Bangladesh Unrest: ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಿಲ್ಲುವವರೆಗೂ ವಿಶೇಷ ಪ್ರಾರ್ಥನೆ; ಕೋಲ್ಕತಾ ಇಸ್ಕಾನ್‌ ಹೇಳಿಕೆ

Bangladesh Unrest :ಹಿಂದೂಗಳು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರು ದೌರ್ಜನ್ಯವನ್ನು ಎದುರಿಸುತ್ತಿರುವ ಬಾಂಗ್ಲಾದೇಶ ಸಹಜ ಸ್ಥಿತಿಗೆ ಮರಳುವವರೆಗೆ ನಾವು ಪ್ರಾರ್ಥನೆ ನಡೆಸುತ್ತೇವೆ ಎಂದು ಶುಕ್ರವಾರ ಹೇಳಿಕೆ ನೀಡಿದೆ.

image-55a75c93-53e3-48db-a1f6-0e147120b12c.jpg
Profile Vishakha Bhat January 3, 2025
ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ (Bangladesh Unrest) ನಡೆಯುತ್ತಿದೆ. ಈ ಬಗ್ಗೆ ಕೋಲ್ಕತಾದ ಇಸ್ಕಾನ್‌ (Kolkata ISKCON) ಅಸಮಾಧಾನ ವ್ಯಕ್ತಪಡಿಸಿ, ಹಿಂದೂಗಳು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರು ದೌರ್ಜನ್ಯವನ್ನು ಎದುರಿಸುತ್ತಿರುವ ಬಾಂಗ್ಲಾದೇಶದಲ್ಲಿ ಸಹಜ ಸ್ಥಿತಿಗೆ ಮರಳುವವರೆಗೆ ನಾವು ಪ್ರಾರ್ಥನೆ ನಡೆಸುತ್ತೇವೆ ಎಂದು ಶುಕ್ರವಾರ ಹೇಳಿಕೆ ನೀಡಿದೆ. ಕೋಲ್ಕತ್ತಾದ ಇಂಟರ್‌ನ್ಯಾಷನಲ್‌ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ISKCON) ಬಾಂಗ್ಲಾದೇಶದ ಧಾರ್ಮಿಕ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಭದ್ರತೆಗಾಗಿ ಹಾಗೂ ಜೈಲಿನಲ್ಲಿರುವ ಹಿಂದೂ ಆಧ್ಯಾತ್ಮಿಕ ನಾಯಕ ಚಿನ್ಮಯ್‌ ಕೃಷ್ಣ ದಾಸ್ (Chinmay Das) ಅವರ ಬಿಡುಗಡೆಗಾಗಿ ಒಂದು ತಿಂಗಳಿನಿಂದ ಆಲ್ಬರ್ಟ್ ರೋಡ್ ಕೇಂದ್ರದಲ್ಲಿ ದೈನಂದಿನ ಪ್ರಾರ್ಥನೆಗಳನ್ನು ನಡೆಸುತ್ತಿದೆ. ಈ ಬಗ್ಗೆ ಮಾತನಾಡಿದ ಕೋಲ್ಕತ್ತಾ ಇಸ್ಕಾನ್‌ ವಕ್ತಾರ ರಾಧರಾಮ್ ದಾಸ್ "ಬಾಂಗ್ಲಾದೇಶದ ಸಾಮಾನ್ಯ ಸ್ಥಿತಿಗೆ ಮರಳುವವರೆಗೆ ನಾವು ಅಲ್ಪಸಂಖ್ಯಾತರಿಗಾಗಿ ನಮ್ಮ ದೈನಂದಿನ ಪ್ರಾರ್ಥನೆಯನ್ನು ಮುಂದುವರಿಸುತ್ತೇವೆ" ಎಂದು ಹೇಳಿದ್ದಾರೆ. ಚಿನ್ಮಯ್‌ ದಾಸ್‌ ಅವರ ಬಗ್ಗೆ ಮಾತನಾಡಿದ ಅವರು ಚಿತ್ತಗಾಂಗ್ ನ್ಯಾಯಾಲಯದಲ್ಲಿ ಜಾಮೀನು ಸಿಗದಿದ್ದಕ್ಕೆ ಬೇಸರ ವ್ಯಕ್ತಪಡಿಸಿ, ಬಾಂಗ್ಲಾದ ಹೈಕೋರ್ಟ್‌ನಲ್ಲಿ ಜಮೀನು ಸಿಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಸರ್ಕಾರದ ಪತನದ ನಂತರ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಬಂದಿದೆ. ಅಲ್ಲಿಂದ ಇಲ್ಲಿಯವರಿಗೆ ಅಲ್ಪ ಸಂಖ್ಯಾತ ಸಮುದಾಯವಾದ ಹಿಂದೂಗಳ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ. ಬಾಂಗ್ಲಾದೇಶದ ಇಸ್ಕಾನ್‌ ವಕ್ತಾರರಾದ ಚಿನ್ಮಯ್‌ ದಾಸ್‌ ಅವರನ್ನು ದೇಶ ದ್ರೋಹದ ಆರೋಪದ ಮೇಲೆ ಬಂಧಿಸಲಾಗಿತ್ತು. ಬಾಂಗ್ಲಾದೇಶ ತೊರೆದು ಭಾರತಕ್ಕೆ ಬರಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಚಿನ್ಮಯ್‌ ದಾಸ್‌ ಅವರನ್ನು ಸರ್ಕಾರದ ಸೂಚನೆ ಮೇರೆಗೆ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದರು. ನಂತರ ಅವರಿಗೆ ಜಾಮೀನು ನೀಡಲು ಸ್ಥಳೀಯ ಕೋರ್ಟ್‌ ನಿರಾಕರಿಸಿತ್ತು. ಈ ನಡುವೆ ಚಿನ್ಮಯ್‌ ಅವರ ಪರನಾಗಿದ್ದ ವಕೀಲರ ಮೇಲೆಯೂ ಮಾರಣಾಂತಿಕ ದಾಳಿಯಾಗಿತ್ತು. ಇದೀಗ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಬಾಂಗ್ಲಾ ಹೈಕೋರ್ಟ್‌ ಮೊರೆ ಹೋಗಲಾಗಿದೆ. ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿಯನ್ನು ಭಾರತ ಕೂಡ ಖಂಡಿಸಿತ್ತು. ವಿದೇಶಾಂಗ ಇಲಾಖೆಯ ವಕ್ತಾರ ಬಾಂಗ್ಲಾದೇಶಕ್ಕೆ ಹಿಂದೂಗಳ ಸುರಕ್ಷತೆಯ ಬಗ್ಗೆ ಬಾಂಗ್ಲಾದೇಶಕ್ಕೆ ಪತ್ರ ಬರೆದಿದ್ದರು. ಈ ಸುದ್ದಿಯನ್ನೂ ಓದಿ: Bangladesh Unrest: ಬಾಂಗ್ಲಾದೇಶದಲ್ಲಿ ಹಿಂದೂ ಸಂತ ಚಿನ್ಮಯ್‌ ಕೃಷ್ಣ ದಾಸ್‌ ಅರೆಸ್ಟ್‌‌ ಆಗಿದ್ದೇಕೆ? https://youtu.be/e4o2VLe_WEk?si=N07xYkj9927_MKPt
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ