ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Narendra Modi: ನಮ್ಮ ಅತೀ ದೊಡ್ಡ ಶತ್ರು ಅವಲಂಬನೆ; H-1B ವೀಸಾ ಶುಲ್ಕದ ಕುರಿತು ಪ್ರಧಾನಿಯಿಂದ ಮೊದಲ ಪ್ರತಿಕ್ರಿಯೆ

ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಗುಜರಾತ್‌ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಭಾವನಗರದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು ಮತ್ತು ಸ್ವಾವಲಂಬನೆಯ ಅಗತ್ಯವನ್ನು ಪುನರುಚ್ಚರಿಸಿದರು. ನೂರು ದುಃಖಗಳಿಗೆ ಒಂದೇ ಒಂದು ಔಷಧಿ ಇದೆ, ಮತ್ತು ಅದು ಸ್ವಾವಲಂಬಿ ಭಾರತ. ಜಗತ್ತಿಗೆ ಭಾರತ ಏನೆಂದು ತೋರಿಸುವ ಸಮಯ ಬಂದಿದೆ ಎಂದು ಅವರು ಹೇಳಿದ್ದಾರೆ.

H-1B ವೀಸಾ ಶುಲ್ಕದ ಕುರಿತು ಪ್ರಧಾನಿ ಮೋದಿ ಹೇಳಿದ್ದೇನು?

-

Vishakha Bhat Vishakha Bhat Sep 20, 2025 2:06 PM

ಗಾಂಧೀನಗರ: ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಗುಜರಾತ್‌ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಭಾವನಗರದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು ಮತ್ತು ಸ್ವಾವಲಂಬನೆಯ ಅಗತ್ಯವನ್ನು ಪುನರುಚ್ಚರಿಸಿದರು. ಇಂದು ಭಾರತ 'ವಿಶ್ವಬಂಧು ಮನೋಭಾವದಿಂದ ಮುಂದುವರಿಯುತ್ತಿದೆ. ಜಗತ್ತಿನಲ್ಲಿ ನಮಗೆ ಯಾವುದೇ ಪ್ರಮುಖ ಶತ್ರುವಿಲ್ಲ. ನಮ್ಮ ದೊಡ್ಡ ಶತ್ರು ಏನೆಂದರೆ ಬೇರೆ ದೇಶಗಳನ್ನು ನಾವು ಅವಲಂಬಿಸುವುದು. ಇದು ನಮ್ಮ ದೊಡ್ಡ ಶತ್ರು, ಮತ್ತು ನಾವು ಒಟ್ಟಾಗಿ ಭಾರತದ ಈ ಶತ್ರುವನ್ನು, ಅವಲಂಬನೆಯ ಶತ್ರುವನ್ನು ಸೋಲಿಸಬೇಕು" ಎಂದು ಅವರು ಹೇಳಿದ್ದಾರೆ.

ವಿದೇಶಿ ಅವಲಂಬನೆ ಹೆಚ್ಚಾದಷ್ಟೂ ದೇಶದ ವೈಫಲ್ಯ ಹೆಚ್ಚಾಗುತ್ತದೆ. ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗಾಗಿ, ವಿಶ್ವದ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ದೇಶವು ಆತ್ಮನಿರ್ಭರವಾಗಬೇಕು. ನಾವು ಇತರರ ಮೇಲೆ ಅವಲಂಬಿತರಾಗಿದ್ದರೆ, ನಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತದೆ. 1.4 ಶತಕೋಟಿ ದೇಶವಾಸಿಗಳ ಭವಿಷ್ಯವನ್ನು ನಾವು ಇತರರ ಕೈಗೆ ನೀಡಲು ಸಾಧ್ಯವಿಲ್ಲ ಎಂದು ಮೋದಿ ಹೇಳಿದ್ದಾರೆ.



ನೂರು ದುಃಖಗಳಿಗೆ ಒಂದೇ ಒಂದು ಔಷಧಿ ಇದೆ, ಮತ್ತು ಅದು ಸ್ವಾವಲಂಬಿ ಭಾರತ. ಜಗತ್ತಿಗೆ ಭಾರತ ಏನೆಂದು ತೋರಿಸುವ ಸಮಯ ಬಂದಿದೆ. ನಾವು ದೃಢ ಸಂಕಲ್ಪ ಮಾಡಲೇಬೇಕು ಎಂದು ಮೋದಿ ಯುವ ಪೀಳಿಗೆಗೆ ಕಿವಿ ಮಾತು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು H-1B ವೀಸಾ ಅರ್ಜಿ ಶುಲ್ಕದಲ್ಲಿ ಬದಲಾವಣೆ ಘೋಷಿಸಿದ ನಂತರ ಹೆಚ್ಚುತ್ತಿರುವ ಕಳವಳದ ಮಧ್ಯೆ ಪ್ರಧಾನಿ ಮೋದಿ ಅವರ ಈ ಹೇಳಿಕೆ ಬಂದಿದೆ.

ಈ ಸುದ್ದಿಯನ್ನೂ ಓದಿ: H-1B Visa: ಅಮೆರಿಕದ ಮತ್ತೊಂದು ಹೊಡೆತ; H-1B ವೀಸಾ ಶುಲ್ಕದಲ್ಲಿ ಭಾರಿ ಏರಿಕೆ ಮಾಡಿದ ಟ್ರಂಪ್‌, ಭಾರತೀಯರಿಗಾಗುವ ನಷ್ಟವೇನು?

ಭಾರತದ ಮೇಲೆ ನಿಯಂತ್ರಣ ಸಾಧಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಲವು ನಿಯಮಗಳನ್ನು ಜಾರಿಗೆ ತಂದಿದ್ದಾರೆ. H-1B ವೀಸಾ ಹೊಂದಿರುವವರಲ್ಲಿ ಭಾರತೀಯರು ನಿರಂತರವಾಗಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸರ್ಕಾರಿ ಮಾಹಿತಿಯ ಪ್ರಕಾರ, ಕಳೆದ ವರ್ಷ ಭಾರತವು H-1B ವೀಸಾಗಳ ಅತಿದೊಡ್ಡ ಫಲಾನುಭವಿಯಾಗಿದೆ. H-1B ವೀಸಾ ಅಮೆರಿಕದ ತಾತ್ಕಾಲಿಕ ವೀಸಾ ಆಗಿದ್ದು, ವಿಶೇಷ ಕೌಶಲ್ಯ ಹೊಂದಿರುವ ವಿದೇಶಿ ವೃತ್ತಿಪರರನ್ನು ನೇಮಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಇದನ್ನು 1990 ರಲ್ಲಿ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ಕ್ಷೇತ್ರಗಳಲ್ಲಿ ಪದವಿ ಅಥವಾ ಅದಕ್ಕಿಂತ ಹೆಚ್ಚಿನ ಪದವಿ ಹೊಂದಿರುವ ಜನರಿಗೆ ರಚಿಸಲಾಯಿತು.