ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಅಕ್ರಮ ಆಸ್ತಿ ಪ್ರಕರಣದ ವಿಚಾರಣೆ ಮುಂದೂಡಲು ಅಲಹಾಬಾದ್ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಆದೇಶ

Big Relief for Rahul Gandhi: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದ್ದು, ಸದ್ಯಕ್ಕೆ ಈ ಪ್ರಕರಣವನ್ನು ಮುಂದುವರಿಸಬೇಡಿ ಎಂದು ಅಲಹಾಬಾದ್ ಹೈಕೋರ್ಟ್‌ಗೆ ಆದೇಶಿಸಿದೆ. ರಾಹುಲ್ ಗಾಂಧಿಗೆ ವಿಚಾರಣೆಗೆ ಅವಕಾಶ ನೀಡದೆ ಹೈಕೋರ್ಟ್ ಏಕೆ ಆದೇಶಗಳನ್ನು ನೀಡಿತು ಎಂದು ಸರ್ವೋಚ್ಛ ನ್ಯಾಯಾಲಯ ಪ್ರಶ್ನಿಸಿತು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ಸಾಂದರ್ಭಿಕ ಚಿತ್ರ -

Priyanka P
Priyanka P Aug 17, 2026 1:45 PM

ನವದೆಹಲಿ, ಆ.17: ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಸುಪ್ರೀಂ ಕೋರ್ಟ್ (Supreme Court) ರಿಲೀಫ್ ನೀಡಿದ್ದು, ಸದ್ಯಕ್ಕೆ ಈ ಪ್ರಕರಣವನ್ನು ಮುಂದುವರಿಸಬೇಡಿ ಎಂದು ಅಲಹಾಬಾದ್ ಹೈಕೋರ್ಟ್‌ಗೆ ಆದೇಶಿಸಿದೆ. ರಾಹುಲ್ ಗಾಂಧಿ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್‌ಗೆ (Allahabad High Court) ಯಾವುದೇ ತನಿಖಾ ವರದಿಯನ್ನು ಸಲ್ಲಿಸಬಾರದು ಎಂದು ಕೇಂದ್ರೀಯ ತನಿಖಾ ದಳ (CBI) ಮತ್ತು ಜಾರಿ ನಿರ್ದೇಶನಾಲಯಕ್ಕೆ (ED) ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ.

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತ ಶಿಶಿರ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆಯನ್ನು ಮುಂದೂಡುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಆ.17) ಅಲಹಾಬಾದ್ ಹೈಕೋರ್ಟ್‌ಗೆ ನಿರ್ದೇಶನ ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ ಮೋಹನ ಅವರಿದ್ದ ಪೀಠವು ಈ ಆದೇಶ ನೀಡಿದೆ.

ವಿಚಾರಣೆಯ ಸಮಯದಲ್ಲಿ, ರಾಹುಲ್ ಗಾಂಧಿಗೆ ವಿಚಾರಣೆಗೆ ಅವಕಾಶ ನೀಡದೆ ಹೈಕೋರ್ಟ್ ಏಕೆ ಆದೇಶಗಳನ್ನು ನೀಡಿತು ಎಂದು ಸರ್ವೋಚ್ಛ ನ್ಯಾಯಾಲಯ ಪ್ರಶ್ನಿಸಿತು. ಯಾವುದೇ ವ್ಯಕ್ತಿಯು ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವುದು ಪತ್ತೆಯಾದರೆ, ತನಿಖಾ ಸಂಸ್ಥೆಗಳು ತಮ್ಮದೇ ಆದ ಅಧಿಕಾರ ವ್ಯಾಪ್ತಿಯಲ್ಲಿ ಸ್ವತಂತ್ರವಾಗಿ ಕ್ರಮ ಕೈಗೊಳ್ಳಬಹುದು. ಅದಕ್ಕಾಗಿ ನ್ಯಾಯಾಲಯದ ಆದೇಶಗಳ ಅಗತ್ಯವಿರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಪೀಠವು ಸ್ಪಷ್ಟಪಡಿಸಿದೆ.

ಬಂಡಾಯ ಸಂಸದರ ವಿರುದ್ಧ ಸಮರ ಸಾರಿದ ಟಿಎಂಸಿ; ಸುಪ್ರೀಂ ಕೋರ್ಟ್‌ ಮೊರೆ ಹೋಗಲು ನಿರ್ಧಾರ: 20 ಎಂಪಿಗಳ ಅನರ್ಹತೆಗೆ ಕೌಂಟ್‌ಡೌನ್!

ಆದರೆ, ಈ ನಿರ್ದಿಷ್ಟ ಪ್ರಕರಣದಲ್ಲಿ ತನಿಖಾ ಸಂಸ್ಥೆಗಳು ಸ್ವಯಂಪ್ರೇರಿತರಾಗಿ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂಬುದನ್ನು ಸುಪ್ರೀಂ ಕೋರ್ಟ್ ಹೇಳಿದೆ. “ಒಂದು ವೇಳೆ ಇದು ಅಷ್ಟೊಂದು ಗಂಭೀರವಾದ ವಿಷಯವಾಗಿದ್ದರೆ, ನಿಮ್ಮ ತನಿಖಾ ಸಂಸ್ಥೆಯು ಇದುವರೆಗೆ ಏಕೆ ಸುಮ್ಮನೆ ಕುಳಿತಿತ್ತು? ನಿಮಗೆ ಕ್ರಮ ಕೈಗೊಳ್ಳಲು ನ್ಯಾಯಾಲಯದ ನಿರ್ದೇಶನದ ಅಗತ್ಯವಿದೆಯೇ? ನೀವು ಈ ಬಗ್ಗೆ ಯಾವುದೇ ಸ್ವಯಂಪ್ರೇರಿತ (suo motu) ಕ್ರಮ ಕೈಗೊಂಡಿದ್ದೀರಾ?” ಎಂದು ಸಿಬಿಐ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರನ್ನು ನ್ಯಾಯಮೂರ್ತಿ ಬಾಗ್ಚಿ ಪ್ರಶ್ನಿಸಿದರು.

ಇನ್ನು ಕಾಂಗ್ರೆಸ್ ನಾಯಕ ಭಾರತೀಯ ಪಾಸ್‌ಪೋರ್ಟ್ ಜೊತೆಗೆ ಬ್ರಿಟಿಷ್ ಪಾಸ್‌ಪೋರ್ಟ್ ಹೊಂದಿದ್ದಾರೆ ಎಂದು ಆರೋಪಿಸಿ, ಪೌರತ್ವ ಕಾನೂನು ಉಲ್ಲಂಘನೆ ಆರೋಪದ ಮೇಲೆ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕೆಂದು ಶಿಶಿರ್ ಪ್ರತ್ಯೇಕ ಅರ್ಜಿಯಲ್ಲಿ ಕೋರಿದ್ದರು. ಆ ಪ್ರಕರಣದಲ್ಲಿ, ಆರಂಭದಲ್ಲಿ ನ್ಯಾಯಾಲಯವು ರಾಹುಲ್ ಗಾಂಧಿ ವಿರುದ್ಧ ಪ್ರಥಮ ಮಾಹಿತಿ ವರದಿ (FIR) ದಾಖಲಿಸುವಂತೆ ಆದೇಶಿಸಿತ್ತು.

ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಶಿರ್ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಪೋಸ್ಟ್‌ಗಳನ್ನು ಹಾಕಿದ ನಂತರ, ನ್ಯಾಯಾಲಯವು ಆ ಆದೇಶವನ್ನು ತಡೆಹಿಡಿದು ತಾವೇ ಸ್ವತಃ ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿತ್ತು. ಪೌರತ್ವ ವಿವಾದದ ಪ್ರಕರಣವು ಕೂಡ ಸದ್ಯ ಹೈಕೋರ್ಟ್ ಮುಂದೆ ಬಾಕಿ ಉಳಿದಿದೆ.