ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಬೆಂಗಾವಲು ವಾಹನ ಅಪಘಾತ
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಬೆಂಗಾವಲು ಪಡೆಯ ವಾಹನವೊಂದು ಬುಧವಾರ ಬೆಳಿಗ್ಗೆ ವಿಶಾಖಪಟ್ಟಣ ನಗರ ವ್ಯಾಪ್ತಿಯಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಅಪಘಾತದ ಸಮಯದಲ್ಲಿ ಉಪಮುಖ್ಯಮಂತ್ರಿಯವರು ಬೆಂಗಾವಲು ಪಡೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಂಗ್ರಹ ಚಿತ್ರ -
ಹೈದರಾಬಾದ್: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ (Pawan Kalyan) ಬೆಂಗಾವಲು ಪಡೆಯ ವಾಹನವೊಂದು ಬುಧವಾರ ಬೆಳಿಗ್ಗೆ ವಿಶಾಖಪಟ್ಟಣ ನಗರ ವ್ಯಾಪ್ತಿಯಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಅಪಘಾತದ ಸಮಯದಲ್ಲಿ ಉಪಮುಖ್ಯಮಂತ್ರಿಯವರು ಬೆಂಗಾವಲು ಪಡೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. ಸಿರಿಪುರಂನಿಂದ ಪೆದ್ದವಾಲ್ತೇರುಗೆ ಬೆಂಗಾವಲು ಪಡೆಯು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಪೈಲಟ್ ವಾಹನಗಳಲ್ಲಿ ಒಂದು ಹಠಾತ್ ಬ್ರೇಕ್ ಹಾಕಿದ್ದರಿಂದ, ಅದನ್ನು ಹಿಂಬಾಲಿಸಿದ ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದವು.
ಅಪಘಾತದಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಭದ್ರತಾ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ತ್ವರಿತವಾಗಿ ಪ್ರತಿಕ್ರಿಯಿಸಿ, ಆ ಪ್ರದೇಶದಲ್ಲಿ ಸಂಚಾರವನ್ನು ನಿಯಂತ್ರಿಸಲಾಗಿದೆಯೆ ಎಂದು ಖಚಿತಪಡಿಸಿಕೊಂಡರು. ಪೈಲಟ್ ಕಾರಿನ ಹಠಾತ್ ಬ್ರೇಕ್ ಹಾಕಲು ಕಾರಣವಾದ ಸಂದರ್ಭಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಎಂ ಸಿದ್ದರಾಮಯ್ಯನವರು ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಭಾಗವಹಿಸಿ ವಾಪಸ್ಸು ಬರುವಾಗ ಎಸ್ಕಾರ್ಟ್ (Escort) ವಾಹನ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಇಬ್ಬರು ಎಸ್ಕಾರ್ಟ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವ್ಯಾಪ್ತಿಯ ಎಕ್ಸ್‌ಪ್ರೆಸ್ ಹೈವೇಯ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೆಯಲ್ಲಿ ಈ ಘಟನೆ ನಡೆದಿತ್ತು. ಎಸ್ಕಾರ್ಟ್ ವಾಹನ ಡಿಸಿಎಂ ಡಿಕೆ ಶಿವಕುಮಾರ್ ಅವರು ಕುಳಿತಿದ್ದ ಕಾರನ್ನು ಹಿಂಬಾಲಿಸುತ್ತಿತ್ತು. ಪಲ್ಟಿಯಾದ ವಾಹನ ಹಿಂದೆಯಿದ್ದ ಕಾರಣ ಅದೃಷ್ಟವಶಾತ್ ಡಿಕೆಶಿ ಕಾರಿಗೆ ಏನು ಆಗಿರಲಿಲ್ಲ.
ರಸ್ತೆ ಅಪಘಾತ; ಯುವತಿ ಸಾವು
ಊಟಕ್ಕೆ ಹೋಗಲು ರಸ್ತೆ ದಾಟುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ. ರಾಜ್ ಕುಮಾರ್ ರಸ್ತೆಯ ಹೆಚ್‌ಡಿಎಫ್‌ಸಿ ಬ್ಯಾಂಕ್ ಬಳಿ ಈ ದುರ್ಘಟನೆ ನಡೆದಿದೆ. ಊಟಕ್ಕೆ ಹೋಗಲು ರಸ್ತೆ ದಾಟುತ್ತಿದ್ದ 27 ವರ್ಷದ ಯುವತಿ ಯೋಗೇಶ್ವರಿ ಅವರಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಯೋಗೇಶ್ವರಿ ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.