ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಿಜೆಪಿ ಬೆಂಬಲಕ್ಕೆ ನಿಂತ ಅಣ್ಣಾಮಲೈ; ದೆಹಲಿ ಪೊಲೀಸರ ಕ್ರಮದ ವಿರುದ್ಧ ವಾಗ್ದಾಳಿ

Annamalai Backs CJP: ಬೆಂಬಲಕ್ಕೆ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಸಿಜೆಪಿಯ ಬೆಂಬಲಕ್ಕೆ ನಿಂತಿದ್ದಾರೆ. ಸಿಜೆಪಿ ನಾಯಕರನ್ನು ಇನ್ನೂ ನ್ಯಾಯಾಂಗ ಬಂಧನದಲ್ಲಿ ಇರಿಸಿರುವ ಕ್ರಮದ ಬಗ್ಗೆ ಅಣ್ಣಾಮಲೈ ಪ್ರಶ್ನೆ ಎತ್ತಿದ್ದಾರೆ. ಕಾನೂನಿನ ಪ್ರಕಾರ ನಡೆದುಕೊಳ್ಳಲಾಗುತ್ತಿದೆಯೇ ಎಂಬ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಸಿಜೆಪಿ ಬೆಂಬಲಕ್ಕೆ ನಿಂತ ಕೆ. ಅಣ್ಣಾಮಲೈ

ಕೆ. ಅಣ್ಣಾಮಲೈ (ಸಂಗ್ರಹ ಚಿತ್ರ) -

Priyanka P
Priyanka P Oct 21, 2026 1:40 PM

ಚೆನ್ನೈ, ಅ.21: ಕಾಕ್ರೋಚ್ ಜನತಾ ಪಾರ್ಟಿ (CJP) ಯ ಬೆಂಬಲಕ್ಕೆ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ (K. Annamalai) ಅವರು ನಿಂತಿದ್ದಾರೆ. ಪಕ್ಷದ ನಾಯಕರಾದ ಸೌರವ್ ದಾಸ್ (Saurav Das) ಮತ್ತು ಆಶುತೋಷ್ ರಂಕಾ ವಿರುದ್ಧ ದೆಹಲಿ ಪೊಲೀಸರು ಪ್ರಕರಣವನ್ನು ನಿರ್ವಹಿಸುತ್ತಿರುವ ರೀತಿಯನ್ನು ಪ್ರಶ್ನಿಸಿದ್ದಾರೆ. ಜೂನ್‌ನಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ್ದ ಅಣ್ಣಾಮಲೈ, ಬಳಿಕ ವಿ ದಿ ಲೀಡರ್ಸ್ ಎಂಬ ತಮ್ಮದೇ ರಾಜಕೀಯ ಸಂಘಟನೆಯನ್ನು ಆರಂಭಿಸಿದ್ದಾರೆ. ಸಿಜೆಪಿ ನಾಯಕರನ್ನು ಇನ್ನೂ ನ್ಯಾಯಾಂಗ ಬಂಧನದಲ್ಲಿ ಇರಿಸಿರುವ ಕ್ರಮದ ಬಗ್ಗೆ ಅಣ್ಣಾಮಲೈ ಪ್ರಶ್ನೆ ಎತ್ತಿದ್ದಾರೆ. ಕಾನೂನಿನ ಪ್ರಕಾರ ನಡೆದುಕೊಳ್ಳಲಾಗುತ್ತಿದೆಯೇ ಎಂಬ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಸಿಜೆಪಿ ಪ್ರತಿಭಟನೆ ಮಾಡುವ ರೀತಿಯನ್ನು ತಾನು ಒಪ್ಪದೇ ಇರಬಹುದು. ಆದರೆ, ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ಆ ಪಕ್ಷ ಎತ್ತಿರುವ ಪ್ರಶ್ನೆಗಳು ಸರಿಯಾಗಿವೆ. ಅದಕ್ಕೆ ತನ್ನ ಬೆಂಬಲವಿದೆ ಎಂದು ಅಣ್ಣಾಮಲೈ ಹೇಳಿದ್ದಾರೆ. ದೆಹಲಿ ಪೊಲೀಸರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡಿದ್ದಾರೆ. ಹಾಗೆಯೇ ನ್ಯಾಯಾಧೀಶರು ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ ಎಂದು ಅಣ್ಣಾಮಲೈ ಆರೋಪಿಸಿದರು.

ಸಿಜೆಪಿ ಪಕ್ಷದ ಪ್ರತಿಭಟನೆಗಳ ಬಗ್ಗೆ ಭಿನ್ನಾಭಿಪ್ರಾಯಗಳಿದ್ದರೂ, ಅದರ ಆಧಾರದ ಮೇಲೆ ಅಧಿಕಾರಿಗಳು ಆ ಪಕ್ಷದ ನಾಯಕರನ್ನು ನಡೆಸಿಕೊಳ್ಳುವ ರೀತಿ ನಿರ್ಧಾರವಾಗಬಾರದು ಎಂದು ಅಣ್ಣಾಮಲೈ ಹೇಳಿದರು. ಇದಕ್ಕೆ ಸರ್ಕಾರವೇ ಉತ್ತರ ನೀಡಬೇಕು. ಸಿಜೆಪಿ ನಾಯಕರನ್ನು ಒಂದು ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಇಂತಹ ಕ್ರಮಗಳಿಂದ ಸಿಜೆಪಿ ನಾಯಕರನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ. ಬದಲಾಗಿ, ಅವರ ಹೋರಾಟದ ಹೆಚ್ಚಾಗಿ, ಅವರು ಇನ್ನಷ್ಟು ಬಲಿಷ್ಠರಾಗುತ್ತಾರೆ ಎಂದು ಅವರು ಹೇಳಿದರು.

ಸಿಜೆಪಿ ನಾಯಕರಿಗೆ ಮತ್ತೊಂದು ಆಘಾತ: ವಿಚಾರಣೆಗೂ ಮೊದಲೇ ದಾಖಲಾಗಿರುವ ಪ್ರಕರಣ ಕ್ರೈಮ್ ಬ್ರಾಂಚ್‌ಗೆ ವರ್ಗಾವಣೆ

ಪೊಲೀಸರು ಈ ಪ್ರಕರಣವನ್ನು ನಿರ್ವಹಿಸಿದ ರೀತಿಯನ್ನು ಅಣ್ಣಾಮಲೈ ಟೀಕಿಸಿದರು. ಪೊಲೀಸರು ಈ ಪ್ರಕರಣವನ್ನು ಸರಿಯಾಗಿ ನಿರ್ವಹಿಸಿಲ್ಲ. ತಮ್ಮ ಕರ್ತವ್ಯವನ್ನು ನಿಭಾಯಿಸುವಲ್ಲಿ ತಪ್ಪು ಮಾಡಿದ್ದಾರೆ ಎಂದು ಅಣ್ಣಾಮಲೈ ಟೀಕಿಸಿದ್ದಾರೆ.

ಇದೇ ವೇಳೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಪ್ರಶ್ನಿಸುವ ಸಂಪೂರ್ಣ ಹಕ್ಕನ್ನು ಹೊಂದಿದ್ದಾರೆ ಎಂದು ಅಣ್ಣಾಮಲೈ ಹೇಳಿದರು. ಆದರೆ, ಸಾಂವಿಧಾನಿಕ ಸಂಸ್ಥೆಗಳಿಗೆ ಧಕ್ಕೆಯಾಗುವ ರೀತಿಯಲ್ಲಿ ನಡೆದುಕೊಳ್ಳಬಾರದು ಎಂದೂ ಅವರು ಎಚ್ಚರಿಸಿದರು.

ದೆಹಲಿ ನ್ಯಾಯಾಲಯವು ಸಿಜೆಪಿ ನಾಯಕರಾದ ದಾಸ್ ಮತ್ತು ರಂಕಾ ಅವರ ನ್ಯಾಯಾಂಗ ಬಂಧನವನ್ನು ಇನ್ನೂ ಎರಡು ದಿನಗಳ ಕಾಲ ವಿಸ್ತರಿಸಿದ ಒಂದು ದಿನದ ಬಳಿಕ ಅಣ್ಣಾಮಲೈ ಈ ಹೇಳಿಕೆ ನೀಡಿದ್ದಾರೆ. ಪ್ರತಿಭಟನೆ ನಡೆಸಲು ಇನ್ನು ಅಧಿಕೃತವಾಗಿ ಅನುಮತಿ ನೀಡದ ಜಂತರ್ ಮಂತರ್ ಪ್ರದೇಶಕ್ಕೆ ಪ್ರವೇಶಿಸಿ, ಕರ್ತವ್ಯದಲ್ಲಿದ್ದ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸಿಜೆಪಿ ನಾಯಕರನ್ನು ವಶಕ್ಕೆ ಪಡೆಯಲಾಗಿತ್ತು.