ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಫಲಿತಾಂಶ ಇಂದು (May 4) ರಂದು ಪ್ರಕಟಗೊಳ್ಳಲಿದೆ. ಸೋಮವಾರ ಸಂಜೆಯ ವೇಳೆಗೆ ಸಂಪೂರ್ಣ ಫಲಿತಾಂಶದ ನಿರೀಕ್ಷೆಯಿದ್ದು, ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಗುತ್ತದೆ. ಮೊದಲು ಅಂಚೆ ಮತಗಳ ಎಣಿಕೆ ನಡೆಸಿ ಬಳಿಕ ಇವಿಎಂಗಳಲ್ಲಿ ದಾಖಲಾಗಿರುವ ಮತಗಳನ್ನು ಎಣಿಕೆ ಮಾಡುವ ಪ್ರಮಾಣಿತ ಪ್ರಕ್ರಿಯೆಯನ್ನು ನಡೆಯುತ್ತದೆ. ಸದ್ಯ ಮತ ಎಣಿಕೆ ಕೇಂದ್ರದತ್ತ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. ಇನ್ನು ಕಾರ್ನಾಟಕದ ದಾವಣಗೆರೆ ಹಾಗೂ ಬಾಲಕೋಟೆಯ ಉಪ ಚುನಾವಣೆಯ ಫಲಿತಾಂಶವೂ ಇಂದು ಹೊರ ಬೀಳಲಿದೆ. ವಿಧಾನಸಭಾ ಚುನಾವಣೆಯ ಅಧಿಕೃತ ಫಲಿತಾಂಶಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ (eci.gov.in) ವೀಕ್ಷಿಸಬಹುದು. ಪಂಚ ರಾಜ್ಯಗಳ ಫಲಿತಾಂಶದಲ್ಲಿ ಬಂಗಾಳದ ರಿಸಲ್ಟ್ ಹೆಚ್ಚು ಕುತೂಹಲ ಕೆರಳಿಸಿದೆ. ಆಡಳಿತಾರೂಢ ಟಿಎಂಸಿ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿನ ಫೈಟ್ ಏರ್ಪಟ್ಟಿತ್ತು. ಎಕ್ಸಿಟ್ ಪೋಲ್ ವರದಿ ಪ್ರಕಾರ ಈ ಬಾರಿ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿದೆ. ಹೀಗಾಗಿ ಫಲಿತಾಂಶ ಭಾರೀ ಕುತೂಹಲ ಕೆರಳಿಸಿದೆ.
Assembly Election 2026 LIVE Counting and Results: ಪಂಚ ರಾಜ್ಯ ಚುನಾವಣಾ ಫಲಿತಾಂಶ; ತಮಿಳುನಾಡಿನಲ್ಲಿ ಟಿವಿಕೆ ಕಮಾಲ್, ಚುಕ್ಕಾಣಿ ಹಿಡೀತಾರಾ ವಿಜಯ್?
Bagalkot and Davangere By Election and 5 State Assembly Election 2026 Live Counting and Updates Online: ಪಂಚ ವಿಧಾನಸಭಾ ಚುನಾವಣೆಗಳ ಫಲಿತಾಂಶ ಇಂದು (May 4) ರಂದು ಪ್ರಕಟಗೊಳ್ಳಲಿದೆ. ಸೋಮವಾರ ಸಂಜೆಯ ವೇಳೆಗೆ ಸಂಪೂರ್ಣ ಫಲಿತಾಂಶದ ನಿರೀಕ್ಷೆಯಿದ್ದು, ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಗುತ್ತದೆ.
ತಮಿಳುನಾಡಿನಲ್ಲಿ ಟಿವಿಕೆ ಕಮಾಲ್
ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಅಚ್ಚರಿ ಬೆಳವಣಿಗೆ ನಡೆಯುತ್ತಿದೆ. ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಬರೋಬ್ಬರಿ 76 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಆಡಳಾರೂಢ ಎಐಡಿಎಂಕೆ 59 ಹಾಗೂ ಡಿಎಂಕೆ 54 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಎರಡೂ ಕ್ಷೇತ್ರದಲ್ಲಿಯೂ ಟಿವಿಕೆ ವಿಜಯ್‌ಗೆ ಹಿನ್ನಡೆ
ತಮಿಳುನಾಡಿನಲ್ಲಿ 56 ಕ್ಷೇತ್ರದಲ್ಲಿ ಡಿಎಂಕೆ ಮುಂದಿದ್ದರೆ, 26 ಕ್ಷೇತ್ರಗಳಲ್ಲಿ ಎಐಎಡಿಎಂ ಮುಂದಿದೆ. ಇನ್ನು ಎರಡು ಕ್ಷೇತ್ರಗಳಿಂದ ಟಿವಿಕೆ ಪಕ್ಷದಿಂದ ಸ್ಪರ್ಧಿಸಿದ್ದ ವಿಜಯ್ ಹಿನ್ನಡೆಯಲ್ಲಿದ್ದಾರೆ.
ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿಗೆ ಹಿನ್ನಡೆ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಾಗೂ ಟಿಎಂಸಿ ನಡುವೆ ಜಿದ್ದಾ ಜಿದ್ದಿನ ಸ್ಪರ್ಧೆ ಏರ್ಪಟ್ಟಿದ್ದು, 106 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 100 ಸ್ಥಾನಗಳಲ್ಲಿ ಮುಂದಿದೆ. ಇನ್ನು ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಹಿನ್ನಡೆಯಲ್ಲಿದ್ದು, ಬಿಜೆಪಿಯ ಸುವೇಂದು ಅಧಿಕಾರಿ ಮುನ್ನಡೆ ಸಾಧಿಸಿದ್ದಾರೆ.
ಕೇರಳದಲ್ಲಿ ಬಿಜೆಪಿ!
ಕೇರಳದಲ್ಲಿ ಮೊದಲ ಬಾರಿಗೆ ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮಂಜೇಶ್ವರದಲ್ಲಿ ಕೆ. ಸುರೇಂದ್ರನ್ ಆರಂಭಿಕ ಹಂತದಲ್ಲಿ ಮುನ್ನಡೆಯಲ್ಲಿದ್ದಾರೆ. ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಶ್ವಿನಿ ಮುಂದಿದ್ದಾರೆ.
ಮತ ಎಣಿಕೆ ಪ್ರಾರಂಭ
ಪಂಚ ರಾಜ್ಯಗಳಲ್ಲಿ ಮತ ಎಣಿಕೆ ಪ್ರಾರಂಭವಾಗಿದ್ದು, ಪಶ್ಚಿಮ ಬಂಗಾಳದಲ್ಲಿ 6 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ, 3 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಇನ್ನು ಅಸ್ಸಾಂನಲ್ಲಿ ಬಿಜೆಪಿ ಮುಂದಿದೆ.
ರಾಜ್ಯದಲ್ಲಿ ಫಲಿತಾಂಶ ಏನಾಗಬಹುದು?
ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣಾ ಫಲಿತಾಂಶ ಭಾರೀ ಕುತೂಹಲವನ್ನು ಮೂಡಿಸಿದೆ. ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಏಪ್ರಿಲ್ 9ರಂದು ಮತದಾನ ನಡೆದಿತ್ತು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ನಿಂದ ಉಮೇಶ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ಸ್ಪರ್ಧಿಸಿದ್ದರು. ಉಳಿದಂತೆ ಏಳು ಅಭ್ಯರ್ಥಿಗಳು ಕಣದಲ್ಲಿದ್ದರು. ಇನ್ನು ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹಾಗೂ ಬಿಜೆಪಿ ಉಮೇದುವಾರ ಟಿ. ಶ್ರೀನಿವಾಸ ದಾಸಕರಿಯಪ್ಪ ಸೇರಿ 25 ಅಭ್ಯರ್ಥಿಗಳು ಕಣದಲ್ಲಿದ್ದರು.
ಮತ ಎಣಿಕೆ ಕೇಂದ್ರದಲ್ಲಿ ಬಿಗಿ ಭದ್ರತೆ
ಎಣಿಕೆ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. ಅಭ್ಯರ್ಥಿಗಳ ಏಜೆಂಟ್‌ಗಳು ಮತಗಟ್ಟೆ ಪ್ರವೇಶಕ್ಕೆ ಕ್ಯೂಆರ್ ಕೋಡ್ ಆಧಾರಿತ ಗುರುತಿನ ಚೀಟಿ ವ್ಯವಸ್ಥೆ ಮಾಡಿದೆ. ಬೆಳಗ್ಗೆ 8 ಗಂಟೆಗೆ ಭದ್ರತಾ ಕೊಠಡಿ ತೆರೆಯಲಾಗುತ್ತದೆ. ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯಲಿದ್ದು, 8.30ರ ಬಳಿಕ ಎವಿಎಂಗಳ ಮತ ಎಣಿಕೆ ಆರಂಭವಾಗಲಿದೆ.
ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ಪ್ರಾರಂಭ
ಪಂಚ ರಾಜ್ಯಗಳಾದ ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಫಲಿತಾಂಶ ಇಂದು ಹೊರ ಬೀಳಲಿದ್ದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗುತ್ತದೆ.