ಪಟನಾ: ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆದ NEET ಪ್ರತಿಭಟನೆಯ (Bihar NEET Protest) ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು A-K 47 ರೈಫಲ್‌ನಿಂದ ಗುಂಡು ಹಾರಿಸುತ್ತಿರುವ ವೀಡಿಯೊ ವೈರಲ್ (Viral Video) ಆದ ಬೆನ್ನಲ್ಲೇ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿ ಅಭಿಷೇಕ್ ಪಟೇಲ್ ಅವರನ್ನು ಅಮಾನತುಗೊಳಿ ಸಲಾಗಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಷಯಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯಿಂದ ಉದ್ವಿಗ್ನತೆಯ ನಡುವೆ ಈ ಕ್ರಮ ಕೈಗೊಳ್ಳಲಾಗಿದೆ.
ನೀಟ್ ವಿವಾದದ ಕುರಿತು ಬಿಹಾರ ಬಂದ್ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದ ಸಿವಾನ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪಟೇಲ್ ನಿಯೋಜಿಸಲಾದ ಎಸ್‌ಐಟಿಯ ಭಾಗವಾಗಿದ್ದರು. ಅವರು ಎಕೆ -47 ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೀಡಿಯೊ ವೈರಲ್ ಆಗಿದ್ದು, ಅಧಿಕಾರಿಗಳು ಕ್ರಮ ಕೈಗೊಂಡು ಅವರನ್ನು ಅಮಾನತುಗೊಳಿಸಿದ್ದಾರೆ.
ರಾಜ್ಯಾದ್ಯಂತ ನಡೆದ ಬಂದ್‌ನಲ್ಲಿ ಹಲವಾರು ಜಿಲ್ಲೆಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ದೊಡ್ಡ ಪ್ರದರ್ಶನಗಳನ್ನು ನಡೆಸಿದವು, ಹಲವಾರು ಸ್ಥಳಗಳಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆಗಳು ನಡೆದ ವರದಿಯಾಗಿದೆ. ಜನಸಮೂಹವನ್ನು ಚದುರಿಸಲು ರಾಜ್ಯಾದ್ಯಂತ ವಿವಿಧ ಪ್ರತಿಭಟನಾ ಸ್ಥಳಗಳಲ್ಲಿ ಪೊಲೀಸರು ಲಾಠಿಚಾರ್ಜ್, ಅಶ್ರುವಾಯು ಮತ್ತು ಜಲಫಿರಂಗಿಗಳನ್ನು ಬಳಸಿದ್ದರು.
ವಿಡಿಯೋ ನೋಡಿ
ಇನ್ನು ಸಿವಾನ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗಾಯಗೊಂಡ ಮೂವರು ಪ್ರತಿಭಟನಾಕಾರರಿಗೆ ಪಾಟ್ನಾದ ಜಯಪ್ರಭಾ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ. ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ವಿದ್ಯಾರ್ಥಿಗಳ ಮೇಲೆ ಪೊಲೀಸ್ ಸಿಬ್ಬಂದಿ ಗುಂಡು ಹಾರಿಸುತ್ತಿರುವ ಘಟನೆಯ ವೀಡಿಯೊವನ್ನು ಪೋಸ್ಟ್ ಮಾಡಿ ಕಿಡಿ ಕಾರಿದ್ದಾರೆ.
ನೀಟ್ ಆಯ್ತು, ಇನ್ನು E20 ಪೆಟ್ರೋಲ್ ಸರದಿ; ಮತ್ತೊಂದು ಬೃಹತ್ ಜನಾಂದೋಲನಕ್ಕೆ ಸಜ್ಜಾಗುತಿದ್ಯಾ ದೇಶ?
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಈ ವಿಷಯವನ್ನು ಪ್ರಸ್ತಾಪಿಸಿ, ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಪೆಲೆಟ್ ಗನ್‌ಗಳು ಮತ್ತು ಬಿಹಾರದಲ್ಲಿ ಎಕೆ-47ಗಳ ಬಳಕೆಯನ್ನು ಉಲ್ಲೇಖಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.