ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅಸ್ಸಾಂನಲ್ಲಿ ಹೈಡ್ರಾಮ; ಕಾಂಗ್ರೆಸ್ ಕಚೇರಿ ಮುಂದೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

Guwahati Protest: ಅಸ್ಸಾಂನ ಗುವಾಹಟಿಯಲ್ಲಿರುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಚೇರಿ ರಾಜೀವ್ ಭವನದ ಮುಂದೆ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಶನಿವಾರ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಆರೋಪಗಳನ್ನು ಹೊರಿಸಿದ ಪ್ರತಿಭಟನಾಕಾರರು ಕ್ಷಮೆಯಾಚನೆಗೆ ಆಗ್ರಹಿಸಿದರು. ಈ ವೇಳೆ ಕೆಲವರು ಬ್ಯಾರಿಕೇಡ್‌ಗಳನ್ನು ದಾಟಿ ಮುನ್ನುಗ್ಗಿದ್ದು, ಪೊಲೀಸರು ಹಲವರನ್ನು ವಶಕ್ಕೆ ಪಡೆದರು. ಅಸ್ಸಾಂ ಸಚಿವೆ ನೀಲಿಮಾ ದೇವಿ ಸೇರಿ ಬಿಜೆಪಿ ನಾಯಕಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಹಿಳೆಯರ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಎತ್ತಿದರು.

ಗುವಾಹಟಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪ್ರತಿಭಟನೆ

ಗುವಾಹಟಿಯಲ್ಲಿ ನಡೆದ ಪ್ರತಿಭಟನೆ ದೃಶ್ಯ -

Profile
Sushmitha Jain Oct 10, 2026 10:30 PM

ದಿಸ್‌ಪುರ, ಅ. 10: ಅಸ್ಸಾಂನ ಗುವಾಹಟಿಯಲ್ಲಿರುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಚೇರಿ ರಾಜೀವ್ ಭವನದ (Rajiv Bhawan) ಮುಂದೆ ಶನಿವಾರ ರಾಜಕೀಯ ಉದ್ವಿಗ್ನತೆ ಉಂಟಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಆರೋಪಗಳನ್ನು ಹೊರಿಸಿ, ಕ್ಷಮೆಯಾಚನೆಗೆ ಆಗ್ರಹಿಸಿ ಬಿಜೆಪಿ ಅಸ್ಸಾಂ ಪ್ರದೇಶ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ರಾಜೀವ್ ಭವನದತ್ತ ಮೆರವಣಿಗೆ ನಡೆಸಿ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕೆಲ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ದಾಟಿ ಕಾಂಗ್ರೆಸ್ ಕಚೇರಿಯ ಮುಂಭಾಗಕ್ಕೆ ತಲುಪಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದ ಅಸ್ಸಾಂ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಮಹಿಳೆಯರ ಗೌರವ ಮತ್ತು ಸುರಕ್ಷತೆ ಕುರಿತು ಪ್ರಶ್ನೆ

ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ನಾಯಕಿ ರಾಯ್, ಮಣಿಪುರದ ಸಂಸದರೊಬ್ಬರ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಪ್ರಕರಣ ಬಾಕಿ ಇರುವಾಗಲೇ ಅಕ್ಟೋಬರ್ 9ರಂದು ಆ ಸಂಸದರನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ, ಆ ಸಂಸದರು ರಾಹುಲ್ ಗಾಂಧಿ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ದೂರಿದರು.

ಆರೋಪ ಎದುರಿಸುತ್ತಿರುವ ಸಂಸದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಮಹಿಳೆಯರ ಸುರಕ್ಷತೆ ಮತ್ತು ಗೌರವದ ವಿಚಾರವನ್ನು ಕಾಂಗ್ರೆಸ್ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಟೀಕಿಸಿದರು.

“ಭಾರತದಲ್ಲಿ ಮಹಿಳೆಯರನ್ನು ಪೂಜ್ಯಭಾವದಿಂದ ಕಾಣಲಾಗುತ್ತದೆ. ಆದರೆ ಕಾಂಗ್ರೆಸ್ ಮಹಿಳೆಯರನ್ನು ಕೇವಲ ಮತಗಳಿಗಾಗಿ ಬಳಸಿಕೊಳ್ಳುತ್ತದೆ” ಎಂದು ರಾಯ್ ಹೇಳಿದರು. ಇದಲ್ಲದೆ, ರಾಹುಲ್ ಗಾಂಧಿ ಅವರು ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ ಅವರು, ದೇಶದ ಮಹಿಳೆಯರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಪೊಲೀಸ್ ವಶಕ್ಕೆ

ಪ್ರತಿಭಟನೆಯಲ್ಲಿ ಸಚಿವೆಯೂ ಭಾಗಿ

ಅಸ್ಸಾಂ ಸಚಿವೆ ನೀಲಿಮಾ ದೇವಿ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಮಹಿಳೆಯರ ಸುರಕ್ಷತೆಯ ವಿಚಾರದಲ್ಲಿ ರಾಹುಲ್ ಗಾಂಧಿ ಅವರ ನಿಲುವನ್ನು ಪ್ರಶ್ನಿಸಿದರು. “ರಾಹುಲ್ ಗಾಂಧಿ ಮಹಿಳೆಯರ ಸುರಕ್ಷತೆಗಾಗಿ ಧ್ವನಿ ಎತ್ತುವುದಾಗಿ ಹೇಳುತ್ತಾರೆ. ಹಾಗಾದರೆ ಭಾರತದಲ್ಲಿ ನಡೆದಿರುವ ಈ ವಿಚಾರದ ಬಗ್ಗೆ ಅವರು ಏಕೆ ಮೌನವಾಗಿದ್ದಾರೆ?” ಎಂದು ಅವರು ಪ್ರಶ್ನಿಸಿದರು.

ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು “ಕಾಂಗ್ರೆಸ್ ಮುರ್ದಾಬಾದ್” ಮತ್ತು “ರಾಹುಲ್ ಗಾಂಧಿ ಮುರ್ದಾಬಾದ್” ಎಂಬ ಘೋಷಣೆಗಳನ್ನು ಕೂಗುತ್ತಾ, ಆರೋಪಗಳ ಕುರಿತು ಹೊಣೆಗಾರಿಕೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.