ASHA workers: ಬೇಡಿಕೆ ಈಡೇರಿಕೆಗಾಗಿ ಕೇಶ ಕತ್ತರಿಸಿ ಆಕ್ರೋಶ ಹೊರಹಾಕಿದ ಆಶಾ ಕಾರ್ಯಕರ್ತೆಯರು
50 ದಿನಗಳಿಂದಲೂ ಕೇರಳದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಇದುವರೆಗೆ ಯಾವುದೇ ಸೂಕ್ತ ನಿರ್ಧಾರ ಕೈಗೊಳ್ಳದೆ ಇರುವುದನ್ನು ಖಂಡಿಸಿ ತಿರುವನಂಪುರದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಕೂದಲನ್ನು ಕತ್ತರಿಸಿಕೊಂಡು ಎಂಜಿ ರಸ್ತೆಯಲ್ಲಿ ಮೆರವಣಿಗೆ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

ಆಶಾ ಕಾರ್ಯಕರ್ತೆಯರು.

ತಿರುವನಂತಪುರಂ: ಆರೋಗ್ಯದ ಬಗ್ಗೆ ಕಾಳಜಿ ವಹಿಸುವ, ಕಾಲಕಾಲಕ್ಕೆ ಆರೋಗ್ಯ ಸುಸ್ಥಿತಿ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆಶಾ ಕಾರ್ಯಕರ್ತೆಯರ (ASHA workers) ಸೇವೆ ಅನನ್ಯವಾದುದು. ಹಾಗಿದ್ದರೂ ಅವರಿಗೆ ಒದಗಿಸಬೇಕಿದ್ದ ಸೌಲಭ್ಯ ಗಳು ಕ್ಲಪ್ತಸಮಯಕ್ಕೆ ದೊರೆಯುವುದೇ ಇಲ್ಲ. ಹೀಗಾಗಿ ಕೇರಳದಲ್ಲಿ ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ 50 ದಿನಗಳಿಂದ ತಿರುವನಂತಪುರಂನಲ್ಲಿ ತಮ್ಮ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು ಇದೀಗ ಕೂದಲು ಕತ್ತರಿಸಿ, ತಲೆ ಬೋಳಿಸಿಕೊಂಡು ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದಾರೆ.
ಹಲವು ದಿನಗಳಿಂದಲೂ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಇದುವರೆಗೆ ಯಾವುದೇ ಸೂಕ್ತ ನಿರ್ಧಾರ ಕೈಗೊಳ್ಳದೆ ಇರುವುದನ್ನು ಖಂಡಿಸಿ ತಿರುವನಂಪುರದಲ್ಲಿ ಆಶಾ ಕಾರ್ಯಕರ್ತೆಯರು ವಿಭಿನ್ನವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರು ತಮ್ಮ ಕೂದಲನ್ನು ಕತ್ತರಿಸಿಕೊಂಡು ಎಂಜಿ ರಸ್ತೆಯಲ್ಲಿ ಮೆರವಣಿಗೆ ಮಾಡಿದ್ದಾರೆ. ಬಳಿಕ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇದುವರೆಗೆ ಯಾವುದೇ ಸೂಕ್ತ ನಿರ್ಧಾರ ಕೈಗೊಳ್ಳದೆ ಮೌನ ವಹಿಸಿದ್ದಾರೆ ಎಂದು ಆರೋಗ್ಯ ಕಾರ್ಯಕರ್ತೆಯರು ಆಕ್ರೋಶ ಹೊರಹಾಕಿದ್ದಾರೆ.
ಕೇವಲ 232 ರೂ.ಗಳಲ್ಲಿ ನಾವು ಹೇಗೆ ಜೀವನ ಕಳೆಯಬೇಕು? ಕಳೆದ 50 ದಿನದಿಂದ ಬಿಸಿಲನ್ನು ಲೆಕ್ಕಿಸದೆ ಪ್ರತಿಭಟನೆ ಮಾಡುತ್ತಿದ್ದೇವೆ. ನಮ್ಮ ನೋವು ಹಾಗೂ ಸಮಸ್ಯೆಗಳು ಅಧಿಕಾರಿಗಳಿಗೆ ಕಾಣುತ್ತಿಲ್ಲ. ಸರ್ಕಾರ ಇನ್ನು ಕೂಡ ನಮ್ಮ ಬೇಡಿಕೆ ಈಡೇರಿಸದೆ ಇದ್ದರೆ ನಾವೆಲ್ಲ ಇಲ್ಲಿಯೇ ಪ್ರಾಣತ್ಯಾಗ ಮಾಡುತ್ತೇವೆ ಎಂದು ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ನಾಯಕಿ ಮಿನಿ ಎಸ್. ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ: Gadag News: ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನ; ಆರೋಪಿ ಕಾಲಿಗೆ ಗುಂಡೇಟು
ನಿವೃತ್ತಿ ನಂತರದ ಭತ್ಯೆ ಹಾಗೂ ಗೌರವ ಧನ ಹೆಚ್ಚಿಸುವುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದ್ದು, ಇದರ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರು ಹಲವು ದಿನದಿಂದಲೂ ಪ್ರತಿಭಟನೆ ನಡೆ ಸುತ್ತಿದ್ದಾರೆ. ಕೇಂದ್ರ ಸರ್ಕಾರ 2023-24ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ನಗದು ಅನುದಾನ ಮಂಜೂರು ಇದುವರೆಗೆ ಆಗಿಲ್ಲ ಎಂದು ಅಲ್ಲಿನ ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಿದೆ.