Anushka Sharma-Virat Kohli: ನಿವೃತ್ತಿ ಘೋಷಣೆ ಬೆನ್ನಲ್ಲೇ ಪ್ರೇಮಾನಂದ ಗುರೂಜಿ ಭೇಟಿ ಮಾಡಿದ ವಿರುಷ್ಕಾ ದಂಪತಿ
ಟೀಮ್ ಇಂಡಿಯಾದ ಆಟಗಾರ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಉತ್ತರ ಪ್ರದೇಶದ ವೃಂದಾವನಕ್ಕೆ ಭೇಟಿ ನೀಡಿದ್ದಾರೆ.. ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ವೃಂದಾವನದ ಸ್ವಾಮಿ ಪ್ರೇಮಾನಂದ್ ಮಹರಾಜ್ರನ್ನು ಭೇಟಿಯಾಗಿ ಆರ್ಶೀವಾದ ಪಡೆದಿದ್ದಾರೆ.



ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಬ್ಯಾಟರ್ ವಿರಾಟ್ ಕೊಹ್ಲಿ ನಿನ್ನೆ ಬೆಳಗ್ಗೆ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ವಿರಾಟ್ ಕೊಹ್ಲಿ ತನ್ನ 14ವರ್ಷಗಳ ಟೆಸ್ಟ್ ಕ್ರಿಕೆಟ್ ಜರ್ನಿಗೆ ವಿದಾಯ ಹೇಳಿದ್ದಾರೆ.

ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ವೃಂದಾವನದ ಪ್ರೇಮಾನಂದ ಮಹಾರಾಜ್ ಅವರ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಪೋಟೋದಲ್ಲಿ ವಿರಾಟ್ ಮತ್ತು ಅನುಷ್ಕಾ ಸ್ವಾಮಿ ಪ್ರೇಮಾನಂದ ಅವರ ಮುಂದೆ ಕುಳಿತು ಆಶಿರ್ವಾದ ಪಡೆದು ಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಸಂತ ಪ್ರೇಮಾನಂದ ಮಹಾರಾಜರನ್ನು ಭೇಟಿಯಾಗಿದ್ದು ಇದೇ ಮೊದಲಲ್ಲ ಪತ್ನಿ ಜೊತೆ ಇದು ಅವರ ಮೂರನೇ ಭೇಟಿ. ಇದಕ್ಕೂ ಮೊದಲು ಕೊಹ್ಲಿ ಜನವರಿ 2025ರಲ್ಲಿ ಪ್ರೇಮಾನಂದ ಮಹಾರಾಜರನ್ನು ಭೇಟಿಯಾಗಿದ್ದರು. ಅದರ ಜೊತೆ ಕೊಹ್ಲಿ ತಮ್ಮ ಕುಟುಂಬ ದೊಂದಿಗೆ ಜನವರಿ 4, 2023ರಂದು ಕೂಡ ವೃಂದಾವನಕ್ಕೆ ಭೇಟಿ ನೀಡಿ ಆಧ್ಯಾತ್ಮಿಕ ಗುರುಗಳ ಆಶೀರ್ವಾದ ಪಡೆದುಕೊಂಡಿದ್ದರು.

ಸದ್ಯ ಬಾಲಿವುಡ್ ನಟಿ, ಪತ್ನಿ ಅನುಷ್ಕಾ ಶರ್ಮಾ ಜೊತೆ ಕೊಹ್ಲಿ ಬೆಳಗ್ಗೆಯೇ ಸಂತ ಪ್ರೇಮಾನಂದ ಮಹಾರಾಜರ ಆಶ್ರಮ ತಲುಪಿದ್ದು ಆಧ್ಯಾತ್ಮಿಕ ಗುರುವನ್ನು ಸಂದರ್ಶಿಸಿ, ಆಶೀರ್ವಾದ ಪಡೆದು ಕೊಂಡಿದ್ದಾರೆ. ಈ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಬಹಳಷ್ಟು ವೈರಲ್ ಆಗುತ್ತಿದ್ದು ಕೊಯ್ಲಿ ಅಭಿಮಾನಿಗಳು ಮೆಚ್ಚುಗೆಯ ಪ್ರತಿಕ್ರಿಯೆ ನೀಡಿದ್ದಾರೆ.

ಕಿಂಗ್ ಕೊಹ್ಲಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಇದೀಗ 14 ವರ್ಷಗಳ ತಮ್ಮ ಟೆಸ್ಟ್ ಕೆರಿಯರ್ಗೆ ವಿರಾಮ ಹೇಳಿರುವ ಕಿಂಗ್ ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ ಮಾತ್ರ ಮುಂದುವರೆಯುವುದಾಗಿ ತಿಳಿಸಿದ್ದಾರೆ.ಇನ್ನು ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟರ್ ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದು ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿರುವುದಕ್ಕೆ ವಿಶ್ವದ ನಾನಾ ಮೂಲೆಯಿಂದ ಕ್ರಿಕೆಟ್ ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ.