ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Atishi Marlena : ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ

ದೆಹಲಿಯ ವಿಧಾನಸಭೆಯ ವಿರೋಧ ಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆಯಾಗಿದ್ದಾರೆ. ಭಾನುವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ಕರೆಯಲಾದ ಆಮ್ ಆದ್ಮಿ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರ ಹೆಸರನ್ನು ಅನುಮೋದಿಸಲಾಗಿದೆ. ಇದರೊಂದಿಗೆ ದಿಲ್ಲಿ ವಿಧಾನಸಭೆಯ ಮೊದಲ ಮಹಿಳಾ ವಿಪಕ್ಷ ನಾಯಕಿ ಎಂಬ ಹೆಗ್ಗಳಿಕೆಗೆ ಅತಿಶಿ ಪಾತ್ರರಾಗಿದ್ದಾರೆ.

ವಿಪಕ್ಷ ನಾಯಕಿಯಾಗಿ ಅತಿಶಿ ಆಯ್ಕೆ

ಅತಿಶಿ

Profile Vishakha Bhat Feb 23, 2025 3:47 PM

ನವದೆಹಲಿ: ದಿಲ್ಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ವಿರೋಧ ಪಕ್ಷದ ನಾಯಕಿಯಾಗಿ ಅತಿಶಿ (Atishi Marlena) ಆಯ್ಕೆಯಾಗಿದ್ದಾರೆ. ಭಾನುವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ಕರೆಯಲಾದ ಆಮ್ ಆದ್ಮಿ ಪಕ್ಷದ (AAP) ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರ ಹೆಸರನ್ನು ಅನುಮೋದಿಸಲಾಗಿದೆ. ಸಭೆಯಲ್ಲಿ, ಎಲ್ಲಾ ಶಾಸಕರು ಅತಿಶಿ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಇದರೊಂದಿಗೆ ದಿಲ್ಲಿ ವಿಧಾನಸಭೆಯ ಮೊದಲ ಮಹಿಳಾ ವಿಪಕ್ಷ ನಾಯಕಿ ಎಂಬ ಹೆಗ್ಗಳಿಕೆಗೆ ಅತಿಶಿ ಪಾತ್ರರಾಗಿದ್ದಾರೆ. ಇಂದು ನಡೆದ ಸಭೆಯಲ್ಲಿ ಆಪ್‌ ಸಂಚಾಲಕ ಸೇರಿದಂತೆ ಪಕ್ಷದ 22 ಶಾಸಕರು ಭಾಗವಹಿಸಿದ್ದರು.

ದೆಹಲಿ ವಿಧಾನಸಭೆಯ ಮೊದಲ ಅಧಿವೇಶನ ಫೆಬ್ರವರಿ 24 ರಂದು ಆರಂಭವಾಗಲಿದೆ. ಮೂರು ದಿನಗಳ ಈ ಅಧಿವೇಶನದಲ್ಲಿ, ಹಿಂದಿನ ಆಪ್‌ ಸರ್ಕಾರದ ಕಾರ್ಯಕ್ಷಮತೆಯ ವಿರುದ್ಧ ಬಾಕಿ ಇರುವ ಸಿಎಜಿ ವರದಿಗಳನ್ನು ಸದನದಲ್ಲಿ ಮಂಡಿಸಲಾಗುವುದು ಎಂದು ಆಡಳಿತಾರೂಢ ಬಿಜೆಪಿ ಸರ್ಕಾರ ಹೇಳಿದೆ.

ಫೆಬ್ರವರಿ 24 ರಂದು ದೆಹಲಿ ವಿಧಾನಸಭಾ ಅಧಿವೇಶನ ಆರಂಭವಾಗಲಿದ್ದು, ಅಲ್ಲಿ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಮತ್ತು ಹೊಸ ಸ್ಪೀಕರ್ ನೇಮಕಗೊಳ್ಳಲಿದ್ದಾರೆ. ಭಾರತೀಯ ಜನತಾ ಪಕ್ಷದ ನಾಯಕ ವಿಜೇಂದರ್ ಗುಪ್ತಾ ಅವರನ್ನು ಸ್ಪೀಕರ್ ಆಗಿ ನಾಮನಿರ್ದೇಶನ ಮಾಡಲಾಗಿದ್ದು, ಈ ಮಧ್ಯೆ ಅರವಿಂದರ್ ಸಿಂಗ್ ಲವ್ಲಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿದೆ. ಅಧಿವೇಶನದ ಎರಡನೇ ದಿನ (ಫೆಬ್ರವರಿ 25), ಕಂಟ್ರೋಲರ್ ಆಡಿಟರ್ ಜನರಲ್ (ಸಿಎಜಿ) ವರದಿಯನ್ನು ಮಂಡಿಸಲಾಗುವುದು. ಬಿಜೆಪಿ ಶಾಸಕ ಹರೀಶ್ ಖುರಾನಾ ಅವರು ವರದಿಯನ್ನು ಮಂಡಿಸುವುದರೊಂದಿಗೆ, ಅಬಕಾರಿ ನೀತಿಯಲ್ಲಿನ ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು ವಿವರಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾತನಾಡಿದ ಖುರಾನಾ ವರದಿಯನ್ನು ಸದನದಲ್ಲಿ ಮಂಡಿಸಲಾಗುವುದು ಮತ್ತು ಅನೇಕ ವಿಷಯಗಳು ಬೆಳಕಿಗೆ ಬರುತ್ತವೆ. ಸಿಎಜಿ ವರದಿಯಲ್ಲಿ ಸತ್ಯ ಹೊರಬರುತ್ತದೆ ಎಂದು ನಾನು ಭಾವಿಸುತ್ತೇನೆ. ಅದು ಮದ್ಯ ಅಥವಾ ಶೀಶ್ ಮಹಲ್ ಆಗಿರಲಿ, ಅಂತಹ ಅನೇಕ ವಿಷಯಗಳನ್ನು ಸದನದಲ್ಲಿ ಎತ್ತಲಾಗುವುದು ಎಂದು ಖುರಾನಾ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Atishi Marlena: ದೆಹಲಿ ಚುನಾವಣೆಯಲ್ಲಿ ಮುಗ್ಗರಿಸಿದ ಆಪ್: ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ರಾಜೀನಾಮೆ!

ಈ ತಿಂಗಳ ಆರಂಭದಲ್ಲಿ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿ 70 ವಿಧಾನಸಭಾ ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದರೆ, ಆಪ್‌ 22 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್‌ ಈ ಬಾರಿಯೂ ಶೂನ್ಯ ಸುತ್ತಿದೆ.