Narendra Modi: ತಾಯಿಯಿಂದಲೇ ಪ್ರಧಾನಿ ಮೋದಿಯ ನಿಂದನೆ; ಹೊಸ AI ವಿಡಿಯೋ ಹಂಚಿಕೊಂಡ ಕಾಂಗ್ರೆಸ್
ಬಿಹಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪ್ರಧಾನಿ (Narendra Modi) ನರೇಂದ್ರ ಮೋದಿ ಅವರ ತಾಯಿಗೆ ನಿಂದಿಸಲಾಗಿದೆ ಎಂದು ಬಿಜೆಪಿ ಬಹು ದೊಡ್ಡ ಪ್ರತಿಭಟನೆ ನಡೆಸಿತ್ತು. ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅವರ ತಾಯಿ ಹೀರಾಬೆನ್ ಇರುವ ಎಐ ವಿಡಿಯೋ ವೈರಲ್ ಆಗಿದೆ.

-

ಪಟನಾ: ಬಿಹಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪ್ರಧಾನಿ (Narendra Modi) ನರೇಂದ್ರ ಮೋದಿ ಅವರ ತಾಯಿಗೆ ನಿಂದಿಸಲಾಗಿದೆ ಎಂದು ಬಿಜೆಪಿ ಬಹು ದೊಡ್ಡ ಪ್ರತಿಭಟನೆ ನಡೆಸಿತ್ತು. ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅವರ ತಾಯಿ ಹೀರಾಬೆನ್ (Heeraben) ಇರುವ ಎಐ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆದಿದೆ. ವಿಡಿಯೋದಲ್ಲಿ ಪ್ರಧಾನಿ ಮೋದಿ ಹಾಗೂ ಅವರ ತಾಯಿ ಹೀರಾಬೆನ್ ಮೋದಿ ಹೋಲುವ ದೃಶ್ಯ ಸೃಷ್ಟಿಸಲಾಗಿದ್ದು, ವಿಡಿಯೋದಲ್ಲಿ ಮಗನೇ ತಮ್ಮನ್ನು ರಾಜಕೀಯಕ್ಕೆ ಎಳೆದು ತಂದಿರುವುದಕ್ಕೆ ಹೀರಾಬೆನ್ ಅವರು ದುಃಖ ವ್ಯಕ್ತಪಡಿಸುತ್ತಿರುವುದಾಗಿ ತೋರಿಸಲಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋಗೆ ಕಾಂಗ್ರೆಸ್ ಹೊಸ ಅಧೋಗತಿಗೆ ಇಳಿಯುತ್ತಿದೆ. ಮೊದಲನೆಯದಾಗಿ, ಕಾಂಗ್ರೆಸ್ ವೇದಿಕೆಯಿಂದ ಪ್ರಧಾನಿ ಮೋದಿಯವರ ತಾಯಿಯ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಲಾಯಿತು. ಈಗ, ಪಕ್ಷವು ಅವರ ಕೃತಕ ಬುದ್ಧಿಮತ್ತೆ ಆಧಾರಿತ ವೀಡಿಯೊವನ್ನು ರಚಿಸುವ ಮೂಲಕ ಅವರನ್ನು ಮತ್ತೆ ಅವಮಾನಿಸುತ್ತಿದೆ. ಬಿಹಾರ ಮತ್ತು ಭಾರತ ಈ ಅವಮಾನವನ್ನು ಸಹಿಸುವುದಿಲ್ಲ. ಅಂತಹ ವೀಡಿಯೊವನ್ನು ತಯಾರಿಸಿ ಅವಮಾನಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ವಕ್ತಾರ ಸೈಯದ್ ಶಹನವಾಜ್ ಹುಸೇನ್ ಹೇಳಿದ್ದಾರೆ.
साहब के सपनों में आईं "माँ"
— Bihar Congress (@INCBihar) September 10, 2025
देखिए रोचक संवाद 👇 pic.twitter.com/aA4mKGa67m
ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮತ್ತು ಇತರ ಹಲವಾರು ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ರಾಹುಲ್ ಗಾಂಧಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಮೋದಿಯವರ ದಿವಂಗತ ತಾಯಿ ಮಹಿಳೆಯನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಅವಮಾನಿಸಿದೆ ಎಂದು ಆರೋಪಿಸಿದ್ದಾರೆ.ಕಾಂಗ್ರೆಸ್ ಪಕ್ಷವು ಪ್ರಧಾನಿ ಮೋದಿಯವರ ತಾಯಿಯ ಕೃತಕ ಬುದ್ಧಿಮತ್ತೆಯ ವೀಡಿಯೊವನ್ನು ಬಿಡುಗಡೆ ಮಾಡಿರುವುದು ದುರದೃಷ್ಟಕರ. ಅವರು ಈ ದೇಶದ ಕೋಟ್ಯಂತರ ತಾಯಂದಿರ ಭಾವನೆಗಳನ್ನು ಅಪಹಾಸ್ಯ ಮಾಡುತ್ತಿದ್ದಾರೆ. ತಾಯಿಯನ್ನು ದುರ್ಗಾ, ಲಕ್ಷ್ಮಿ ಮತ್ತು ಸರಸ್ವತಿಯಂತೆ ಪೂಜಿಸುತ್ತೇವೆ ಎಂದು ಬಿಜೆಪಿ ವಕ್ತಾರ ಅರವಿಂದ್ ಕುಮಾರ್ ಸಿಂಗ್ ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ: Murder Case: ಬಿಹಾರ ವಿಧಾನ ಚುನಾವಣೆ ಹತ್ತಿರದಲ್ಲಿರುವಾಗಲೇ ಆರ್ಜೆಡಿ ನಾಯಕನ ಗುಂಡಿಕ್ಕಿ ಹತ್ಯೆ
ಕಾಂಗ್ರೆಸ್ ಈ ವಿಡಿಯೋವನ್ನು ಸಮರ್ಥಿಸಿಕೊಂಡಿದ್ದು, ಪಕ್ಷದ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥರೂ ಆಗಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ, ಯಾರಿಗೂ ಅಗೌರವ ತೋರಿಲ್ಲ ಎಂದು ಹೇಳಿದ್ದು, ಬಿಜೆಪಿ ಸಹಾನುಭೂತಿ ಗಳಿಸಲು ಈ ವಿಷಯವನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.