ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಅಬಕಾರಿ ಹಗರಣ: ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಖುಲಾಸೆ; CBIಗೆ ಕೋರ್ಟ್‌ ತರಾಟೆ!

Delhi excise policy case: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಷ್ಟೇ ಅಲ್ಲದೇ ಸಿಬಿಐಯನ್ನು ತರಾಟೆಗೆ ತೆಗೆದುಕೊಂಡಿತು.

ಸಂಗ್ರಹ ಚಿತ್ರ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಷ್ಟೇ ಅಲ್ಲದೇ ಸಿಬಿಐಯನ್ನು ತರಾಟೆಗೆ ತೆಗೆದುಕೊಂಡಿತು. ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ದೆಹಲಿ ನ್ಯಾಯಾಲಯದಿಂದ ದೋಷಮುಕ್ತರಾಗಿದ್ದು, ಈ ತೀರ್ಪು ಕೇಳಿ ಅವರು ಕಣ್ಣೀರಿಟ್ಟು, ಸತ್ಯಕ್ಕೆ ಜಯ ಸಿಕ್ಕಿದೆ ಎಂದಿದ್ದಾರೆ. ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ವಿಶ್ವಾಸಾರ್ಹ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಸಾವಿರಾರು ಕೋಟಿ ಮೌಲ್ಯದ ಮದ್ಯ ಹಗರಣವನ್ನು ಕೇಂದ್ರ ತನಿಖಾ ಸಂಸ್ಥೆಗಳು, ಜಾರಿ ನಿರ್ದೇಶನಾಲಯ (ED) ಮತ್ತು CBI ಎರಡೂ ತನಿಖೆ ನಡೆಸಿವೆ.ಸಿಬಿಐ ಸಲ್ಲಿಸಿದ ಎಫ್‌ಐಆರ್ ಆಧರಿಸಿ, ಇಡಿ ಪ್ರಕರಣವನ್ನು ದಾಖಲಿಸಿ ತನಿಖೆ ಆರಂಭಿಸಿತು. ನಂತರದ ತನಿಖೆಯ ಸಮಯದಲ್ಲಿ, ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಯಿತು ಮತ್ತು ಹಲವಾರು ತಿಂಗಳು ಜೈಲಿನಲ್ಲಿ ಕಳೆದರು. ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಈಗ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಈ ಹೈ ಪ್ರೊಫೈಲ್ ಪ್ರಕರಣದಲ್ಲಿ ಆರೋಪಗಳಿಂದ ಖುಲಾಸೆಗೊಳಿಸಿದೆ.

ನ್ಯಾಯಾಲಯ ಹೇಳಿದ್ದೇನು?

ಸಿಬಿಐ ಚಾರ್ಜ್‌ಶೀಟ್‌ ಅನೇಕ ದೋಷಗಳಿಂದ ಕೂಡಿದೆ. ಸಾಕ್ಷಿಗಳ ಹೇಳಿಕೆಗಳಿಂದ ಬೆಂಬಲಿತವಾಗಿಲ್ಲ. ಸಿಸೋಡಿಯಾ ಅವರ ವಿರುದ್ಧ ನಾಮಕಾವಸ್ಥೆಗೆ ಪ್ರಕರಣ ದಾಖಲಿಸಲಾಗಿದೆ. ಕೇಜ್ರಿವಾಲ್‌ ವಿರುದ್ಧ ಸಾಕ್ಷ್ಯಾಧಾರಗಳಿಲ್ಲದೇ ಆರೋಪ ಹೊರಿಸಲಾಗಿದೆ ಎಂದು ಕೋರ್ಟ್‌ ಸಿಬಿಐ ಅನ್ನು ತರಾಟೆಗೆ ತೆಗೆದುಕೊಂಡಿದೆ. ಬಳಿಕ 23 ಆರೋಪಿಳ ವಿರುದ್ಧದ ಆರೋಪಗಳನ್ನು ಖುಲಾಸೆಗೊಳಿಸಿದೆ.

ತೀರ್ಪಿಗೆ ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದ ಕೇಜ್ರಿವಾಲ್ , ಈ ಪ್ರಕರಣವನ್ನು "ಸ್ವತಂತ್ರ ಭಾರತದ ಅತಿದೊಡ್ಡ ರಾಜಕೀಯ ಪಿತೂರಿ" ಎಂದು ಕರೆದರು, ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವನ್ನು ಅಧಿಕಾರದಿಂದ ಕಿತ್ತೊಗೆಯಲು ಬಿಜೆಪಿ ರೂಪಿಸಿತ್ತು. ಧಿಕಾರಕ್ಕಾಗಿ ಯಾರೂ "ದೇಶ ಮತ್ತು ಸಂವಿಧಾನದೊಂದಿಗೆ ಈ ರೀತಿ ಆಟವಾಡಬಾರದು ಎಂದು ಹೇಳಿದರು. ಈ ಪ್ರಕರಣವನ್ನು "ಸ್ವತಂತ್ರ ಭಾರತದ ಅತಿದೊಡ್ಡ ರಾಜಕೀಯ ಪಿತೂರಿ" ಎಂದು ಬಣ್ಣಿಸಿದ ಅವರು, "ಆಮ್ ಆದ್ಮಿ ಪಕ್ಷದ ಐದು ದೊಡ್ಡ ನಾಯಕರನ್ನು ಜೈಲಿಗೆ ಹಾಕುವ ಮೂಲಕ ಆ ಪಕ್ಷವನ್ನು ಮುಗಿಸಲು ಸಂಚು ರೂಪಿಸಲಾಗಿತ್ತು ಎಂದು ಮಾಧ್ಯಮಗಳ ಎದುರು ಕಣ್ಣೀರು ಹಾಕಿದರು.

ಏನಿದು ಅಬಕಾರಿ ಹಗರಣ?

2022-23 ರ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಸಿಬಿಐ ಪ್ರಕರಣ ದಾಖಲಿಸಿತು ಮತ್ತು ನಂತರ ಇಡಿ ಕೂಡ ಹಣ ವರ್ಗಾವಣೆ ಆರೋಪದ ಮೇಲೆ ಪ್ರಕರಣ ದಾಖಲಿಸಿತು. ಮದ್ಯ ಮಾರಾಟಗಾರರರಿಗೆ ಅನುಕೂಲವಾಗಲಿ ಎಂಬ ದಿಸೆಯಲ್ಲಿ ಅರವಿಂದ್‌ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ ಸೇರಿ ಹಲವು ನಾಯಕರು ನೀತಿ ರೂಪಿಸಿದ್ದಾರೆ. ದಕ್ಷಿಣ ಭಾರತದ ಹಲವು ವ್ಯಕ್ತಿಗಳು ಇದರ ಲಾಭ ಪಡೆದಿದ್ದಾರೆ. ಲಾಭದ ಸ್ವಲ್ಪ ಮೊತ್ತವನ್ನು ಎಎಪಿಗೆ ನೀಡಲಾಗಿದೆ. ಆ ಮೊತ್ತವನ್ನು ಗೋವಾ ಚುನಾವಣೆಗೂ ಬಳಸಲಾಗಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ಸಲ್ಲಿಸಲಾಗಿತ್ತು.

Vishakha Bhat Heggar

View all posts by this author