ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kalisetti Appala Naidu: 3ನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ 50,000 ರೂ, ಗಂಡು ಜನಿಸಿದ್ರೆ ಹಸು ಗಿಫ್ಟ್‌ ; ಬಂಪರ್ ಕೊಡುಗೆ ಘೋಷಿಸಿದ TDP ಸಂಸದ

ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಕುಟುಂಬಗಳು ಹೆಚ್ಚು ಮಕ್ಕಳನ್ನು ಹೊಂದಲು ಪ್ರೋತ್ಸಾಹ ಧನ ನೀಡಬೇಕೆಂದು ಪ್ರತಿಪಾದಿಸಿದ ಬೆನ್ನಲ್ಲೇ, ವಿಜಯನಗರದ ಪಕ್ಷದ ಸಂಸದ ಕಾಳಿಸೆಟ್ಟಿ ಅಪ್ಪಲ ನಾಯ್ಡು ಮೂರನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ತಲಾ 50,000 ರೂ.ಗಳನ್ನು ನೀಡುವುದಾಗಿ ಹೇಳಿದ್ದಾರೆ

3ನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ಬಂಪರ್ ಕೊಡುಗೆ ಘೋಷಿಸಿದ TDP

ಸಾಂದರ್ಭಿಕ ಚಿತ್ರ

Profile Vishakha Bhat Mar 10, 2025 10:04 AM

ಹೈದರಾಬಾದ್:‌ ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ( Chandrababu Naidu) ಕುಟುಂಬಗಳು ಹೆಚ್ಚು ಮಕ್ಕಳನ್ನು ಹೊಂದಲು ಪ್ರೋತ್ಸಾಹ ಧನ ನೀಡಬೇಕೆಂದು ಪ್ರತಿಪಾದಿಸಿದ ಬೆನ್ನಲ್ಲೇ, ವಿಜಯನಗರದ ಪಕ್ಷದ ಸಂಸದ ಕಾಳಿಸೆಟ್ಟಿ ಅಪ್ಪಲ ನಾಯ್ಡು ( Kalisetti Appala Naidu) ಮೂರನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ತಲಾ 50,000 ರೂ.ಗಳನ್ನು ನೀಡುವುದಾಗಿ ಹೇಳಿದ್ದಾರೆ. ಗಂಡು ಮಗುವಿಗೆ ಜನ್ಮ ನೀಡಿದರೆ ಆ ಮಹಿಳೆಗೆ ಹಸುವನ್ನು ಉಡುಗೊರೆಯಾಗಿ ನೀಡುವುದಾಗಿಯೂ ಅವರು ಘೋಷಿಸಿದ್ದಾರೆ. ತಮ್ಮ ಸಂಬಳದಿಂದ ತಾನು ಇದನ್ನು ನೀಡುವುದಾಗಿ ನಾಯ್ಡು ತಿಳಿಸಿದ್ದಾರೆ. ಅಪ್ಪಾ ನಾಯ್ಡು ಅವರ ಈ ಕೊಡುಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಟಿಡಿಪಿ ನಾಯಕರು ಮತ್ತು ಕಾರ್ಯಕರ್ತರು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಈ ಘೋಷಣೆಯನ್ನು ಮರು ಪೋಸ್ಟ್ ಮಾಡಿದ್ದಾರೆ.

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಶನಿವಾರ ವಿಜಯನಗರದ ರಾಜೀವ್ ಸ್ಪೋರ್ಟ್ಸ್ ಕಾಂಪೌಂಡ್‌ನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸಂಸದರು ಈ ಘೋಷಣೆ ಮಾಡಿದರು. ಈ ಕೊಡುಗೆಯನ್ನು ಘೋಷಿಸಿದ್ದಕ್ಕಾಗಿ ಮುಖ್ಯಮಂತ್ರಿ ನಾಯ್ಡು ಅವರು ಸಂಸದರನ್ನು ಶ್ಲಾಘಿಸಿದ್ದಾರೆ. ಕೆಲ ದಿನಗಳ ಹಿಂದೆ ದಕ್ಷಿಣ ಭಾರತದಲ್ಲಿ ಜನಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ನಾನು ಕುಟುಂಬ ಯೋಜನೆಯನ್ನು ಪ್ರತಿಪಾದಿಸುತ್ತಿದ್ದೆ. ಈಗ ನಾನು ನನ್ನ ಅಭಿಪ್ರಾಯಗಳನ್ನು ಬದಲಾಯಿಸುತ್ತಿದ್ದೇನೆ ಮತ್ತು ಜನಸಂಖ್ಯೆಯನ್ನು ಉತ್ತೇಜಿಸುತ್ತಿದ್ದೇನೆ. ಭವಿಷ್ಯಕ್ಕಾಗಿ ನಾವು ಜನಸಂಖ್ಯಾ ಹೆಚ್ಚು ಮಾಡಲೇ ಬೇಕು ಎಂದು ಅವರು ಹೇಳಿದ್ದರು.

ಶನಿವಾರ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಪ್ರಕಾಶಂ ಜಿಲ್ಲೆಯ ಮಾರ್ಕಾಪುರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ನಾಯ್ಡು ಮಹತ್ವದ ಘೋಷಣೆ ಮಾಡಿದ್ದು, ಮಕ್ಕಳ ಸಂಖ್ಯೆ ಏನೇ ಇರಲಿ, ಹೆರಿಗೆಯ ಸಮಯದಲ್ಲಿ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ಹೆರಿಗೆ ರಜೆ ನೀಡಲಾಗುವುದು ಎಂದು ಹೇಳಿದ್ದಾರೆ. "ಹಿಂದೆ, ಹೆರಿಗೆ ರಜೆ ಇಬ್ಬರು ಮಕ್ಕಳಿಗೆ ಸೀಮಿತವಾಗಿತ್ತು. ಈಗ, ನಾವು ಸಂಖ್ಯೆಯನ್ನು ಲೆಕ್ಕಿಸದೆ ಎಲ್ಲಾ ಮಕ್ಕಳಿಗೂ ಹೆರಿಗೆ ರಜೆಯನ್ನು ವಿಸ್ತರಿಸುತ್ತಿದ್ದೇವೆ. ಈ ಕ್ರಮವು ಕುಟುಂಬದ ಬೆಳವಣಿಗೆಯನ್ನು ಉತ್ತೇಜಿಸುವುದು, ಜನಸಂಖ್ಯಾ ಸಮತೋಲನವನ್ನು ಪರಿಹರಿಸುವುದು ಮತ್ತು ಮಹಿಳೆಯರು ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನವನ್ನು ಸಮತೋಲನಗೊಳಿಸುವಲ್ಲಿ ಬೆಂಬಲ ನೀಡುವ ಗುರಿಯನ್ನು ಹೊಂದಿದೆ. ಮಹಿಳೆಯರನ್ನು ಸಬಲೀಕರಣಗೊಳಿಸಲು ಮತ್ತು ಆಂಧ್ರಪ್ರದೇಶಕ್ಕೆ ಬಲವಾದ ಭವಿಷ್ಯವನ್ನು ನಿರ್ಮಿಸಲು ನಾವು ಬದ್ಧರಾಗಿದ್ದೇವೆ" ಎಂದು ಅವರು ಎಕ್ಸ್‌ ನಲ್ಲಿ ಪೋಸ್ಟ್ ಮಾಡಿದ್ದಾರೆ.