ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಇರಾನ್ ಯುದ್ಧದ ನಡುವೆಯೂ ಜೊತೆ ಇರುವುದಕ್ಕೆ ಪ್ರಧಾನಿ ಮೋದಿಗೆ ಬೆಂಜಮಿನ್ ನೆತನ್ಯಾಹು ಧನ್ಯವಾದ

ಇಸ್ರೇಲ್ ಮತ್ತು ಇರಾನ್ ಸಂಘರ್ಷದ ನಡುವೆಯೂ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಜೊತೆಗೆ ನಿಂತಿರುವುದಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಧನ್ಯವಾದ ಹೇಳಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡು ನೆತನ್ಯಾಹು ಅವರೊಂದಿಗೆ ಸೋಮವಾರ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ.

ಸಂಗ್ರಹ ಚಿತ್ರ

ನವದೆಹಲಿ: ಇರಾನ್ (iran)ನೊಂದಿಗಿನ ಸಂಘರ್ಷದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ (pm narendra modi) ಅವರು ಇಸ್ರೇಲ್ (israel) ಜೊತೆ ನಿಂತಿರುವುದಕ್ಕಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (PM Benjamin Netanyahu) ಧನ್ಯವಾದ ಹೇಳಿದ್ದಾರೆ. ಅಗಾಧ ಸ್ನೇಹಕ್ಕೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಸೋಮವಾರ ಮಾತುಕತೆ ನಡೆಸಿರುವ ಇಬ್ಬರು ನಾಯಕರು ಪಶ್ಚಿಮ ಏಷ್ಯಾದಲ್ಲಿ ನಿರ್ಮಾಣವಾಗಿರುವ ಉದ್ವಿಗ್ನತೆಯ ಬಗ್ಗೆ ಚರ್ಚಿಸಿದರು. ಇರಾನ್ ವಿರುದ್ಧದ ಹೋರಾಟದಲ್ಲಿ ಯಹೂದಿ ಜನರನ್ನು ಬೆಂಬಲಿಸಿದ್ದಕ್ಕಾಗಿ ನೆತನ್ಯಾಹು ಅವರು ಮೋದಿಗೆ ಧನ್ಯವಾದಗಳನ್ನು ತಿಳಿಸಿದರು.

ಈ ಕುರಿತು ಸಾಮಾಜಿಕ ಮಾಧ್ಯಮ ಖಾತೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಬಗ್ಗೆ ದೀರ್ಘವಾಗಿ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ. ಅಲ್ಲದೇ ನೆತನ್ಯಾಹು ಅವರು ಇರಾನಿನ ಕ್ಷಿಪಣಿಗೆ ತುತ್ತಾದ ಇಸ್ರೇಲ್‌ನ ಸ್ಥಳದಿಂದ ಸುದ್ದಿಗಾರರೊಂದಿಗೆ ಮಾತನಾಡಿ ಪ್ರಧಾನಿ ಮೋದಿ ಜೊತೆ ಮಾತನಾಡಿರುವುದನ್ನು ದೃಢಪಡಿಸಿದರು.

ಟ್ರಾಫಿಕ್ ಕ್ಯಾಮರಾದಿಂದ ಫೋನ್ ನೆಟ್‌ವರ್ಕ್‌ವರೆಗೆ: ಖಮೇನಿ ಅಡಗು ತಾಣವನ್ನು ಇಸ್ರೇಲ್ ಪತ್ತೆ ಹಚ್ಚಿದ್ದು ಹೇಗೆ?

ಆತ್ಮೀಯ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾನು ಮಾತನಾಡಿದೆ. ಇಸ್ರೇಲ್ ಯಹೂದಿಗಳ ಜೊತೆ ನಿಂತಿದ್ದಕ್ಕಾಗಿ ಮತ್ತು ಭಾರತದ ಜನರ ಅಗಾಧ ಸ್ನೇಹಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ. ಅವರನ್ನು ತುಂಬಾ ಮೆಚ್ಚಲಾಗುತ್ತದೆ ಮತ್ತು ಪ್ರೀತಿಸಲಾಗುತ್ತದೆ. ನಮ್ಮಿಬ್ಬರ ನಡುವೆ ಏನು ಸಂಭಾಷಣೆ ನಡೆದಿದೆ ಎನ್ನುವುದು ಬೇಡ ಎಂದು ಹೇಳಿದರು.

ಗಲ್ಫ್ ರಾಷ್ಟ್ರಗಳಲ್ಲಿ ಉದ್ವಿಗ್ನತೆ: ಸೌದಿ ಕ್ರೌನ್ ಪ್ರಿನ್ಸ್, ಬಹ್ರೇನ್ ಕಿಂಗ್ ಜೊತೆ ಪ್ರಧಾನಿ ಮೋದಿ ಮಾತುಕತೆ

ಇಸ್ರೇಲ್ ಪ್ರಧಾನಿಯೊಂದಿಗೆ ಮಾತನಾಡಿರುವುದಾಗಿ ಪ್ರಧಾನಿ ಮೋದಿ ಹೇಳಿದ ಬಳಿಕ ನೆತನ್ಯಾಹು ಹೇಳಿಕೆಯನ್ನು ನೀಡಿದ್ದಾರೆ. ಪ್ರಧಾನಿ ಮೋದಿ ಅವರು ಇಸ್ರೇಲ್ ಪ್ರಧಾನಿಯೊಂದಿಗೆ ಮಾತನಾಡಿ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಭಾರತದ ಕಳವಳಗಳನ್ನು ತಿಳಿಸಿದ್ದೇನೆ ಮತ್ತು ನಾಗರಿಕರ ಸುರಕ್ಷತೆಯ ಅಗತ್ಯವನ್ನು ಒತ್ತಿ ಹೇಳಿದ್ದೇನೆ. ಯುದ್ಧವನ್ನು ಬೇಗನೆ ನಿಲ್ಲಿಸುವ ಅಗತ್ಯವನ್ನು ಭಾರತ ಪುನರುಚ್ಚರಿಸುತ್ತದೆ ಎಂದು ಹೇಳಿದ್ದರು.

ವಿದ್ಯಾ ಇರ್ವತ್ತೂರು

View all posts by this author