ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರಿಮಿನಲ್‌ ಕೇಸ್‌ನಲ್ಲಿ 30 ದಿನ ಬಂಧನದಲ್ಲಿದ್ದರೆ ಪ್ರಧಾನಿ, ಸಿಎಂ ಅಧಿಕಾರ ವಜಾ? ಕೇಂದ್ರ ಸರ್ಕಾರದ ಪ್ಲಾನ್‌ ಏನು?

ಮಹತ್ವದ ಬೆಳವಣಿಗೆಯಲ್ಲಿ, ಗಂಭೀರ ಅಪರಾಧಗಳಿಗಾಗಿ ಸತತ 30 ದಿನಗಳ ಕಾಲ ಬಂಧನದಲ್ಲಿಡಲ್ಪಟ್ಟ ಸಚಿವರನ್ನು ತೆಗೆದುಹಾಕುವ ವಿವಾದಾತ್ಮಕ 130 ನೇ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಜುಲೈ 17 ರಂದು ತನ್ನ ವರದಿಯನ್ನು ಅಂಗೀಕರಿಸುವ ನಿರೀಕ್ಷೆಯಿದೆ.

30 ದಿನ ಜೈಲಿನಲ್ಲಿದ್ದರೆ ಪ್ರಧಾನಿ, ಸಿಎಂ ಅಧಿಕಾರ ವಜಾ?

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jul 2, 2026 4:13 PM

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ, ಗಂಭೀರ ಅಪರಾಧಗಳಿಗಾಗಿ ಸತತ 30 ದಿನಗಳ ಕಾಲ ಬಂಧನದಲ್ಲಿಡಲ್ಪಟ್ಟ ಸಚಿವರನ್ನು ತೆಗೆದುಹಾಕುವ ವಿವಾದಾತ್ಮಕ 130 ನೇ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿ ( The Joint Parliamentary Committee ) ಜುಲೈ 17 ರಂದು ತನ್ನ ವರದಿಯನ್ನು ಅಂಗೀಕರಿಸುವ ನಿರೀಕ್ಷೆಯಿದೆ. ಈ ಮಸೂದೆ ಜಾರಿಯಾದರೆ, ಪ್ರಧಾನಿ, ಮುಖ್ಯಮಂತ್ರಿಗಳು ಅಥವಾ ಇತರ ಮಂತ್ರಿಗಳನ್ನು ಬಂಧಿಸಿ ಸತತ 30 ದಿನಗಳ ಕಾಲ ಕಸ್ಟಡಿಯಲ್ಲಿಟ್ಟರೆ ಅವರು ಅಧಿಕಾರವನ್ನು ಕಳೆದುಕೊಳ್ಳುತ್ತಾರೆ.

ಜುಲೈ 20 ರಂದು ಪ್ರಾರಂಭವಾಗುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಈ ಮಸೂದೆಯನ್ನು ಪರಿಗಣಿಸಲಾಗುವುದು ಮತ್ತು ಅಂಗೀಕಾರಕ್ಕಾಗಿ ಮಂಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಳೆದ ವರ್ಷ ಆಗಸ್ಟ್‌ನಲ್ಲಿ ಮಸೂದೆಯನ್ನು ಮಂಡಿಸಿದ್ದರು. ಇದರ ಮೇಲ್ವಿಚಾರಣೆಗಾಗಿ ಪರಿಶೀಲಿಸಲು ಬಿಜೆಪಿ ಸಂಸದೆ ಅಪರಾಜಿತಾ ಸಾರಂಗಿ ಅವರ ಅಧ್ಯಕ್ಷತೆಯಲ್ಲಿ 31 ಸದಸ್ಯರ ಸಂಸದೀಯ ಸಮಿತಿಯನ್ನು ರಚಿಸಲಾಗಿತ್ತು.

ಈ ಕುರಿತಾಗಿ ಸಂವಿಧಾನದ 130 ನೇ ವಿಧಿಗೆ ತಿದ್ದುಪಡಿ ಮಾಡುವ ನಿಟ್ಟಿನಲ್ಲಿ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಪರಿಶೀಲಿಸುತ್ತಿದೆ. ಜುಲೈ 17 ರಂದು ತನ್ನ ವರದಿಯನ್ನು ಅಂಗೀಕರಿಸುವ ನಿರೀಕ್ಷೆಯಿದೆ. ಮಸೂದೆ ಜಾರಿಯಾಗಲು ಸಂಸತ್ತಿನಲ್ಲಿ ಅಗತ್ಯ ಬಹುಮತದ ಅವಶ್ಯಕತೆ ಇದೆ. ಸಂಸತ್ತಿನಲ್ಲಿ ಚರ್ಚೆ ನಡೆಸಿ ಬಳಿಕ ಮಸೂದೆಯನ್ನು ಅಂಗೀಕಾರ ಮಾಡಬೇಕಾಗಿದೆ. ಹೀಗಾಗಿ ಈ ಮಸೂದೆ ಮಹತ್ವ ಪಡೆದುಕೊಂಡಿದೆ.

ರಾಜಕೀಯ ದ್ವೇಷಕ್ಕೆ ಬಳಕೆ ಸಾಧ್ಯತೆ ಆರೋಪ

ಈ ಮಸೂದೆ ಜಾರಿಯಾದರೆ ರಾಜಕೀಯ ದ್ವೇಷಕ್ಕೆ ಬಳಕೆ ಸಾಧ್ಯತೆ ಹೆಚ್ಚಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಹೀಗಾಗಿ ಸಮಿತಿ ನಡೆಯೂ ಕುತೂಹಲಕ್ಕೆ ಕಾರಣವಾಗಿದೆ. ರಾಜಕೀಯ ದ್ವೇಷಕ್ಕಾಗಿ ಈ ಕಾನೂನನ್ನು ದುರುಪಯೋಗವನ್ನು ತಡೆಗಟ್ಟಲು ಏನೆಲ್ಲಾ ಸುರಕ್ಷತಾ ಕ್ರಮಗಳನ್ನು ಶಿಫಾರಸು ಮಾಡುತ್ತದೆ ಎಂಬುದರ ಮೇಲೆ ಈ ಕಾಯ್ದೆಯ ಸಾಧಕ ಬಾಧಕಗಳು ತಿಳಿದು ಬರಲಿದೆ. ಕಾಯ್ದೆ ಪ್ರಕಾರ, ಪ್ರಧಾನಿ, ಮುಖ್ಯಮಂತ್ರಿ ಅಥವಾ ಯಾವುದೇ ಕೇಂದ್ರ ಅಥವಾ ರಾಜ್ಯ ಸಚಿವರು ಐದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಜೈಲು ಶಿಕ್ಷೆಗೆ ಗುರಿಯಾಗಬಹುದಾದ ಪ್ರಕರಣ ದಾಖಲಾಗಿದ್ದರೆ ಮತ್ತು ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ, ಅವರನ್ನು ರಾಷ್ಟ್ರಪತಿಗಳು ಅಥವಾ ರಾಜ್ಯಪಾಲರು ಸ್ವಯಂಚಾಲಿತವಾಗಿ ಅಧಿಕಾರದಿಂದ ವಜಾಗೊಳಿಸುವ ಅಧಿಕಾರವನ್ನು ನೀಡಲಾಗುತ್ತದೆ.

ಸರ್ಕಾರವು ಸಂವಿಧಾನದ ಪ್ರಮುಖ ವಿಧಿಗಳಿಗೆ ಮತ್ತು ಕೆಲವು ಕಾಯ್ದೆಗಳಿಗೆ ತಿದ್ದುಪಡಿ ತರಬೇಕಾಗಿದೆ. ಸಂವಿಧಾನದ 75, 164, ಮತ್ತು 239ಎಎ ವಿಧಿಗಳಿಗೆ ತಿದ್ದುಪಡಿ ತರಬೇಕಾಗಿದೆ. ಆದರೆ ಇದಕ್ಕೆ ವಿಪಕ್ಷಗಳಿಂದ ವಿರೋಧ ವ್ಯಕ್ತವಾಗಿತ್ತು.