ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Andhra Pradesh Stampede: ದೇಶದಲ್ಲಿ ಮತ್ತೊಂದು ರಣ ಭೀಕರ ಕಾಲ್ತುಳಿತ- 9 ಬಲಿ; ಸಾವಿನ ಸಂಖ್ಯೆ ಮತ್ತಷ್ಟು ಏರುವ ಭೀತಿ!

Stampede Case: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಸಂಭವಿಸಿದ ಭಾರೀ ಕಾಲ್ತುಳಿತದಲ್ಲಿ 9 ಜನ ಬಲಿಯಾಗಿದ್ದಾರೆ. ಏಕಾದಶಿ ಪ್ರಯುಕ್ತ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಪುನಸ್ಕಾರಗಳನ್ನು ಆಯೋಜಿಸಲಾಗಿತ್ತು. ಈ ವೇಳೆ ಭಾರೀ ಪ್ರಮಾಣದಲ್ಲಿ ಭಕ್ತರು ಜಮಾಯಿದ್ದರು. ಆಗ ಏಕಾಏಕಿ ನೂಕು ನುಗ್ಗಲು ಪ್ರಾರಂಭವಾಗಿದ್ದು, ಪರಿಣಾಮವಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 9ಜನ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಹಲವಾರು ಭಕ್ತರು ಗಾಯಗೊಂಡಿದ್ದಾರೆ.

ದೇಶದಲ್ಲಿ ಮತ್ತೊಂದು ಕಾಲ್ತುಳಿತ- 9 ಬಲಿ

-

Rakshita Karkera Rakshita Karkera Nov 1, 2025 12:52 PM

ಅಮರಾವತಿ: ದೇಶದಲ್ಲಿ ಮತ್ತೊಂದು ಭಾರೀ ಕಾಲ್ತುಳಿತ ಪ್ರಕರಣವೊಂದು(Andhra Pradesh Stampede) ವರದಿಯಾಗಿದೆ. ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಸಂಭವಿಸಿದ ಭಾರೀ ಕಾಲ್ತುಳಿತದಲ್ಲಿ 9 ಜನ ಬಲಿಯಾಗಿದ್ದಾರೆ. ದುರ್ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿ ಇದೆ.

ನಡೆದಿದ್ದೇನು?

ಆಂಧ್ರಪ್ರದೇಶದ ಮುಖ್ಯಮಂತ್ರಿ ಕಚೇರಿ (ಸಿಎಮ್‌ಒ) ಹೇಳಿಕೆಯ ಪ್ರಕಾರ, ಏಕಾದಶಿ ಪ್ರಯುಕ್ತ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಪುನಸ್ಕಾರಗಳನ್ನು ಆಯೋಜಿಸಲಾಗಿತ್ತು. ಈ ವೇಳೆ ಭಾರೀ ಪ್ರಮಾಣದಲ್ಲಿ ಭಕ್ತರು ಜಮಾಯಿದ್ದರು. ಆಗ ಏಕಾಏಕಿ ನೂಕು ನುಗ್ಗಲು ಪ್ರಾರಂಭವಾಗಿದ್ದು, ಪರಿಣಾಮವಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 9ಜನ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಹಲವಾರು ಭಕ್ತರು ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ವಿಡಿಯೊ ಇಲ್ಲಿದೆ



ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡಗಳು ಮತ್ತು ತುರ್ತು ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಘಟನೆ ನಡೆದ ಸ್ವಲ್ಪ ಸಮಯದ ನಂತರ ರಾಜ್ಯ ಕೃಷಿ ಸಚಿವ ಕೆ. ಅಚ್ಚನ್ನಾಯ್ಡು ಅವರು ದೇವಾಲಯಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಅಲ್ಲದೇ ದೇವಾಲಯದ ಅಧಿಕಾರಿಗಳನ್ನು ಭೇಟಿ ಮಾಡಿದರು. ಜನಸಂದಣಿಯನ್ನು ನಿರ್ವಹಿಸಲು ಮತ್ತು ಪರಿಹಾರ ಕಾರ್ಯಗಳಲ್ಲಿ ಸಹಾಯ ಮಾಡಲು ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ಈ ಸುದ್ದಿಯನ್ನೂ ಓದಿ: Dalapathy Vijay: ಕರೂರು ಕಾಲ್ತುಳಿತ ಪ್ರಕರಣದ ಸಂತ್ರಸ್ತರನ್ನು 400 ಕಿ.ಮೀ. ದೂರಕ್ಕೆ ಕರೆಸಿಕೊಂಡು ಭೇಟಿಯಾದ ವಿಜಯ್

ಸಿಎಂ ಚಂದ್ರಬಾಬು ನಾಯ್ಡು ಸಂತಾಪ

ಇನ್ನು ಘಟನೆ ಬಗ್ಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರತಿಕ್ರಿಯಿಸಿದ್ದು, "ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ವೆಂಕಟೇಶ್ವರ ದೇವಾಲಯದಲ್ಲಿ ನಡೆದ ಕಾಲ್ತುಳಿತದ ಘಟನೆ ಆಘಾತವನ್ನುಂಟು ಮಾಡಿದೆ. ಈ ದುರಂತ ಘಟನೆಯಲ್ಲಿ ಭಕ್ತರ ಸಾವು ಅತ್ಯಂತ ಹೃದಯವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ತ್ವರಿತ ಮತ್ತು ಸರಿಯಾದ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಮೇಲ್ವಿಚಾರಣೆ ಮಾಡುವಂತೆ ಸ್ಥಳೀಯ ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳನ್ನು ನಾನು ವಿನಂತಿಸಿದ್ದೇನೆ" ಎಂದು ಹೇಳಿದರು.

ತಮ್ಮ ತಂದೆ ನಾಯ್ಡು ಅವರ ಸಂಪುಟದ ಸಚಿವರಾದ ನಾರಾ ಲೋಕೇಶ್ ಅವರು ಸಾವಿಗೆ ಸಂತಾಪ ಸೂಚಿಸಿ, ಘಟನೆಯಿಂದಾ "ತೀವ್ರ ಆಘಾತ" ಉಂಟಾಗಿದೆ ಎಂದು ಹೇಳಿದರು. ಈ ಏಕಾದಶಿ ದಿನದಂದು ನಮಗೆ ತೀವ್ರ ದುಃಖ ಆವರಿಸಿದೆ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಸರ್ಕಾರ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುತ್ತಿದೆ ಎಂದು ಅವರು ಹೇಳಿದರು. ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸ್ಥಳೀಯ ಶಾಸಕರೊಂದಿಗೆ ಮಾತನಾಡಿದ್ದೇನೆ ಮತ್ತು ಸಂತ್ರಸ್ತರಿಗೆ ನೆರವು ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಲೋಕೇಶ್ ಹೇಳಿದರು.