Anurag Kashyap: ಕುಟುಂಬದ ಮಹಿಳೆಯರನ್ನು ಬಿಟ್ಟು ಬಿಡಿ; ಬ್ರಾಹ್ಮಣ ಮೈಮೇಲೆ ಮೂತ್ರ ವಿಸರ್ಜನೆ ಹೇಳಿಕೆಗೆ ಕ್ಷಮೆಯಾಚಿಸಿದ ಅನುರಾಗ್ ಕಶ್ಯಪ್
ಬ್ರಾಹ್ಮಣ ಸಮುದಾಯದ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ ನಂತರ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಇದೀಗ ಅನುರಾಗ್ ಕಶ್ಯಪ್ ತಾವಾಡಿದ ಮಾತುಗಳಿಗೆ ಕ್ಷಮೆಯನ್ನು ಕೇಳಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅನುರಾಗ್ ಕಶ್ಯಪ್ ಇದು ನನ್ನ ಕ್ಷಮಾಪಣೆ ಎಂದು ಹೇಳಿದ್ದಾರೆ.
-
ಮುಂಬೈ: ಬಾಲಿವುಡ್ ನಿರ್ದೇಶಕ, ನಟ ಅನುರಾಗ್ ಕಶ್ಯಪ್ (Anurag Kashyap) ಸದಾ ಒಂದೆಲ್ಲಾ ಒಂದು ವಿವಾದಗಳನ್ನು ಮೈಮೇಲೆ ಎಳೆದು ಕೊಳ್ಳುತ್ತಲೇ ಇರುತ್ತಾರೆ. ಇದೀಗ ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ?'' ಎಂದು ಅವರು ಸೋಶೀಯಲ್ ಮೀಡಿಯಾದಲ್ಲಿ ಪ್ರಶ್ನಿಸುವ ಮೂಲಕ ಉದ್ಧಟತನ ಮೆರೆದಿದ್ದಾರೆ. ಸದ್ಯ ಅವರ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಬ್ರಾಹ್ಮಣ ಸಮುದಾಯದ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ ನಂತರ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಇದೀಗ ಅನುರಾಗ್ ಕಶ್ಯಪ್ ತಾವಾಡಿದ ಮಾತುಗಳಿಗೆ ಕ್ಷಮೆಯನ್ನು ಕೇಳಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅನುರಾಗ್ ಕಶ್ಯಪ್ ಇದು ನನ್ನ ಕ್ಷಮಾಪಣೆ. ನಾನು ಹೇಳಿದ ಮಾತುಗಳಿಗೆ ಅಲ್ಲ, ಬದಲಿಗೆ ನನ್ನ ಪೋಸ್ಟ್‌ನಲ್ಲಿರುವ ಒಂದು ಸಾಲನ್ನು ಮಾತ್ರ ಎತ್ತಿಕೊಂಡು ದ್ವೇಷ ಹರಡುತ್ತಿದ್ದಾರೆ ಎಂದು ಬರೆದರು.
ಸಂಸ್ಕಾರವಂತರು ಎಂದು ಕರೆಸಿಕೊಳ್ಳುವ ಸಮುದಾಯದವರು ಹೆಂಡತಿ, ಮಗಳು, ಗೆಳೆಯರ ಅತ್ಯಾಚಾರ, ಕೊಲೆಯ ಬೆದರಿಕೆಯನ್ನು ಹಾಕುತ್ತಿದ್ದಾರೆ. ಆದರೆ ಹೇಳಿಕೆಗಳು, ಮಾತುಗಳು, ಈ ರೀತಿಯ ಬೆದರಿಕೆಗೆ ಅರ್ಹವಲ್ಲ, ಹೇಳಿರುವ ಮಾತುಗಳನ್ನು ವಾಪಸ್ ಪಡೆಯಲು ಆಗುವುದಿಲ್ಲ, ನಾನು ಅದನ್ನು ವಾಪಸ್ ಪಡೆಯುವುದೂ ಇಲ್ಲ ಎಂದು ಅನುರಾಗ್ ಕಶ್ಯಪ್ ಹೇಳಿದ್ದಾರೆ. ನಿಮಗೆ ಬೈಯ್ಯಬೇಕು ಎಂದು ಅನ್ನಿಸಿದರೆ ನನಗೆ ಬೈಯಿರಿ, ನನ್ನ ಮೇಲೆ ಅವಾಚ್ಯ ಶಬ್ದವನ್ನು ಉಪಯೋಗಿಸಿ. ಪಾಪದ ಮಹಿಳೆಯನ್ನು ಬಿಟ್ಟು ಬಿಡಿ . ಧರ್ಮಗ್ರಂಥಗಳು ಸಹ ಮನುಸ್ಮೃತಿಯನ್ನು ಮಾತ್ರವಲ್ಲ, ಇಷ್ಟು ಸಭ್ಯತೆಯನ್ನು ಕಲಿಸುತ್ತವೆ. ನೀವು ನಿಜವಾಗಿಯೂ ಯಾವ ರೀತಿಯ ಬ್ರಾಹ್ಮಣರು ಎಂದು ನೀವೇ ನಿರ್ಧರಿಸಿ. ನನ್ನ ಮಟ್ಟಿಗೆ ಹೇಳುವುದಾದರೆ, ನಾನು ನನ್ನ ಕ್ಷಮೆಯಾಚಿಸುತ್ತೇನೆ” ಎಂದಿದ್ದಾರೆ.
ಈ ಸುದ್ದಿಯನ್ನೂ ಓದಿ: ʼArrest Anurag Kashyapʼ: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ ಎಂದ ಅನುರಾಗ್ ಕಶ್ಯಪ್; ದೂರು ದಾಖಲು
ಏನಿದು ವಿವಾದ?
ಮಹಾರಾಷ್ಟ್ರದ ಸಾಮಾಜಿಕ ಕಾರ್ಯಕರ್ತರಾದ ಜ್ಯೋತಿರಾವ್ ಫುಲೆ ಮತ್ತು ಸಾವಿತ್ರಿಭಾಯಿ ಫುಲೆ ಅವರ ಜೀವನವನ್ನಾಧರಿಸಿ ಹಿಂದಿಯಲ್ಲಿ 'ಫುಲೆ' ಚಿತ್ರ ನಿರ್ಮಾಣವಾಗಿದೆ. ರೋಹನ್ ಸಿಪ್ಪಿ ನಿರ್ದೇಶನದ ಈ ಚಿತ್ರದಲ್ಲಿನ ವಿವದಾತ್ಮಕ, ಜಾತಿ ವ್ಯವಸ್ಥೆಯನ್ನು ಸೂಚಿಸುವ ಭಾಗಗಳನ್ನು ತೆಗೆದು ಹಾಕುವಂತೆ ಸೆನ್ಸಾರ್ ಮಂಡಳಿ ಸೂಚಿಸಿತ್ತು. ಈ ಬಗ್ಗೆ ಕಿಡಿ ಕಾರಿದ ಅನುರಾಗ್ ಕಶ್ಯಪ್ ನಾಲಗೆ ಹರಿಯಬಿಟ್ಟಿದ್ದರು. ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ? ಎಂದು ಅವರು ಹೇಳಿದ್ದರು. ಇದು ಸಾಕಷ್ಟು ವಿವಾದವನ್ನು ಸೃಷ್ಟಿಸಿತ್ತು.