RBI Update:10, 20 ರೂ. ನಾಣ್ಯಗಳು ರದ್ದಾಗುತ್ತಾ? RBI ನೀಡಿದ ಅಪ್ಡೇಟ್ ಇಲ್ಲಿದೆ!
ಆರ್‌ಬಿಐ 350 ರೂಪಾಯಿ ನೋಟುಗಳನ್ನು ಮುದ್ರಿಸುತ್ತಿದೆ ಎಂಬ ಸುದ್ದಿ ಹಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಸರಿಯಾದ ಮಾಹಿತಿ ಸಿಗದೆ ಜನರು ಗೊಂದಲಕ್ಕೆ ಒಳಗಾಗಿದ್ದಾರೆ. ಈ ಮಧ್ಯೆ 10 ಮತ್ತು 20 ರೂಪಾಯಿ ನಾಣ್ಯಗಳು ಕೂಡ ರದ್ದಾಗುತ್ತದೆ ಎಂಬ ಸುದ್ದಿಯನ್ನು ಹರಡಲಾಗುತ್ತಿದ್ದು, ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟ ಮಾಹಿತಿಯನ್ನು ನೀಡಿದೆ.
ನವದೆಹಲಿ: ಆರ್‌ಬಿಐ 350 ರೂಪಾಯಿ ನೋಟುಗಳನ್ನು ಮುದ್ರಿಸುತ್ತಿದೆ ಎಂಬ ಸುದ್ದಿ ಹಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್(Viral) ಆಗುತ್ತಿದೆ. ಸರಿಯಾದ ಮಾಹಿತಿ ಸಿಗದೆ ಜನರು ಗೊಂದಲಕ್ಕೆ ಒಳಗಾಗಿದ್ದಾರೆ. ಈ ಮಧ್ಯೆ 10 ಮತ್ತು 20 ರೂಪಾಯಿ ನಾಣ್ಯಗಳು ಕೂಡ ರದ್ದಾಗುತ್ತದೆ (RBI Update) ಎಂಬ ಸುದ್ದಿಯನ್ನು ಹರಡಲಾಗುತ್ತಿದ್ದು, ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್(Reserve Bank Of India) ಸ್ಪಷ್ಟ ಮಾಹಿತಿಯನ್ನು ನೀಡಿದೆ. ಆರ್‌ಬಿಐ 350 ರೂಪಾಯಿ ನೋಟುಗಳನ್ನು ಮುದ್ರಿಸುತ್ತಿದೆ ಎಂಬ ಸುದ್ದಿ ವೈರಲ್ ಆಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಹಲವು ಸುದ್ದಿಗಳು ಹೊರ ಬರುತ್ತಿರುವುದರಿಂದ ಜನರು ಸಾಕಷ್ಟು ಗೊಂದಲಕ್ಕೊಳಗಾಗುತ್ತಿದ್ದಾರೆ ಎಂದು ಆರ್‌ಬಿಐ ಕಳವಳ ವ್ಯಕ್ತಪಡಿಸಿದೆ. ಆರ್‌ಬಿಐ, ಕೇಂದ್ರ ಸರ್ಕಾರಿ ಅಧಿಕಾರಿಗಳು, ಹಣಕಾಸು ಇಲಾಖೆ ಸಚಿವರು ಮತ್ತು ಇತರ ಸಿಬ್ಬಂದಿ ಪ್ರತಿಕ್ರಿಯಿಸಿ, ನಕಲಿ ನೋಟುಗಳ ಚಲಾವಣೆ, ಹೊಸ ಕರೆನ್ಸಿ ಮುದ್ರಣ, 10, 20 ರೂಪಾಯಿ ನಾಣ್ಯಗಳ ರದ್ದು ಇತ್ಯಾದಿಗಳ ಬಗ್ಗೆ ವೈರಲ್ ಆಗುತ್ತಿರುವ ಸುದ್ದಿ ನಿಜವೋ ಸುಳ್ಳೋ ಎಂದು ಸ್ಪಷ್ಟನೆ ನೀಡುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ: RBI: ನಿಷ್ಕ್ರಿಯ, ಸ್ಥಗಿತ ಖಾತೆಗಳ ಸಂಖ್ಯೆ ಕಡಿಮೆ ಮಾಡಿ; ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ
ಭಾರತೀಯ ರಿಸರ್ವ್ ಬ್ಯಾಂಕ್ 10 ಮತ್ತು 20 ರೂಪಾಯಿ ನಾಣ್ಯಗಳು ಮತ್ತು ನೋಟುಗಳನ್ನು ರದ್ದುಗೊಳಿಸಲಿದೆ ಎಂಬ ಪೋಸ್ಟ್‌ಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಸದ್ಯ ರಿಸರ್ವ್ ಬ್ಯಾಂಕ್ ಅಧಿಕಾರಿಗಳು ಜನರಿಗಿರುವ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.10 ಮತ್ತು 20 ನಾಣ್ಯಗಳು ಚಲಾವಣೆಯಲ್ಲಿ ಉಳಿಯಲಿವೆ. ಯಾವುದೇ ಊಹಾಪೋಹಕ್ಕೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಕೇಂದ್ರ ಹೇಳಿದೆ. ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ 10 ರೂಪಾಯಿ ನೋಟುಗಳು ಮತ್ತು ನಾಣ್ಯಗಳನ್ನು ಮುದ್ರಿಸುವುದಾಗಿಯೂ ಘೋಷಿಸಿದೆ. ಇದರ ಜೊತೆಗೆ 20 ರೂಪಾಯಿ ನೋಟುಗಳ ಮುದ್ರಣವನ್ನು ಇಲ್ಲಿಯವರೆಗೆ ನಿಲ್ಲಿಸಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ನಕಲಿ ಸುದ್ದಿಗಳಿಂದ ಜನರು ಭಯಭೀತರಾಗಬೇಡಿ ಎಂದು ಅಧಿಕಾರಿಗಳು ಹೇಳಿದ್ದಾರೆ. ಕರೆನ್ಸಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ಆರ್‌ಬಿಐನ ಅಧಿಕೃತ ಘೋಷಣೆಯ ಬಳಿಕವಷ್ಟೇ ನಂಬಬೇಕು ಎಂದು ಮನವಿ ಮಾಡಿದ್ದಾರೆ.