Operation Sindoor: ಭವಿಷ್ಯದಲ್ಲಿ ನಡೆಯುವ ಭಯೋತ್ಪಾದನೆಯನ್ನು ಯುದ್ಧ ಕೃತ್ಯವೆಂದು ಪರಿಗಣಿಸಲಾಗುವುದು ; ಪಾಕ್‌ಗೆ ಖಡಕ್ ಎಚ್ಚರಿಕೆ ನೀಡಿದ ಭಾರತ
ಪಾಕಿಸ್ತಾನದಿಂದ ಕ್ಷಿಪಣಿ ಹಾಗೂ ಡ್ರೋನ್‌ಗಳ ಮೂಲಕ ದಾಳಿ ಹೆಚ್ಚುತ್ತಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ಸಭೆ ನಡೆದಿದೆ. ಸಭೆ ಬಳಿಕ ಕೇಂದ್ರ ಸರ್ಕಾರ ಪಾಕಿಸ್ತಾನದಿಂದ ಭವಿಷ್ಯದಲ್ಲಿ ಯಾವುದೇ ಭಯೋತ್ಪಾದಕ ಕೃತ್ಯ ನಡೆದರೆ ಅದನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುತ್ತದೆ ಮತ್ತು ಭಾರತವು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸುತ್ತದೆ ಎಂಬ ಸಂದೇಶವನ್ನು ರವಾನಿಸಿದೆ.


ನವದೆಹಲಿ: ಪಾಕಿಸ್ತಾನದಿಂದ ಕ್ಷಿಪಣಿ ಹಾಗೂ ಡ್ರೋನ್‌ಗಳ ಮೂಲಕ (Operation Sindoor) ದಾಳಿ ಹೆಚ್ಚುತ್ತಿದೆ. ಪ್ರಧಾನಿ ಮೋದಿ (Narendra Modi) ನೇತೃತ್ವದಲ್ಲಿ ಇಂದು ಸಭೆ ನಡೆದಿದೆ. ಸಭೆ ಬಳಿಕ ಕೇಂದ್ರ ಸರ್ಕಾರ ಪಾಕಿಸ್ತಾನದಿಂದ ಭವಿಷ್ಯದಲ್ಲಿ ಯಾವುದೇ ಭಯೋತ್ಪಾದಕ ಕೃತ್ಯ ನಡೆದರೆ ಅದನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುತ್ತದೆ ಮತ್ತು ಭಾರತವು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸುತ್ತದೆ ಎಂಬ ಸಂದೇಶವನ್ನು ರವಾನಿಸಿದೆ. ಕಳೆದ ಮೂರು ರಾತ್ರಿಗಳಿಂದ ಪಾಕಿಸ್ತಾನವು ಉತ್ತರ ಭಾರತದ ಮಿಲಿಟರಿ ನೆಲೆಗಳು ಸೇರಿದಂತೆ ನಾಗರಿಕ ಪ್ರದೇಶಗಳ ಮೇಲೆ ದಾಳಿ ನಡೆಸಲು ಯತ್ನಿಸಿದೆ. ಅದಕ್ಕೆ ಪ್ರತಿಯಾಗಿ ಭಾರತ ಪಾಕಿಸ್ತಾನದ 4 ವಾಯುನೆಲೆಗಳನ್ನು ಭಾರತ ನಾಶ ಪಡಿಸಿದೆ.
ಇದೀಗ ಭಾರತೀಯ ಸೇನಾ ಮುಖ್ಯಸ್ಥರ ಜೊತೆ ಮೀಟಿಂಗ್ ನಡೆಸಿರುವ ಮೋದಿ, ಈ ನಿರ್ಧಾರವನ್ನು ರವಾನಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ಸಂಘರ್ಷ (Operation Sindoor) ಏರ್ಪಟ್ಟಿದೆ. ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರ ಹಾಗೂ ಪಂಜಾಬ್‌ನ ಹಲವು ನಗರಗಳ ಮೇಲೆ ಡ್ರೋನ್ ದಾಳಿಗೆ ಯತ್ನಿಸಿದ್ದಕ್ಕೆ ಪ್ರತಿಯಾಗಿ, ಮೇ 8 ಮತ್ತು 9 ರ ಮಧ್ಯರಾತ್ರಿ ಭಾರತೀಯ ಸೇನೆಯು ನಿಯಂತ್ರಣ ರೇಖೆ ಬಳಿ ಇರುವ ಭಯೋತ್ಪಾದಕ ನೆಲೆಗಳ ಮೇಲೆ ಸಂಘಟಿತ ದಾಳಿ ನಡೆಸಿ ನಾಶಪಡಿಸಿದೆ ಎಂದು ಸೇನೆ ತಿಳಿಸಿದೆ.
ಆಪರೇಷನ್ ಸಿಂದೂರ್' ಅಡಿಯಲ್ಲಿ ಭಾರತೀಯ ಸಶಸ್ತ್ರ ಪಡೆಗಳು ಈ ದಾಳಿ ನಡೆಸಿದ್ದು, ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಲಾಗಿದೆ ಎಂದು ADG PI ತಿಳಿಸಿದೆ. "ಆಪರೇಷನ್ ಸಿಂದೂರ್. ಭಾರತೀಯ ಸೇನೆ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದೆ," ಎಂದು ADGPI ಎಕ್ಸ್ ಪೋಸ್ಟ್‌ನಲ್ಲಿ ಘೋಷಿಸಿದೆ.
ಈ ಸುದ್ದಿಯನ್ನೂ ಓದಿ: Operation Sindoor: ಪಾಕಿಸ್ತಾನದ ಡ್ರೋನ್‌ಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ; ವಿಡಿಯೋ ನೋಡಿ
ಪಾಕಿಸ್ತಾನವು ಗಡಿಯುದ್ದಕ್ಕೂ ರಾತ್ರಿಯಿಡೀ ಶೆಲ್ ದಾಳಿ ಮುಂದುವರಿಸಿದೆ. ಕುಪ್ವಾರಾದಲ್ಲಿ ಬ್ಲ್ಯಾಕ್‌ಔಟ್ ಜಾರಿಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಹಿರಿಯ ಅಧಿಕಾರಿಯೊಬ್ಬರು ಶೆಲ್ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಹಲವರಿಗೆ ಗಾಯಗಳಾಗಿವೆ ಎಂದಯ ತಿಳಿದು ಬಂದಿದೆ. ಪ್ರತೀಕಾರವಾಗಿ ಭಾರತವು ಡ್ರೋನ್‌ಗಳು ಮತ್ತು ಕ್ಷಿಪಣಿಗಳೊಂದಿಗೆ ಪಾಕಿಸ್ತಾನದ ಇಸ್ಲಾಮಾಬಾದ್, ಲಾಹೋರ್ ಮತ್ತು ರಾವಲ್ಪಿಂಡಿಯ ಮೇಲೆ ದಾಳಿ ಮಾಡಿದೆ. ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆ, ಪಂಜಾಬ್‌ನ ಶೋರ್ಕೋಟ್‌ನ ರಫಿಕಿ ವಾಯುನೆಲೆ ಮತ್ತು ಪಂಜಾಬ್‌ನ ಚಕ್ವಾಲ್‌ನಲ್ಲಿರುವ ಮುರಿಯದ್ ವಾಯುನೆಲೆ ಸೇರಿದಂತೆ ಪಾಕಿಸ್ತಾನದ ಮೂರು ವಾಯುನೆಲೆಗಳ ಮೇಲೆ ದಾಳಿ ಮಾಡಲಾಗಿದೆ.