ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Manipur Violence: ಅಸ್ಸಾಂ ರೈಫಲ್ಸ್‌ನ ಸೇನಾ ವಾಹನದ ಮೇಲೆ ದಾಳಿ; ಇಬ್ಬರು ಸೈನಿಕರು ಹುತಾತ್ಮ

ಮಣಿಪುರದಲ್ಲಿ ಶಾಂತಿ ಸ್ಥಾಪನೆಯಾಗಬೇಕು ಎನ್ನುವ ಹೊತ್ತಲ್ಲೇ ಇಂಫಾಲ್‌ನ ಹೊರ ವಲಯದಲ್ಲಿ ಸೇನೆಯ ವಾಹನದ ಮೇಲೆ ದಾಳಿ ನಡೆಸಲಾಗಿದೆ. ಅಸ್ಸಾಂ ರೈಫಲ್ಸ್‌ನ ಟ್ರಕ್ ಮೇಲೆ ಬಂದೂಕುಧಾರಿಗಳ ಗುಂಪೊಂದು ಹೊಂಚು ಹಾಕಿ ದಾಳಿ ನಡೆಸಿದೆ. ಸದ್ಯ ಸ್ಥಳದಲ್ಲಿ ಬಿಗಿ ಭದ್ರತೆಯನ್ನು ಒದಗಿಸಲಾಗಿದ್ದು, ಗಾಯಾಳು ಸೈನಿಕರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಅಸ್ಸಾಂ ರೈಫಲ್ಸ್‌ನ ಸೇನಾ ವಾಹನದ ಮೇಲೆ ದಾಳಿ

-

Vishakha Bhat Vishakha Bhat Sep 19, 2025 7:59 PM

ಮಣಿಪುರದಲ್ಲಿ ಶಾಂತಿ ಸ್ಥಾಪನೆಯಾಗಬೇಕು ಎನ್ನುವ ಹೊತ್ತಲ್ಲೇ ಇಂಫಾಲ್‌ನ ಹೊರ ವಲಯದಲ್ಲಿ ಸೇನೆಯ ವಾಹನದ ಮೇಲೆ ದಾಳಿ ನಡೆಸಲಾಗಿದೆ. ಅಸ್ಸಾಂ ರೈಫಲ್ಸ್‌ನ ಟ್ರಕ್ ಮೇಲೆ ಬಂದೂಕುಧಾರಿಗಳ ಗುಂಪೊಂದು ಹೊಂಚು ಹಾಕಿ ದಾಳಿ ನಡೆಸಿದೆ. ದಾಳಿಯಲ್ಲಿ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಸೇನೆ ಮಾಹಿತಿಯನ್ನು ಹಂಚಿಕೊಂಡಿದೆ. ಇಂಫಾಲದಿಂದ ಬಿಷ್ಣುಪುರಕ್ಕೆ ಪ್ರಯಾಣಿಸುತ್ತಿದ್ದ ಪ್ಯಾರಾಮಿಲಿಟರಿ ಪಡೆಗಳ 407 ಟಾಟಾ ವಾಹನದ ಮೇಲೆ ನಂಬೋಲ್ ಸಬಲ್ ಲೈಕೈ ಪ್ರದೇಶದಲ್ಲಿ ಅಪರಿಚಿತ ಬಂದೂಕುಧಾರಿ ಗುಂಡು ಹಾರಿಸಿದ್ದಾನೆ.



ದೃಶ್ಯಗಳಲ್ಲಿ ಒಬ್ಬ ಅಧಿಕಾರಿಗೆ ತೀವ್ರ ಗಾಯಗಳಾಗಿದ್ದು, ಆ ಪ್ರದೇಶದಲ್ಲಿ ಭಾರೀ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಸದ್ಯ ದಾಳಿ ನಡೆದ ಸ್ಥಳದಿಂದ ಸುಮಾರು 20 ಕೀ.ಮೀ ಪ್ರದೇಶದವರೆಗೆ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಹೊಂಚುದಾಳಿ ಸ್ಥಳವು ಇಂಫಾಲ ಮತ್ತು ಚುರಚಂದಪುರದ ಮಧ್ಯದಲ್ಲಿದೆ.

ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ದಾಳಿಯನ್ನು ಖಂಡಿಸಿದ್ದು, ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಯಾವುದೇ ಸಂದರ್ಭದಲ್ಲೂ ಇಂತಹ ಹಿಂಸಾಚಾರವನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದರು ಮತ್ತು ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡುವ ಬಲವಾದ ಸಂಕಲ್ಪದೊಂದಿಗೆ ಅವುಗಳನ್ನು ಎದುರಿಸಲಾಗುವುದು ಎಂದು ಎಚ್ಚರಿಸಿದ್ದಾರೆ.