ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಇನ್ಮುಂದೆ ಜನನ, ಮರಣ ನೋಂದಣಿ ನಿಯಮ ಕಠಿಣ; ಅಕ್ಟೋಬರ್ 1ರಿಂದ ಜಾರಿಯಾಗಲಿದೆ ಹೊಸ ಕಾಯ್ದೆ

Births and Deaths (Amendment) Bill, 2026: ಜನನ ಮತ್ತು ಮರಣಕ್ಕೆ ಸಂಬಂಧಿಸಿದ ಹೊಸ ತಿದ್ದುಪಡಿ ಕಾಯ್ದೆ ಅಕ್ಟೋಬರ್ 1ರಿಂದ ಜಾರಿಯಾಗಲಿದೆ. ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸಲ್ಪಟ್ಟಿರುವ 'ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ- 2026'ಕ್ಕೆ ಕಳೆದ ತಿಂಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದು, ಇದು ಕಾಯ್ದೆಯಾಗಿ ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆ.

ಜನನ, ಮರಣ ನೋಂದಣಿ ತಿದ್ದುಪಡಿ ಕಾಯ್ದೆ ಅಕ್ಟೋಬರ್ 1ರಿಂದ ಜಾರಿ

ಸಂಗ್ರಹ ಚಿತ್ರ -

ನವದೆಹಲಿ: ಜನನ ಮತ್ತು ಮರಣ ನೋಂದಣಿ ತಿದ್ದುಪಡಿ ಕಾಯ್ದೆ (Registration Of Births And Deaths (Amendment) Act) ಅಕ್ಟೋಬರ್ 1ರಿಂದ ಜಾರಿಯಾಗಲಿದ್ದು, ಇದರಿಂದ ಇನ್ನು ಮುಂದೆ ಜನನ, ಮರಣ ನೋಂದಣಿ ನಿಯಮಗಳು ಹೆಚ್ಚು ಕಠಿಣವಾಗಲಿದೆ. ಸಂಸತ್ತಿನ (Parliament) ಉಭಯ ಸದನಗಳಲ್ಲಿ ಅಂಗೀಕರಿಸಲ್ಪಟ್ಟ 'ಜನನ ಮತ್ತು ಮರಣಗಳ ನೋಂದಣಿ ತಿದ್ದುಪಡಿ ಮಸೂದೆ- 2026' ಕ್ಕೆ (Births and Deaths (Amendment) Bill, 2026) ಕಳೆದ ತಿಂಗಳು ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರು ಅಂಕಿತ ಹಾಕಿದ್ದಾರೆ. ಇದರಿಂದ ಕಾನೂನಾಗಿ ಪರಿವರ್ತನೆಯಾಗಿರುವ ಈ ಕಾಯ್ದೆಯಡಿ ಜನನ ಮತ್ತು ಮರಣಗಳ ತಡವಾದ ನೋಂದಣಿಗೆ ಸಂಬಂಧಿಸಿ ನಿಯಮಗಳನ್ನು ಹೆಚ್ಚು ಕಠಿಣಗೊಳಿಸಲಾಗಿದೆ ಎಂದು ಭಾರತದ ರಿಜಿಸ್ಟ್ರಾರ್ ಜನರಲ್ ಮೃತ್ಯುಂಜಯ ಕುಮಾರ್ ನಾರಾಯಣ್ ಬುಧವಾರ ತಿಳಿಸಿದ್ದಾರೆ.

ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿರುವ ನಾರಾಯಣ್, ಜನನ ಮತ್ತು ಮರಣಗಳ ನೋಂದಣಿ ತಿದ್ದುಪಡಿ ಕಾಯ್ದೆ- 2026 (2026 ರ 12) ರ ಸೆಕ್ಷನ್ 1 ರ ಉಪ-ವಿಭಾಗ (2) ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸುವ ಮೂಲಕ ಕೇಂದ್ರ ಸರ್ಕಾರವು 2026ರ ಅಕ್ಟೋಬರ್ 1ರಂದು ಜನನ ಮತ್ತು ಮರಣಗಳ ತಡವಾದ ನೋಂದಣಿಗೆ ಸಂಬಂಧಿಸಿದ ನಿಯಮಗಳನ್ನು ಕಠಿಣಗೊಳಿಸುತ್ತದೆ. ಇದಕ್ಕೆ ಸಂಬಂಧಿಸಿ ಎರಡು ವರ್ಷಗಳ ಅನಂತರ ಸಲ್ಲಿಸುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯದ ಮೂಲಕ ನಡೆಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಬದಲಾಗುತ್ತಿದೆ ಜಮ್ಮು ಮತ್ತು ಕಾಶ್ಮೀರ: 2025ರಲ್ಲಿ ಒಂದೇ ಒಂದು ಕಲ್ಲು ತೂರಾಟದ ಘಟನೆಯಿಲ್ಲ, ಇಲ್ಲಿದೆ ವರದಿ

ಜನನ ಮತ್ತು ಮರಣಗಳ ನೋಂದಣಿ ಕಾಯ್ದೆ 1969ರ ಕಾಯ್ದೆಗೆ 2023ರಲ್ಲಿ ತಿದ್ದುಪಡಿ ಮಾಡಿದಂತೆ ಸೆಕ್ಷನ್ 13(3) ಅನ್ನು ತಿದ್ದುಪಡಿ ಮಾಡಲಾಗಿದೆ. ಇದು ಜನನ ಮತ್ತು ಮರಣದ ಸಮಯೋಚಿತ ವರದಿ ದಾಖಲೆಯನ್ನು ಕಡ್ಡಾಯವಾಗಿ ಹೊಂದಲು ಉತ್ತೇಜಿಸುತ್ತದೆ ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.

ಹೊಸ ಕಾಯ್ದೆ ಪ್ರಕಾರ ಜನನ ಅಥವಾ ಮರಣ ಸಂಭವಿಸಿದ ಎರಡು ವರ್ಷಗಳ ಒಳಗಾಗಿ ನೋಂದಣಿಗಾಗಿ ಸಲ್ಲಿಸುವ ಅರ್ಜಿಗಳಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ , ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಅಥವಾ ಅಧಿಕೃತ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಅವರಿಂದ ಆದೇಶದ ಅಗತ್ಯವಿರುತ್ತದೆ. ನಿಗದಿತ ಶುಲ್ಕ ಪಾವತಿಸಿದ ಬಳಿಕ ಸಂಬಂಧಪಟ್ಟ ಅಧಿಕಾರಿಯು ಘಟನೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು ಎಂದು ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆ.

ಕಾಶ್ಮೀರದ ಉಧಂಪುರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ, ಮುಂದುವರಿದ ಶೋಧ ಕಾರ್ಯ

ಜನನ ಮತ್ತು ಮರಣಗಳ ನೋಂದಣಿ ಕಾಯ್ದೆಯನ್ನು 1969ರಲ್ಲಿ ಜಾರಿಗೊಳಿಸಲಾಗಿತ್ತು. ಅಡಿಯಲ್ಲಿ ಜನನ ಮತ್ತು ಮರಣಗಳ ನೋಂದಣಿ ಕಡ್ಡಾಯವಾಗಿದ್ದು ಈ ಕಾನೂನಿನ ಅಡಿಯಲ್ಲಿ ನೀಡಲಾಗುವ ಪ್ರಮಾಣ ಪತ್ರವು ಕಾನೂನುಬದ್ಧ ಗುರುತನ್ನು ಒದಗಿಸುತ್ತದೆ. ಇದನ್ನು ಅಧಿಕೃತ ಸಾಕ್ಷ್ಯವಾಗಿ ಪರಿಗಣಿಸಲಾಗುತ್ತದೆ. ಈ ಕಾಯ್ದೆಗೆ 2023ರಲ್ಲಿ ತಿದ್ದುಪಡಿ ಮಾಡಲಾಗಿದ್ದು, ಇದನ್ನು ಅಕ್ಟೋಬರ್ 1ರಿಂದ ಜಾರಿಗೊಳಿಸಲಾಗುತ್ತಿದೆ. ಈ ಕಾಯ್ದೆ ತಿದ್ದುಪಡಿ ಮೂಲಕ ಜನನ ಮತ್ತು ಮರಣಗಳ ಕುರಿತು ಸಕಾಲದಲ್ಲಿ ವರದಿ ಮಾಡುವುದನ್ನು ಉತ್ತೇಜಿಸುವುದಾಗಿ ಸರ್ಕಾರ ತಿಳಿಸಿದೆ.