗಳಿಗೆ ರೂ. 13,603.20 ಕೋಟಿ ಮತ್ತು NDRF ಅಡಿಯಲ್ಲಿ 15 ರಾಜ್ಯಗಳಿಗೆ ರೂ. 2,189.28 ಕೋಟಿಯನ್ನು ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Amit Shah: ಅಬುಜ್‌ಮರ್ ಅರಣ್ಯ ಈಗ ನಕ್ಸಲ್ ಮುಕ್ತ: ಅಮಿತ್ ಶಾ ಘೋಷಣೆ
ಈ ವರ್ಷದ ನೈರುತ್ಯ ಮುಂಗಾರಿನಿಂದ ತೀವ್ರ ಹಾನಿಗೊಳಗಾದ ಜನರಿಗೆ ತ್ವರಿತವಾಗಿ ನೆರವು ಒದಗಿಸಲು ಒಟ್ಟು ಮೊತ್ತದಲ್ಲಿ ಕರ್ನಾಟಕಕ್ಕೆ 384.0 ಕೋಟಿ ರೂಪಾಯಿ ಹಾಗೂ ಮಹಾರಾಷ್ಟ್ರಕ್ಕೆ 1566.40 ಕೋಟಿ ರೂಪಾಯಿ ನೀಡಲಾಗಿದೆ. ಪ್ರವಾಹ ಭೂಕುಸಿತ ಮೇಘಸ್ಫೋಟಕ್ಕೆ ಒಳಗಾದ ರಾಜ್ಯಗಳಿಗೆ ಎಲ್ಲ ರೀತಿಯ ನೆರವು ಒದಗಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸಲಹೆಯಂತೆ ಕೇಂದ್ರ ಸರ್ಕಾರ ತನ್ನ ಬದ್ಧತೆಯನ್ನು ವ್ಯಕ್ತಪಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಎಸ್ ಡಿಆರ್ ಎಫ್ ನ ಅಡಿಯಲ್ಲಿ ಕೇಂದ್ರದ ಪಾಲಾದ 13,603.20 ಕೋಟಿ ರೂ. 27 ರಾಜ್ಯಗಳಿಗೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯ (ಎನ್ ಡಿಆರ್ ಎಫ್) ಅಡಿಯಲ್ಲಿ 15 ರಾಜ್ಯಗಳಿಗೆ 2,189.28 ಕೋಟಿ ರೂ. ಮೊತ್ತವನ್ನು ಕೇಂದ್ರ ಸರ್ಕಾರವು ಈ ವರ್ಷ ಬಿಡುಗಡೆ ಮಾಡಿದೆ. ಇದಲ್ಲದೇ ಹೆಚ್ಚುವರಿಯಾಗಿ ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್ ಡಿಆರ್ ಎಫ್) ಅಡಿಯಲ್ಲಿ 21 ರಾಜ್ಯಗಳಿಗೆ 4,571.30 ಕೋಟಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎಸ್ಡಿಆರ್ ಎಫ್) ಅಡಿಯಲ್ಲಿ 9 ರಾಜ್ಯಗಳಿಗೆ 372.09 ಕೋಟಿ ರೂ. ನೆರವು ನೀಡಲಾಗಿದೆ.