ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದುರ್ಗಾಪೂಜೆ ವೇಳೆ ಕಾಲ್ತುಳಿತ; ಗಾಯಗೊಂಡವರನ್ನು ಭೇಟಿಯಾದ ಅಮಿತ್ ಶಾ

Kolkata pandal stampede: ಈ ಘಟನೆಯನ್ನು ಅತ್ಯಂತ ದುಃಖಕರ ಎಂದು ಬಣ್ಣಿಸಿರುವ ಶಾ, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ತಾವು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ಸುವೇಂದು ಅಧಿಕಾರಿ ಅವರೊಂದಿಗೆ ಮಾತನಾಡಿದ್ದೇನೆ ಎಂದೂ ಅವರು ತಿಳಿಸಿದ್ದಾರೆ.

ದುರ್ಗಾಪೂಜೆ ವೇಳೆ ಕಾಲ್ತುಳಿತ; ಗಾಯಾಳುಗಳ ಭೇಟಿಯಾದ ಅಮಿತ್ ಶಾ

Amit Shah -

Abhilash BC
Abhilash BC Oct 18, 2026 10:57 AM

ಕೋಲ್ಕತ್ತಾ, ಅ.18: ಉತ್ತರ ಕೋಲ್ಕತ್ತಾದ ಚೋರ್ಬಗನ್‌ನಲ್ಲಿ ವಾರ್ಷಿಕ ದುರ್ಗಾ ಪೂಜಾ ಉತ್ಸವ ಮಂಟಪದಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದಲ್ಲಿ ಗಾಯಗೊಂಡವರು ಚಿಕಿತ್ಸೆ ಪಡೆಯುತ್ತಿರುವ ಕಲ್ಕತ್ತಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಭೇಟಿ ನೀಡಿದರು.

ಶನಿವಾರ ಸಂಜೆ ಮಳೆಯ ನಡುವೆ ಜನಸಂದಣಿ ಇದ್ದಕ್ಕಿದ್ದಂತೆ ಹೆಚ್ಚಾದಾಗ, ಕೋಲ್ಕತ್ತಾದ ಚೋರ್ಬಗಾನ್ ಸಾರ್ವಜನಿಕ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಸಂಭವಿಸಿದ ನೂಕುನುಗ್ಗಲಿನಲ್ಲಿ ಕನಿಷ್ಠ 19 ಮಂದಿ ಸಾವನ್ನಪ್ಪಿದ್ದಾರೆ ಮತ್ತು 25 ಮಂದಿ ಗಾಯಗೊಂಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತವಾಗಿ (suo motu) ಪ್ರಕರಣ ದಾಖಲಿಸಿಕೊಂಡಿದ್ದು, ಮೃತಪಟ್ಟವರ ಗುರುತನ್ನು ಪತ್ತೆಹಚ್ಚುವ ಕಾರ್ಯವನ್ನೂ ನಡೆಸುತ್ತಿದ್ದಾರೆ.

ಈ ಘಟನೆಯನ್ನು ಅತ್ಯಂತ ದುಃಖಕರ ಎಂದು ಬಣ್ಣಿಸಿರುವ ಶಾ, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ತಾವು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ಸುವೇಂದು ಅಧಿಕಾರಿ ಅವರೊಂದಿಗೆ ಮಾತನಾಡಿದ್ದೇನೆ ಎಂದೂ ಅವರು ತಿಳಿಸಿದ್ದಾರೆ.



ಈ ದುರಂತದ ನಂತರ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ, ಕೋಲ್ಕತ್ತಾ ಪೊಲೀಸರು ನಗರದ ಕೆಲವು ಭಾಗಗಳಲ್ಲಿ ಅಕ್ಟೋಬರ್ 18 ರಿಂದ ಅಕ್ಟೋಬರ್ 20 ರವರೆಗೆ ಮೂರು ದಿನಗಳ ಕಾಲ 'ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ' (BNSS), 2023 ರ ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ಜಾರಿಗೊಳಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ʼಜನಸಂದಣಿ ನಿರ್ವಹಣೆಯಲ್ಲಿ ವಿಫಲರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಘಟನೆಯ ತನಿಖೆಗೆ ಕಲ್ಕತ್ತಾ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗುವುದು. ಈ ತಂಡದಲ್ಲಿ ಎಸ್‌ಟಿಎಫ್, ಸಿಐಡಿ ಮತ್ತು ಇತರ ಇಲಾಖೆಗಳ ಅಧಿಕಾರಿಗಳು ಇರಲಿದ್ದಾರೆʼ ಎಂದು ತಿಳಿಸಿದ್ದಾರೆ

ಸಿಸಿಟಿವಿ ದೃಶ್ಯಾವಳಿಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಕರ್ತವ್ಯ ಲೋಪ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರನ್ನು ಬಿಡುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.