ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Explosion at Telangana: ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; ಐವರು ಬಲಿ- ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಭೀತಿ

ಸಂಗರೆಡ್ಡಿ ಜಿಲ್ಲೆಯ ಪಶಮೈಲರಾಮ್ ಕೈಗಾರಿಕಾ ಎಸ್ಟೇಟ್‌ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐದು ಕಾರ್ಮಿಕರು ಸಾವನ್ನಪ್ಪಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟಕ್ಕೆ ನಿಖರವಾದ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; ಐವರು ಬಲಿ

Profile Rakshita Karkera Jun 30, 2025 12:34 PM

ಹೈದರಾಬಾದ್‌: ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ(Explosion at Telangana) ಸಂಭವಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಂಗರೆಡ್ಡಿ ಜಿಲ್ಲೆಯ ಪಶಮೈಲರಾಮ್ ಕೈಗಾರಿಕಾ ಎಸ್ಟೇಟ್‌ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐದು ಕಾರ್ಮಿಕರು ಸಾವನ್ನಪ್ಪಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟಕ್ಕೆ ನಿಖರವಾದ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೈಗಾರಿಕಾ ಶೆಡ್ ಸಂಪೂರ್ಣವಾಗಿ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಕೆಲವು ಕಾರ್ಮಿಕರು ಗಾಳಿಯಲ್ಲಿ ಮೇಲಕ್ಕೆ ಎಸೆಯಲ್ಪಟ್ಟು ಸುಮಾರು 100 ಮೀಟರ್ ದೂರಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಮೈಕ್ರೋಕ್ರಿಸ್ಟಲಿನ್ ಸೆಲ್ಯುಲೋಸ್ ಮತ್ತು ಫಾರ್ಮಾ ಎಕ್ಸಿಪೈಂಟ್‌ಗಳು ಹಾಗೂ ಆಹಾರ ಪದಾರ್ಥಗಳ ತಯಾರಕರಾದ ಸಿಗಾಚಿ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್‌ನ ಉತ್ಪಾದನಾ ಘಟಕದಲ್ಲಿ ಈ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ.

ಈ ಸುದ್ದಿಯನ್ನೂ ಓದಿ: Car Bomb Blast: ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್‌ ಸ್ಫೋಟ; 16ಸೈನಿಕರು ಹತ್ಯೆ

ಇನ್ನು ಈ ದುರ್ಘಟನೆಯಲ್ಲಿಒಂದು ಕಟ್ಟಡ ಕುಸಿದಿದ್ದು, ಪಕ್ಕದ ರಚನೆಯು ಭಾಗಶಃ ಹಾನಿಗೊಳಗಾಗಿದೆ. ಇನ್ನು ಕುಸಿದು ಬಿದ್ದಿರುವ ಕಟ್ಟಡದ ಅವಶೇಷದಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಭೀತಿ ಎದುರಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಗರೆಡ್ಡಿ ಜಿಲ್ಲಾಧಿಕಾರಿ ಪಿ. ಪ್ರವಿಣ್ಯ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಪರಿತೋಷ್ ಪಂಕಜ್ ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸಿದ್ದಾರೆ. ಭಾರೀ ಸ್ಫೋಟದಿಂದಾಗಿ ಸುತ್ತಮುತ್ತಲಿನ ಸ್ಥಳದಲ್ಲಿ ದಟ್ಟ ಹೊಗೆ ಹಬ್ಬಿ ಜನ ಭಯಭೀತರಾದರು, ಇದರಿಂದಾಗಿ ಜನರಿಗೆ ಉಸಿರಾಟದ ತೊಂದರೆ ಉಂಟಾಯಿತು. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕಾರಿಗಳು ಸುತ್ತಮುತ್ತಲಿನ ಪ್ರದೇಶದಿಂದ ಜನರನ್ನು ಸ್ಥಳಾಂತರಿಸಲಾಗಿದೆ.