ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮಮತಾ ಬ್ಯಾನರ್ಜಿಗೆ ಮತ್ತೊಂದು ಆಘಾತ; ಬಂಗಾಳ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ರಾಜೀನಾಮೆ

Trinamool Bengal Chief: ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದ್ದು, ಪಕ್ಷದ ಪಶ್ಚಿಮ ಬಂಗಾಳದ ಅಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ಶನಿವಾರ ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ನಿನ್ನೆ ನಡೆದ ಸಭೆ ಬಳಿಕ ಅವರು ತಮ್ಮ ರಾಜೀನಾಮೆಯನ್ನು ಘೋಷಿಸಿದರು.

ಸಂಗ್ರಹ ಚಿತ್ರ

ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Byanarjee) ಅವರಿಗೆ ಮತ್ತೊಂದು ಹಿನ್ನಡೆಯಾಗಿದ್ದು, ಪಕ್ಷದ ಪಶ್ಚಿಮ ಬಂಗಾಳದ ಅಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ಶನಿವಾರ ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭಾ ಚುನಾವಣಾ ಸೋಲಿನ ನಂತರ ಭಟ್ಟಾಚಾರ್ಯ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಶುಕ್ರವಾರ ಕಾಲಿಘಾಟ್‌ನಲ್ಲಿ ನಡೆದ ಸಭೆಯಲ್ಲಿ ನನಗೆ ನೀಡಲಾದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್‌ನ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ನಾನು ಈ ಮೂಲಕ ರಾಜೀನಾಮೆ ನೀಡುತ್ತಿದ್ದೇನೆ. ಪ್ರಸ್ತುತ ನಾನು ಹೊಂದಿರುವ ಎಲ್ಲಾ ಇತರ ಹುದ್ದೆಗಳಿಗೂ ನಾನು ಈ ಮೂಲಕ ರಾಜೀನಾಮೆ ನೀಡುತ್ತೇನೆ" ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಬಗ್ಗೆ ನನಗೆ ಯಾವಾಗಲೂ ಅತ್ಯುನ್ನತ ಗೌರವವಿರುತ್ತದೆ ಎಂದು ಅವರು ಹೇಳಿದ್ದಾರೆ. ರಾಜೀನಾಮೆ ಬಳಿಕ ಬಂಡಾಯಗಾರರನ್ನು ಅವರು ಭೇಟಿಯಾಗಿದ್ದಾರೆ. ಚಂದ್ರಿಮಾ ಭಟ್ಟಾಚಾರ್ಯ ಅವರ ರಾಜೀನಾಮೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಮಮತಾ ಬ್ಯಾನರ್ಜಿ ಬಣ ಶಾಸಕ ಕುನಾಲ್ ಘೋಷ್, "ಮಮತಾ ಬ್ಯಾನರ್ಜಿ ಅವರ ಸರ್ಕಾರದ ಅವಧಿಯಲ್ಲಿ ನೀಡಿದ್ದ ಉತ್ತಮ ಖಾತೆಗಳನ್ನು ಅವರು ಆನಂದಿಸಿದ್ದರು. ಅಧಿಕಾರ ಹೋದ ಬಳಿಕ ರಾಜೀನಾಮೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಚಂದ್ರಿಮಾ ಭಟ್ಟಾಚಾರ್ಯ ಪಶ್ಚಿಮ ಬಂಗಾಳದ ಮಾಜಿ ಸಚಿವೆಯಾಗಿದ್ದು, ಮಮತಾ ಅವರ ಆಪ್ತ ಸಹಾಯಕರಲ್ಲಿ ಒಬ್ಬರಾಗಿದ್ದರು.

ಮತ್ತೊಂದೆಡೆ, ಮಮತಾ ಬ್ಯಾನರ್ಜಿ ಅವರ ವಿರುದ್ಧ ಸಿಡಿದೆದ್ದಿರುವ ಬಂಡುಕೋರರ ಬಣವೊಂದು ಕೋಲ್ಕತ್ತದಲ್ಲಿರುವ ಪಕ್ಷದ ಮುಖ್ಯ ಕಚೇರಿಯನ್ನು ದಿಢೀರ್ ಆಗಿ ತನ್ನ ವಶಕ್ಕೆ ಪಡೆದುಕೊಂಡಿದೆ. ನಾಯಕತ್ವದ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದ ಬಂಡುಕೋರ ನಾಯಕರು ಹಾಗೂ ಅವರ ನೂರಾರು ಬೆಂಬಲಿಗರು ಏಕಾಏಕಿ ತೃಣಮೂಲ ಭವನಕ್ಕೆ ಮುತ್ತಿಗೆ ಹಾಕಿದ್ದಾರೆ. ಕಚೇರಿಯಲ್ಲಿದ್ದ ಭದ್ರತಾ ಸಿಬ್ಬಂದಿಯನ್ನು ಬದಿಗೆ ಸರಿಸಿ ಒಳಪ್ರವೇಶಿಸಿದ ಈ ಗುಂಪು, ಕಟ್ಟಡದ ಸಂಪೂರ್ಣ ನಿಯಂತ್ರಣವನ್ನು ತಮ್ಮ ಕೈಗೆ ತೆಗೆದುಕೊಂಡಿದೆ.

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಮೇಲೂ ಮೊಟ್ಟೆ ದಾಳಿ: ವಿಡಿಯೊ ವೈರಲ್‌

ಕಚೇರಿಯನ್ನು ವಶಪಡಿಸಿಕೊಂಡಿರುವ ಬಂಡುಕೋರರ ನಡೆಯನ್ನು ಮಮತಾ ಬ್ಯಾನರ್ಜಿ ಅವರ ನಿಷ್ಠಾವಂತ ಬಣ ತೀವ್ರವಾಗಿ ಖಂಡಿಸಿದೆ. ಪಕ್ಷದ ಶಿಸ್ತು ಉಲ್ಲಂಘಿಸಿದವರ ವಿರುದ್ಧ ಕಠಿಣ ಕಾನೂನು ಮತ್ತು ಶಿಸ್ತುಕ್ರಮ ಜರುಗಿಸುವ ಎಚ್ಚರಿಕೆಯನ್ನು ನಾಯಕರು ನೀಡಿದ್ದಾರೆ. ಕಚೇರಿಯನ್ನು ಮರಳಿ ತಮ್ಮ ಸುಪರ್ದಿಗೆ ಪಡೆಯಲು ಪೊಲೀಸ್ ಕಾರ್ಯಾಚರಣೆ ನಡೆಸುವುದು ಅಥವಾ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆಗಳ ಬಗ್ಗೆ ಪಕ್ಷದ ಉನ್ನತ ಮಟ್ಟದ ನಾಯಕರು ತುರ್ತು ಸಭೆ ನಡೆಸಿ ಚರ್ಚಿಸುತ್ತಿದ್ದಾರೆ.

Vishakha Bhat Heggar

View all posts by this author