ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಪ್ರತಿಭಟನೆ ವೇಳೆ ಮಹಿಳಾ ಪೊಲೀಸರ ಮೇಲೆ ದೌರ್ಜನ್ಯ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ಇತ್ತೀಚೆಗೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಯ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದು ಕೇಂದ್ರ ಸರ್ಕಾರ ಆರೋಪಿಸಿದೆ. ಈ ಕುರಿತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ದೂರು ಸಲ್ಲಿಸಿದರು.

ಸಂಗ್ರಹ ಚಿತ್ರ

ನವದೆಹಲಿ: ಮತ ಕಳ್ಳತನ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Chief Election Commissioner Gyanesh Kumar) ಅವರ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ (delhi Jantar Mantar) ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟದಿಂದ (INDIA bloc) ನಡೆದ ಪ್ರತಿಭಟನೆ ವೇಳೆ ಒಕ್ಕೂಟದ ಸಂಸದರು ಪೊಲೀಸರೊಂದಿಗೆ ಸಂಘರ್ಷಕ್ಕಿಳಿದಿದ್ದಾರೆ. ಈ ಸಂದರ್ಭದಲ್ಲಿ ಮಹಿಳಾ ಪೊಲೀಸರ ಮೇಲೆ ದೌರ್ಜನ್ಯ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಆರೋಪಿಸಿದೆ. ಈ ಕುರಿತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ದೂರು ಸಲ್ಲಿಸಿದ್ದು, ರಾಹುಲ್ ಗಾಂಧಿ (Rahul Gandhi) ನೇತೃತ್ವದ ಕಾಂಗ್ರೆಸ್ ಪ್ರತಿಭಟನೆಯ ಸಂದರ್ಭದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ದೌರ್ಜನ್ಯ ಎಸಗಲಾಗಿದೆ ಮತ್ತು ಅವರು ಗಾಯಗೊಂಡಿದ್ದಾರೆ ಎಂದು ತಿಳಿಸಿದರು.

ಪ್ರತಿಭಟನೆಗೆ ಯಾವುದೇ ಅನುಮತಿ ನೀಡಿರಲಿಲ್ಲ. ಅದು ಕಾನೂನು ಬಾಹಿರವಾಗಿತ್ತು. ಅವರನ್ನು ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿಯನ್ನು ಪ್ರತಿಭಟನಾಕಾರರು ನಿಂದಿಸಿದರು ಕೂಡ ಅವರು ಜವಾಬ್ದಾರಿಯುತವಾಗಿ ವರ್ತಿಸಿದರು ಎಂದು ನ್ಯಾಯಾಲಯಕ್ಕೆ ತುಷಾರ್ ಮೆಹ್ತಾ ತಿಳಿಸಿದರು.

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರುನಾಮಕರಣ: ಪ್ರಧಾನಿ ನರೇಂದ್ರ ಮೋದಿ ಹೆಸರು ಪ್ರಸ್ತಾವನೆಗೆ ಅನುಮೋದನೆ

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಅಕ್ಟೋಬರ್ 10 ರಂದು ಕಾಕ್ರೋಚ್ ಜನತಾ ಪಕ್ಷ ಕರೆ ನೀಡಿದ್ದ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ವಿಧಿಸಲಾದ ನಿರ್ಬಂಧಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ತುಷಾರ್ ಮೆಹ್ತಾ ಅವರು ನ್ಯಾಯಾಲಯಕ್ಕೆ ಈ ಮಾಹಿತಿ ನೀಡಿದರು.

ಈ ಕುರಿತು ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಮನು ಸಿಂಘ್ವಿ, ಪ್ರಶಾಂತ್ ಭೂಷಣ್ ಮತ್ತು ವೃಂದಾ ಗ್ರೋವರ್ ಅವರನ್ನೊಳಗೊಂಡ ಪೀಠವು, ಪ್ರತಿಭಟಿಸುವ, ನಾಗರಿಕರು ಮುಕ್ತವಾಗಿ ಸಂಚರಿಸುವ ಮತ್ತು ಅಗತ್ಯ ಸೌಲಭ್ಯಗಳನ್ನು ಪಡೆಯುವ ಹಕ್ಕುಗಳ ನಡುವೆ ಸಮತೋಲನ ಕಾಯ್ದುಕೊಳ್ಳಬೇಕು ಎಂದು ತಿಳಿಸಿತು.

ನಿರ್ಬಂಧಗಳ ವ್ಯಾಪ್ತಿಯನ್ನು ಪ್ರಶ್ನಿಸಿದ ನ್ಯಾಯಪೀಠ, ಮೆಟ್ರೋ ನಿಲ್ದಾಣಗಳ ಮುಚ್ಚುವಿಕೆ, ರೈಲುಗಳ ರದ್ದುಗೊಳಿಸುವಿಕೆ, ದೆಹಲಿ ಗಡಿಗಳಲ್ಲಿ ತಪಾಸಣೆ ಮತ್ತು ಹೊಸ ಬುಕಿಂಗ್‌ಗಳನ್ನು ಸ್ವೀಕರಿಸದಂತೆ ಹೋಟೆಲ್‌ಗಳಿಗೆ ನೀಡಲಾದ ಸೂಚನೆಗಳ ಬಗ್ಗೆ ಪ್ರಶ್ನಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ತುಷಾರ್ ಮೆಹ್ತಾ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಈ ಕ್ರಮಗಳು ಅಗತ್ಯವಾಗಿತ್ತು ಎಂದು ತಿಳಿಸಿದರು.

ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರು ಮಾತನಾಡಿ, ನಾಗರಿಕರ ಹಕ್ಕುಗಳು ಮತ್ತು ಮೂಲ ಸೌಲಭ್ಯಗಳನ್ನು ಪಡೆಯುವ ವಿಶಾಲ ನಾಗರಿಕ ಸಮುದಾಯದ ಹಕ್ಕುಗಳ ನಡುವೆ ನಾವು ಸಮತೋಲನವನ್ನು ಕಾಯ್ದುಕೊಳ್ಳಬೇಕಾಗಿದೆ. ನ್ಯಾಯಾಲಯದ ಮುಂದೆ ಮಂಡಿಸಲಾದ ಮಾಹಿತಿಯ ಆಧಾರದ ಮೇಲೆ ಪೊಲೀಸ್ ಕ್ರಮವು ಅತಿಯಾದದ್ದು ಎಂದು ಅಭಿಪ್ರಾಯಪಟ್ಟರು.

ಸಾರಿಗೆ ನಿರ್ಬಂಧ ಲಕ್ಷಾಂತರ ಪ್ರಯಾಣಿಕರ ಮೇಲೆ ಪರಿಣಾಮ ಬೀರುತ್ತವೆ. ಹೀಗಾಗಿ ನಿರ್ಬಂಧಗಳ ವ್ಯಾಪ್ತಿ ಮತ್ತು ಕಾನೂನುಬದ್ಧತೆಯನ್ನು ಪರಿಶೀಲಿಸಲು ನ್ಯಾಯಪೀಠವು ಪೊಲೀಸ್ ಆದೇಶದ ಮೂಲ ಪ್ರತಿಯನ್ನು ಕೋರಿತು. ಅಲ್ಲದೇ ಪ್ರತಿಭಟನೆಯನ್ನು ನಿಯಂತ್ರಿಸಲು ಭಾಗವಹಿಸುವವರ ಸಂಖ್ಯೆಯನ್ನು ಸೀಮಿತಗೊಳಿಸುವ ಮತ್ತು ಅವರು ಶಸ್ತ್ರಾಸ್ತ್ರರಹಿತರಾಗಿರುವುದನ್ನು ಖಚಿತಪಡಿಸಿಕೊಂಡು ಕೂಡ ಮಾಡಬಹುದಿತ್ತು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ವ್ಯಾಪಾರಿಗಳಿಗೆ ತುಸು ರಿಲೀಫ್‌: ಯುಪಿಐ ವಹಿವಾಟಿನ ಎಂಡಿಆರ್ ಶುಲ್ಕ ಜಾರಿ ಮುಂದೂಡಿಕೆ ಸಾಧ್ಯತೆ

ದೆಹಲಿಯಲ್ಲಿ ಬುಧವಾರ ನಡೆದ ಪ್ರತಿಭಟನೆ ವೇಳೆ ಅಶೋಕ ರಸ್ತೆಯಲ್ಲಿ ನಡೆದ ಘರ್ಷಣೆಯ ವೇಳೆ ಕಾಂಗ್ರಸ್ ನಾಯಕ ರಾಹುಲ್ ಗಾಂಧಿ ಅವರು ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ತಳ್ಳಲು ಮತ್ತು ಅನುಚಿತವಾಗಿ ಸ್ಪರ್ಶಿಸಲು ಪ್ರಯತ್ನಿಸಿದರು ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತು ಸಾಮಾಜಿಕ ಮಾಧ್ಯಮದ ಎಕ್ಸ್ ಖಾತೆಯಲ್ಲಿ ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ ಅವರು ವಿಡಿಯೋ ತುಣುಕೊಂದನ್ನು ಹಂಚಿಕೊಂಡಿದ್ದರು. ಆದರೆ ಇದಕ್ಕೆ ಕಾಂಗ್ರೆಸ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ವಿದ್ಯಾ ಇರ್ವತ್ತೂರು

View all posts by this author