ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕೇರಳಂ ವಿಧಾನಸಭೆಯಲ್ಲೂ ಮೊಳಗಿದ ಕನ್ನಡ; ಬಸವಣ್ಣನ ವಚನ ವಾಚಿಸಿ ಸೌಹಾರ್ದತೆ, ಒಗ್ಗಟ್ಟಿನ ಮಂತ್ರ ಜಪಿಸಿದ ಮುಸ್ಲಿಂ ಲೀಗ್ ಶಾಸಕ ಎ.ಕೆ.ಎಂ. ಅಶ್ರಫ್

ಕೇರಳ ವಿಧಾನ ಸಭಾ ಚುನಾವಣೆಯ ಬಳಿಕ ನಡೆದ ಮೊದಲ ಅಧಿವೇಶನದಲ್ಲಿ ಆಡಳಿತಾರೂಢ ಯುಡಿಎಫ್ ಮೈತ್ರಿಕೂಟದ ಭಾಗವಾಗಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮಂಜೇಶ್ವರ ಕ್ಷೇತ್ರದ ಶಾಸಕ ಎ.ಕೆ.ಎಂ. ಅಶ್ರಫ್ ಅವರು ಕನ್ನಡದಲ್ಲಿ ಬಸವಣ್ಣನ ವಚನ ಹೇಳಿ ಎಲ್ಲರ ಗಮನ ಸೆಳೆದಿದ್ದಾರೆ. ಮಂಜೇಶ್ವರ ಮಾನವ ಸೌಹಾರ್ದತೆಯ ನೆಲವೆಂದು ಸಾರಿ ಒಗ್ಗಟ್ಟಿನ ಮಂತ್ರವನ್ನು ಪ್ರತಿಪಾದಿಸಿದರು.

ಸಂಗ್ರಹ ಚಿತ್ರ

ತಿರುವನಂತಪುರಂ: ಇವನಾರವ ಇವನಾರವ ಇವನಾರವನೆಂದೆನಿಸದಿರಯ್ಯ, ಇವ ನಮ್ಮವ ಇವ ನಮ್ಮವ ಇವ ನಮ್ಮವನೆಂದೆನಿಸಯ್ಯ. ಕೂಡಲಸಂಗಮದೇವ ನಿಮ್ಮ ಮನೆಯ ಮಗನೆಂದೆನಿಸಯ್ಯ... ಕೇರಳ ವಿಧಾನ ಸಭೆಯಲ್ಲಿ (Kerala Assembly) ಮಂಜೇಶ್ವರ ಕ್ಷೇತ್ರದ ಶಾಸಕ (Manjeshwara MLA) ಎ.ಕೆ.ಎಂ. ಅಶ್ರಫ್ (AKM Ashraf) ಅವರು ಬಸವಣ್ಣನ ವಚನವನ್ನು (Basavanna vachana) ವಾಚನ ಮಾಡುತ್ತಿದ್ದರೆ ಉಳಿದವರು ಮೇಜು ತಟ್ಟಿ ಶ್ಲಾಘಿಸಿದರು. ಕೇರಳ ವಿಧಾನ ಸಭಾ ಚುನಾವಣೆಯ ಬಳಿಕ ನಡೆದ ಮೊದಲ ಅಧಿವೇಶನದಲ್ಲಿ ಆಡಳಿತಾರೂಢ ಯುಡಿಎಫ್ ಮೈತ್ರಿಕೂಟದ ಭಾಗವಾಗಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನ ಶಾಸಕ ಎ.ಕೆ.ಎಂ. ಅಶ್ರಫ್ ಅವರು ಕನ್ನಡದಲ್ಲಿ ಬಸವಣ್ಣನ ವಚನ ಹೇಳಿ ಎಲ್ಲರ ಗಮನ ಸೆಳೆದರು.

ಮಾನವೀಯತೆ, ಸಮಾನತೆ ಮತ್ತು ಸಹೋದರತೆಯ ಸಂದೇಶ ಸಾರುವ ಈ ವಚನದ ಮೂಲಕ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸುವಂತೆ ಮನವಿ ಮಾಡಿದರು. ಇದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಎಲ್ಲರ ಗಮನ ಸೆಳೆದಿದೆ. ಅನೇಕ ಕನ್ನಡಿಗರು ಇದಕ್ಕೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

Karnataka Cabinet: ಡಿಕೆಶಿ ಸಂಪುಟದಲ್ಲಿ ಪರಮೇಶ್ವರ್‌ಗೆ ಡಿಸಿಎಂ ಸ್ಥಾನ; ಯಾರೆಲ್ಲಾ ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ?

ಕೇರಳ ವಿಧಾನ ಸಭೆಯ ಮೊದಲ ಅಧಿವೇಶನದಲ್ಲಿ ಅವರು ರಾಜ್ಯಪಾಲರ ಭಾಷಣಕ್ಕೆ ಕೃತಜ್ಞತೆ ಸಲ್ಲಿಸಿ ಸಾಮಾಜಿಕ ಬದ್ಧತೆ ಮತ್ತು ಎಲ್ಲ ವರ್ಗಗಳ ಒಗ್ಗಟ್ಟಿನ ಕುರಿತು ಮಾತನಾಡಿ ಬಸವಣ್ಣನವರ ಪ್ರಸಿದ್ಧ ವಚನ ಸಾಲುಗಳನ್ನು ಉಲ್ಲೇಖಿಸಿದರು.



ಕೇರಳ ವಿಧಾನ ಸಭೆಯ ಮೊದಲ ಅಧಿವೇಶನದಲ್ಲಿ ಅವರು ಮಂಜೇಶ್ವರ ಮತ್ತು ಕಾಸರಗೋಡಿನ ಅಭಿವೃದ್ಧಿ ಕುರಿತು ವಿಧಾನ ಸಭೆಯಲ್ಲಿ ಪ್ರಸ್ತಾಪಿಸಿದರು. ಪ್ರಸ್ತಾಪಿತ ಹೈಸ್ಪೀಡ್ ರೈಲು ಮಾರ್ಗವನ್ನು ಕಾಸರಗೋಡಿಗೆ ವಿಸ್ತರಿಸುವಂತೆ ಹೇಳಿದ ಅವರು, ಕಾಸರಗೋಡು ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಮಂಜೇಶ್ವರ ಕ್ಷೇತ್ರದಿಂದ ಯುಡಿಎಫ್ ಅಭ್ಯರ್ಥಿಯಾಗಿ ಭರ್ಜರಿ ಗೆಲುವು ಸಾಧಿಸಿದ್ದ ಎಕೆಎಂ ಅಶ್ರಫ್ ಅವರು, ಆರಂಭದಿಂದಲೇ ತಮ್ಮ ವಿಶಿಷ್ಟ ಶೈಲಿಯ ಮೂಲಕ ಕನ್ನಡಿಗರ ಮನಗೆದಿದ್ದಾರೆ.

ಎರಡನೇ ಬಾರಿಗೆ ಕೇರಳ ವಿಧಾನಸಭೆಯ ಶಾಸಕರಾಗಿ ಆಯ್ಕೆಯಾಗಿರುವ ಅವರು ಕನ್ನಡ ಭಾಷೆಯಲ್ಲೇ ಪ್ರಮಾಣ ವಚನ ಸ್ವೀಕರಿಸಿ ಕರ್ನಾಟಕ ಮತ್ತು ಗಡಿನಾಡ ಕನ್ನಡಿಗರ ಪ್ರಶಂಸೆಗೆ ಪಾತ್ರರಾಗಿದ್ದರು. 2021ರಲ್ಲಿ ಮೊದಲ ಬಾರಿಗೆ ಕೇರಳ ವಿಧಾನ ಸಭೆ ಪ್ರವೇಶಿಸಿದ್ದ ಅವರು ಆಗ ಕೂಡ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದರು.

CM oath ceremony: ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ ಹಿನ್ನೆಲೆ ನೆಲಮಂಗಲದಲ್ಲಿ 10 ಲಕ್ಷ ಲಾಡು ತಯಾರಿ!

ಕನ್ನಡಿಗರಾಗಿರುವ ಅಶ್ರಫ್ ಅವರು ತಮ್ಮ ಕನ್ನಡ ಭಾಷೆಯ ಮೇಲೆ ಅಪ್ಪಟ ಅಭಿಮಾನ ಮತ್ತು ಅಪಾರ ಸಾಹಿತ್ಯ ಜ್ಞಾನವನ್ನು ಹೊಂದಿದ್ದಾರೆ. ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗೇ ಸೇರಿಸುವ ಮೂಲಕ ಮಾತೃಭಾಷಾ ಶಿಕ್ಷಣಕ್ಕೆ ಪ್ರಾಯೋಗಿಕ ಬೆಂಬಲವನ್ನು ಕೂಡ ಅವರು ನೀಡಿದ್ದಾರೆ.

ವಿದ್ಯಾ ಇರ್ವತ್ತೂರು

View all posts by this author