Pahalgam Attack: ದಾಳಿ ಪ್ರತೀಕಾರ; ಕಾಶ್ಮೀರದಲ್ಲಿ ಮತ್ತೊಬ್ಬ ಭಯೋತ್ಪಾದಕನ ಮನೆ ಧ್ವಂಸ
ಜಮ್ಮು ಕಾಶ್ಮೀರದಲ್ಲಿ ನಡೆದ ನರಮೇಧಕ್ಕೆ ಭಾರತ ಈಗ ಪ್ರತೀಕಾರ ತೆಗೆದುಕೊಳ್ಳುತ್ತಿದೆ. ಉಗ್ರರ ಮನೆಗಳನ್ನು ಹುಡುಕಿ ಧ್ವಂಸ ಮಾಡಲಾಗುತ್ತಿದೆ. ಕಾಶ್ಮೀರದಲ್ಲಿ ಮತ್ತೊಬ್ಬ ಶಂಕಿತ ಭಯೋತ್ಪಾದಕನ ಮನೆಯ ಮೇಲೆ ಬಾಂಬ್ ದಾಳಿ ನಡೆಸಿದೆ. ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಇತರರ ವಿರುದ್ಧವೂ ಇದೇ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ (Pahalgam Terror Attack) ನಡೆದ ನರಮೇಧಕ್ಕೆ ಭಾರತ ಈಗ ಪ್ರತೀಕಾರ ತೆಗೆದುಕೊಳ್ಳುತ್ತಿದೆ. ಉಗ್ರರ ಮನೆಗಳನ್ನು ಹುಡುಕಿ ಧ್ವಂಸ ಮಾಡಲಾಗುತ್ತಿದೆ. ಕಾಶ್ಮೀರದಲ್ಲಿ ಮತ್ತೊಬ್ಬ ಶಂಕಿತ ಭಯೋತ್ಪಾದಕನ ಮನೆಯ ಮೇಲೆ ಬಾಂಬ್ ದಾಳಿ ನಡೆಸಿದೆ. ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಕಲಾರೂಸ್ ಪ್ರದೇಶದಲ್ಲಿರುವ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಫಾರೂಕ್ ಅಹ್ಮದ್ ತಡ್ವಾ ಎಂಬಾ ಉಗ್ರನ ಮನೆ ಮೇಲೆ ಸೇನೆ ದಾಳಿ ನಡೆಸಿದೆ. ಕಳೆದ 48 ಗಂಟೆಗಳಲ್ಲಿ ಆರು ಭಯೋತ್ಪಾದಕರು ಅಥವಾ ಅವರ ಸಹಚರರ ಮನೆಗಳನ್ನು ಧ್ವಂಸಗೊಳಿಸಲಾಗಿದ್ದು, ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಇತರರ ವಿರುದ್ಧವೂ ಇದೇ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 48 ಗಂಟೆಗಳಲ್ಲಿ ಆರು ಭಯೋತ್ಪಾದಕರು ಅಥವಾ ಅವರ ಸಹಚರರ ಮನೆಗಳನ್ನು ಧ್ವಂಸಗೊಳಿಸಲಾಗಿದ್ದು, ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಇತರರ ವಿರುದ್ಧವೂ ಇದೇ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಷ್ಟ್ರದ ಭದ್ರತೆಗೆ ಕುತ್ತು ತರುವ ಅಥವಾ ಭಯೋತ್ಪಾದಅ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಗುರುತಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆಯನ್ನು ಅವರು ನೀಡಿದರು.
ಉಗ್ರರನ್ನು ಬೇಟೆಯಾಡುತ್ತಿರುವ ಸೇನೆ ಶುಕ್ರವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಲಷ್ಕರ್-ಎ-ತೈಬಾ (ಎಲ್‌ಇಟಿ) ಕಮಾಂಡರ್ ಸೇರಿದಂತೆ ಐದು ಭಯೋತ್ಪಾದಕರ ಮನೆಗಳನ್ನು ಪುಡಿಗಟ್ಟಿತ್ತು. ಶೋಪಿಯಾನ್, ಕುಲ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಎಲ್‌ಇಟಿ ಕಾರ್ಯಕರ್ತರು ಮತ್ತು ಪಹಲ್ಗಾಮ್ ದಾಳಿಗೆ ಸಂಬಂಧಿಸಿದ ಶಂಕಿತರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತಿವೆ. ಶೋಪಿಯಾನ್‌ನ ಚೋಟಿಪೋರಾ ಗ್ರಾಮದಲ್ಲಿ, ಎಲ್‌ಇಟಿ ಕಮಾಂಡರ್ ಶಾಹಿದ್ ಅಹ್ಮದ್ ಕುಟ್ಟೆ ಮನೆಯನ್ನು ನೆಲಸಮ ಮಾಡಲಾಗಿದೆ. ಕುಟ್ಟೆ ಕಳೆದ ಮೂರರಿಂದ ನಾಲ್ಕು ವರ್ಷಗಳಿಂದ ಭಯೋತ್ಪಾದನಾ ಸಂಬಂಧಿತ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದಾನೆ ಮತ್ತು ರಾಷ್ಟ್ರವಿರೋಧಿ ಕಾರ್ಯಾಚರಣೆಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Pahalgam Attack: ಪಹಲ್ಗಾಮ್ ದಾಳಿಯ ತನಿಖೆ ಹೊಣೆ NIA ಹೆಗಲಿಗೆ; ಉಗ್ರರಿಗೆ ನಡುಕ ಶುರು
ಗುರುವಾರ ರಾತ್ರಿ, ಪಹಲ್ಗಾಮ್ ದಾಳಿಯ ಹಿಂದಿನ ಇಬ್ಬರು ಎಲ್‌ಇಟಿ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್ ಮತ್ತು ಆಸಿಫ್ ಶೇಖ್ ಮನೆಗಳು ಪ್ರತ್ಯೇಕ ಸ್ಫೋಟಗಳಲ್ಲಿ ಧ್ವಂಸಗೊಂಡಿದ್ದವು. ಕೆಲವು ಸ್ಫೋಟಕಗಳನ್ನು ಉಗ್ರರ ಮನೆಗಳಲ್ಲಿ ಇರಿಸಿ ಅದನ್ನು ಸ್ಫೋಟಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ