ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಾಜಕೀಯ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ: ಪಶ್ಚಿಮ ಬಂಗಾಳ ಸರ್ಕಾರದಿಂದ ಮಹತ್ವದ ನಿರ್ಧಾರ

ಪಶ್ಚಿಮ ಬಂಗಾಳದಲ್ಲಿ ಕಳೆದ 25 ವರ್ಷಗಳಲ್ಲಿ ನಡೆದ ರಾಜಕೀಯ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೆರವಾಗಲು ರಾಜ್ಯ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಹಿಂಸಾಚಾರಕ್ಕೆ ಬಲಿಯಾದವರ ಕುಟುಂಬದ ಒಬ್ಬ ಅರ್ಹ ಸದಸ್ಯನಿಗೆ ಸರ್ಕಾರಿ ಉದ್ಯೋಗ ನೀಡುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟವು ಅನುಮೋದನೆ ನೀಡಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂಧು ಅಧಿಕಾರಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ (West Bengal) ಕಳೆದ 25 ವರ್ಷಗಳಲ್ಲಿ ನಡೆದ ರಾಜಕೀಯ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೆರವಾಗಲು ರಾಜ್ಯ ಸರ್ಕಾರವು ಮಹತ್ವದ ನಿರ್ಧಾರ (Political Violence) ಕೈಗೊಂಡಿದೆ. ಹಿಂಸಾಚಾರಕ್ಕೆ ಬಲಿಯಾದವರ ಕುಟುಂಬದ ಒಬ್ಬ ಅರ್ಹ ಸದಸ್ಯನಿಗೆ ಸರ್ಕಾರಿ ಉದ್ಯೋಗ ನೀಡುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟವು ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ತೆಗೆದುಕೊಂಡಿರುವ ಈ ನಿರ್ಧಾರಕ್ಕೆ ಕಾನೂನು ಇಲಾಖೆಯೂ ಹಸಿರು ನಿಶಾನೆ ತೋರಿಸಿದೆ.

ಮೂಲಗಳ ಪ್ರಕಾರ, ರಾಜ್ಯ ಸಚಿವ ಸಂಪುಟ ಈಗಾಗಲೇ ಈ ಪ್ರಸ್ತಾವನೆಯನ್ನು ಅನುಮೋದಿಸಿದೆ ಮತ್ತು ಕಾನೂನು ಇಲಾಖೆಯೂ ಸಹ ತನ್ನ ಅನುಮತಿಯನ್ನು ನೀಡಿದೆ. ಸರ್ಕಾರ ಶೀಘ್ರದಲ್ಲೇ ಈ ಉಪಕ್ರಮವನ್ನು ಔಪಚಾರಿಕವಾಗಿ ಘೋಷಿಸುವ ನಿರೀಕ್ಷೆಯಿದೆ. 2021 ರ ವಿಧಾನಸಭಾ ಚುನಾವಣೆ ಮತ್ತು 2019 ರ ಲೋಕಸಭಾ ಚುನಾವಣೆಯ ನಂತರ ನಡೆದ ರಾಜಕೀಯ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಈ ಯೋಜನೆಯು ಒಳಗೊಳ್ಳುವ ನಿರೀಕ್ಷೆಯಿದೆ. ಕಳೆದ 25 ವರ್ಷಗಳಲ್ಲಿ ಪಂಚಾಯತ್ ಚುನಾವಣೆಗಳ ಸಮಯದಲ್ಲಿ ಮತ್ತು ನಂತರ ನಡೆದ ಹಿಂಸಾಚಾರದ ಸಂತ್ರಸ್ತರಿಗೂ ಇದು ವಿಸ್ತರಿಸಲಿದೆ.

ಸಂತ್ರಸ್ತ ಕುಟುಂಬಗಳನ್ನು ಗುರುತಿಸಲು ರಾಜ್ಯ ಸರ್ಕಾರವು ಶೀಘ್ರದಲ್ಲೇ ಜಿಲ್ಲಾವಾರು ಅಧಿಕೃತ ಜಾಹೀರಾತು ಹೊರಡಿಸಲಿದೆ. ಅರ್ಹ ಕುಟುಂಬಗಳು ತಮ್ಮ ವ್ಯಾಪ್ತಿಯ ಜಿಲ್ಲಾಧಿಕಾರಿಗಳ ಕಚೇರಿಯ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ .ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯು ಅರ್ಜಿಗಳು ಹಾಗೂ ಮರಣದ ಹಿನ್ನೆಲೆಯನ್ನು ಸಂಪೂರ್ಣವಾಗಿ ಪರಿಶೀಲಿಸಿದ ನಂತರವೇ ಅರ್ಹರಿಗೆ ತಕ್ಕ ಉದ್ಯೋಗವನ್ನು ನೀಡಲಾಗುತ್ತದೆ ಎಂದು ಹೇಳಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರವು ದಶಕಗಳಿಂದಲೂ ರಾಜ್ಯದ ಆಡಳಿತ, ಕಾನೂನು ಸುವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಪ್ರಕ್ರಿಯೆಗಳಿಗೆ ಅತ್ಯಂತ ದೊಡ್ಡ ಸವಾಲಾಗಿ ಉಳಿದುಕೊಂಡಿದೆ. ಬಂಗಾಳದಲ್ಲಿ ಪಂಚಾಯತ್ ಮಟ್ಟದ ಚುನಾವಣೆಗಳು ಅತ್ಯಂತ ಹಿಂಸಾತ್ಮಕವಾಗಿರುತ್ತವೆ. ಗ್ರಾಮೀಣ ಮಟ್ಟದಲ್ಲಿ ಸ್ಥಳೀಯ ಸಂಪನ್ಮೂಲಗಳು, ಸರ್ಕಾರಿ ಯೋಜನೆಗಳ ಹಂಚಿಕೆ ಮತ್ತು ಭೂಮಿಯ ಮೇಲಿನ ನಿಯಂತ್ರಣವು ಪಂಚಾಯತ್‌ಗಳ ಕೈಯಲ್ಲಿರುತ್ತದೆ. ಹಾಗಾಗಿ, ತಳಮಟ್ಟದಲ್ಲಿ ರಾಜಕೀಯ ಹಿಡಿತ ಸಾಧಿಸಲು ಪಕ್ಷಗಳು ಪರಸ್ಪರ ತೀವ್ರ ಸಂಘರ್ಷಕ್ಕಿಳಿಯುತ್ತವೆ.

ಪಶ್ಚಿಮ ಬಂಗಾಳದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ 23 ವರ್ಷದ ಪಾಪಿಯ ಎನ್‌ಕೌಂಟರ್‌; ಪೊಲೀಸರ ಬಂದೂಕು ಕಸಿದು ಗುಂಡು ಹಾರಿಸಲು ಯತ್ನಿಸಿದ ವೇಳೆ ಶೂಟೌಟ್‌

ಪಶ್ಚಿಮ ಬಂಗಾಳದಲ್ಲಿ ಮೇ 2026 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಬಹುಮತದೊಂದಿಗೆ (208 ಸೀಟುಗಳು) ಜಯಗಳಿಸಿ, ಸುವೇಂದು ಅಧಿಕಾರಿ ಅವರ ನೇತೃತ್ವದಲ್ಲಿ ಸರ್ಕಾರ ರಚಿಸಿದ ನಂತರವೂ ರಾಜ್ಯದ ರಾಜಕೀಯ ಹಿಂಸಾಚಾರದ ಪರಿಸ್ಥಿತಿಯಲ್ಲಿ ತಕ್ಷಣಕ್ಕೆ ಭಾರಿ ಬದಲಾವಣೆಗಳೇನೂ ಕಂಡುಬಂದಿಲ್ಲ. ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಹಿಂಸಾಚಾರವನ್ನು ಹತ್ತಿಕ್ಕಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

Vishakha Bhat Heggar

View all posts by this author