ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Anil Ambani: 3 ಸಾವಿರ ರೂ. ಕೋಟಿ ಸಾಲ ವಂಚನೆ ಪ್ರಕರಣ; ಅನಿಲ್ ಅಂಬಾನಿಗೆ ಲುಕ್ ಔಟ್ ನೋಟಿಸ್

ರಿಲಯನ್ಸ್ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅನಿಲ್ ಅಂಬಾನಿ (Anil Ambani) ವಿರುದ್ಧ 3,000 ಕೋಟಿ ರೂ. ಸಾಲ ವಂಚನೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಶುಕ್ರವಾರ ಲುಕ್ಔಟ್ ಸುತ್ತೋಲೆ ಹೊರಡಿಸಿದೆ.

ಮುಂಬೈ: ರಿಲಯನ್ಸ್ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅನಿಲ್ ಅಂಬಾನಿ (Anil Ambani) ವಿರುದ್ಧ 3,000 ಕೋಟಿ ರೂ. ಸಾಲ ವಂಚನೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಶುಕ್ರವಾರ ಲುಕ್ಔಟ್ ಸುತ್ತೋಲೆ ಹೊರಡಿಸಿದೆ. ಅವರ ಗ್ರೂಪ್ ಕಂಪನಿಗಳ ವಿರುದ್ಧದ ಬ್ಯಾಂಕ್ ಸಾಲ ವಂಚನೆ ಆರೋಪದ ಹಣ ವರ್ಗಾವಣೆ ಪ್ರಕರಣದಲ್ಲಿ ಆಗಸ್ಟ್ 5ರಂದು ವಿಚಾರಣೆಗೆ ಇಡಿ ಅವರಿಗೆ ಸಮನ್ಸ್ ನೀಡಿದೆ. ಅನಿಲ್ ಅಂಬಾನಿ ಈಗ ನ್ಯಾಯಾಲಯದ ಅನುಮತಿಯಿಲ್ಲದೆ ಭಾರತದ ಹೊರಗೆ ಪ್ರಯಾಣಿಸಲು ಸಾಧ್ಯವಿಲ್ಲ.

ಕೆಲವು ಕಂಪನಿಗಳಿಂದ ಕೋಟ್ಯಂತರ ರೂಪಾಯಿ ಹಣ ಅಕ್ರಮ ವರ್ಗಾವಣೆ, ಬ್ಯಾಂಕ್ ಸಾಲ ವಂಚನೆ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಜುಲೈ 24ರಂದು ಅನಿಲ್ ಅಂಬಾನಿ ಸಂಬಂಧ ಹೊಂದಿದ್ದ ಹಲವು ಕಂಪೆನಿಗಳ ಮೇಲೆ ದಾಳಿ ನಡೆಸಿದೆ. ಹಲವಾರು ಸ್ಥಳಗಳಿಂದ ದಾಖಲೆಗಳು ಮತ್ತು ಕಂಪ್ಯೂಟರ್ ಪೆರಿಫೆರಲ್‌ಗಳನ್ನು ವಶಪಡಿಸಿಕೊಂಡಿದೆ. ಇದಾದ ಬಳಿಕ ಇದೀಗ ಇಡಿ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಆದೇಶಿಸಿ ಸಮನ್ಸ್ ಜಾರಿಗೊಳಿಸಿದೆ. ಕಳೆದ ವಾರ, ರಿಲಯನ್ಸ್ ಗ್ರೂಪ್‌ಗೆ ಸಂಬಂಧಿಸಿದ ಹಲವಾರು ಕಂಪನಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಡಿ ದಾಳಿ ನಡೆಸಿತ್ತು. 17,000 ಕೋಟಿ ರೂ. ಸಾಲ ವಂಚನೆ ಪ್ರಕರಣದಲ್ಲಿ ಸೆಬಿ ತನ್ನ ತನಿಖಾ ವರದಿಯನ್ನು ಇಡಿ ಜೊತೆ ಹಂಚಿಕೊಂಡಿದೆ.

ಕಳೆದ ವಾರ, ಇಡಿ ರಿಲಯನ್ಸ್ ಗ್ರೂಪ್‌ಗೆ ಸಂಬಂಧಿಸಿದ ಮುಂಬೈನಲ್ಲಿ ಸುಮಾರು 35 ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಸೆಬಿ ವರದಿಯ ಪ್ರಕಾರ, ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ (ಆರ್ ಇನ್ಫ್ರಾ), ಸಿಎಲ್ಇ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಯ ಮೂಲಕ 10,000 ಕೋಟಿ ರೂ.ಗಳನ್ನು ದುರುಪಯೋಗಪಡಿಸಿಕೊಂಡಿದೆ. ಈ ಕಂಪನಿಯು ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಬಂಧ ಹೊಂದಿದೆ ಎಂದು ಹೇಳಲಾಗುತ್ತದೆ. ಅನಿಲ್ ಅಂಬಾನಿ ಮತ್ತು ಅವರ ಕಂಪನಿ ರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್‌ಕಾಮ್) ಅನ್ನು 'ವಂಚನೆ' ಎಂದು ಎಸ್‌ಬಿಐ ಇತ್ತೀಚೆಗೆ ಘೋಷಿಸಿದ ನಂತರ ಇಡಿ ಈ ಕ್ರಮವನ್ನು ಕೈಗೊಂಡಿದೆ. ಎಸ್‌ಬಿಐ, ಅನಿಲ್ ಅಂಬಾನಿ ಹಾಗೂ ಕಂಪನಿಯನ್ನು ಜೂ.13ರಂದು ‘ವಂಚಕ’ ಎಂದು ವರ್ಗೀಕರಿಸಿ, ಆರ್‌ಬಿಐಗೆ ವರದಿ ನೀಡಿತ್ತು.

ಈ ಸುದ್ದಿಯನ್ನೂ ಓದಿ: Prakash Raj: ಬೆಟ್ಟಿಂಗ್ ಆ್ಯಪ್‌‌ ಹಗರಣ- ಇಡಿ ವಿಚಾರಣೆಗೆ ನಟ ಪ್ರಕಾಶ್ ರಾಜ್ ಹಾಜರು

ರಾಷ್ಟ್ರೀಯ ವಸತಿ ಬ್ಯಾಂಕ್, ಭಾರತೀಯ ಭದ್ರತಾ ಮಂಡಳಿ (ಸೆಬಿ), ರಾಷ್ಟ್ರೀಯ ಹಣಕಾಸು ವರದಿ ಪ್ರಾಧಿಕಾರ (ಎನ್‌ಎಫ್‌ಆರ್‌ಎ), ಬ್ಯಾಂಕ್ ಆಫ್ ಬರೋಡಾ ಸೇರಿದಂತೆ ಹಲವು ನಿಯಂತ್ರಕ ಮತ್ತು ಹಣಕಾಸು ಸಂಸ್ಥೆಗಳಿಂದ ಪಡೆದ ಮಾಹಿತಿ ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ ಎರಡು ಎಫ್‌ಐಆರ್‌ಗಳನ್ನು ಆಧರಿಸಿ ಜಾರಿ ನಿರ್ದೇಶನಾಲಯ ಕ್ರಮ ಕೈಗೊಂಡಿದೆ. ತನಿಖೆಯ ಭಾಗವಾಗಿ ಅನಿಲ್ ಅಂಬಾನಿ ಗುಂಪಿನೊಂದಿಗೆ ಸಂಪರ್ಕ ಹೊಂದಿರುವ ಹಿರಿಯ ವ್ಯವಹಾರ ಕಾರ್ಯನಿರ್ವಾಹಕರನ್ನು ಸಹ ವಿಚಾರಣೆಗೆ ಒಳಪಡಿಸಲಾಗಿದೆ.