ಕರ್ನಾಟಕ ಬಜೆಟ್​ ವಿದೇಶ ಪುನೀತ್​ @ 50 ಫ್ಯಾಷನ್​ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Aurangzeb Tomb Row : ನಾಗ್ಪುರದಲ್ಲಿ ಭುಗಿಲೆದ್ದ ಹಿಂಸಾಚಾರ; 30 ಜನರಿಗೆ ಗಾಯ, 65 ಗಲಭೆಕೋರರ ಬಂಧನ

ಮಹಾರಾಷ್ಟ್ರದ ಸಂಭಾಜಿ ನಗರದಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬನ ಸಮಾಧಿಯನ್ನು ತೆಗೆದುಹಾಕಬೇಕೆಂದು ವಿಚಾರವಾಗಿ ಎರಡು ಗುಂಪುಗಳ ನಡುವೆ ಸಂಘರ್ಷ ಉಂಟಾಗಿದ್ದು, ನಾಗ್ಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ನಗರದ ಮಹಲ್ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ನಡೆದ ಭಾರಿ ಘರ್ಷಣೆಯ ನಂತರ ಸುಮಾರು 60 ರಿಂದ 65 ಗಲಭೆಕೋರರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಗ್ಪುರ ಹಿಂಸಾಚಾರ; 30 ಜನರಿಗೆ ಗಾಯ, 65 ಗಲಭೆಕೋರರ ಬಂಧನ

ನಾಗ್ಪುರ ವಿವಾದ

Profile Vishakha Bhat Mar 18, 2025 8:53 AM

ಮುಂಬೈ: ಮಹಾರಾಷ್ಟ್ರದ ಸಂಭಾಜಿ ನಗರದಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬನ ಸಮಾಧಿಯನ್ನು (Aurangzeb Tomb Row) ತೆಗೆದುಹಾಕಬೇಕೆಂದು ವಿಚಾರವಾಗಿ ಎರಡು ಗುಂಪುಗಳ ನಡುವೆ ಸಂಘರ್ಷ ಉಂಟಾಗಿದ್ದು, ನಾಗ್ಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಘಟನೆಯಲ್ಲಿ ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ನಗರದ ಮಹಲ್ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ನಡೆದ ಭಾರಿ ಘರ್ಷಣೆಯ ನಂತರ ಸುಮಾರು 60 ರಿಂದ 65 ಗಲಭೆಕೋರರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂಸಾಚಾರದಲ್ಲಿ ಸುಮಾರು 25 ರಿಂದ 30 ಸಿಬ್ಬಂದಿ ಪೊಲೀಸ್‌ ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸುಮಾರು 25 ಬೈಕ್‌ಗಳು ಮತ್ತು ಮೂರು ಕಾರುಗಳಿಗೆ ಬೆಂಕಿ ಹಚ್ಚಲಾಗಿದ್ದು, 17 ಜನರನ್ನು ಬಂಧಿಸಲಾಗಿದೆ ಮತ್ತು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಡೆಯುತ್ತಿರುವ ಹಿಂಸಾಚಾರದ ನಡುವೆ, ಸೋಮವಾರ ರಾತ್ರಿ 10:30 ರಿಂದ 11:30 ರ ನಡುವೆ ನಾಗ್ಪುರದ ಹಂಸಪುರಿ ಪ್ರದೇಶದಲ್ಲಿ ಮತ್ತೊಂದು ಘರ್ಷಣೆ ಭುಗಿಲೆದ್ದಿತು. ಉದ್ರಿಕ್ತ ಗುಂಪೊಂದು ಕೆಲ ಮನೆ ಮತ್ತು ಕ್ಲಿನಿಕ್‌ಗಳಿಗೆ ಹಾನಿ ಮಾಡಿದೆ ಎಂದು ವರದಿಯಾಗಿದೆ.

ಸಂಭಾಜಿ ನಗರದ ಔರಂಗಜೇಬ್ ಸಮಾಧಿಯ ಕುರಿತು ಭಾರಿ ವಿವಾದ ಉಂಟಾಗಿದ್ದು, ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನಂತಹ ಹಿಂದೂ ಸಂಘಟನೆಗಳು ಅದನ್ನು ಕೆಡವಲು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಈ ಘರ್ಷಣೆಗಳು ನಡೆದಿವೆ. ಘರ್ಷಣೆಗಳು ಭುಗಿಲೆದ್ದ ಗಂಟೆಗಳ ಮೊದಲು, ಸೋಮವಾರ ಬೆಳಿಗ್ಗೆ ನಾಗ್ಪುರದಲ್ಲಿ ಎರಡೂ ಗುಂಪುಗಳು ಪ್ರತಿಭಟನೆಗಳನ್ನು ನಡೆಸಿದ್ದವು. ನಾಗ್ಪುರದ ಮಹಲ್ ಪ್ರದೇಶದಲ್ಲಿ ಕಲ್ಲು ತೂರಾಟದ ಘಟನೆಗಳು ಮತ್ತು ಹೆಚ್ಚುತ್ತಿರುವ ಉದ್ವಿಗ್ನತೆಯ ನಂತರ ಪೊಲೀಸರು ಪರಿಸ್ಥಿತಿಯನ್ನು ನಿರ್ವಹಿಸುತ್ತಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಈ ಸುದ್ದಿಯನ್ನೂ ಓದಿ: Aurangzeb Tomb Row: ಔರಂಗಜೇಬ್‌ ಸಮಾಧಿ ವಿವಾದ; ನಾಗ್ಪುರದಲ್ಲಿ ಭುಗಿಲೆದ್ದ ಹಿಂಸಾಚಾರ

ನಗರದಲ್ಲಿ ಪ್ರಸ್ತುತ ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ನಾಗ್ಪುರ ಪೊಲೀಸ್ ಆಯುಕ್ತ ಡಾ. ರವೀಂದರ್ ಸಿಂಘಾಲ್ ಹೇಳಿದ್ದಾರೆ. ರಾತ್ರಿ 8 ರಿಂದ 8:30 ರ ಸುಮಾರಿಗೆ ಹಿಂಸಾಚಾರ ನಡೆದಿದ್ದು, ಈ ಸಂದರ್ಭದಲ್ಲಿ ಎರಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಮತ್ತು ಕಲ್ಲು ತೂರಾಟದ ಘಟನೆಗಳು ವರದಿಯಾಗಿವೆ. ಭಾಗಿಯಾಗಿರುವವರನ್ನು ಗುರುತಿಸಲು ಮತ್ತು ಬಂಧಿಸಲು ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ನಾವು ಸೆಕ್ಷನ್ 144 ಅನ್ನು ವಿಧಿಸಿದ್ದೇವೆ ಮತ್ತು ಎಲ್ಲರೂ ಅನಗತ್ಯವಾಗಿ ಹೊರಗೆ ಹೋಗಬೇಡಿ ಅಥವಾ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ ಎಂದು ಅವರು ಹೇಳಿದ್ದಾರೆ.