ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BJP National President: ಸಂಕ್ರಾಂತಿಯಿಂದ ಬಿಜೆಪಿಗೆ ಹೊಸ ಸಾರಥಿ? ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ನಬಿನ್‌ ಆಯ್ಕೆ ಸಾಧ್ಯತೆ

Nitin Nabin: ಬಿಜೆಪಿಗೆ ನೂತನ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತಿದ್ದು, ಹೊಸ ವರ್ಷದ ಮೊದಲ ತಿಂಗಳಿನಲ್ಲಿ (ಜನವರಿ) ರಾಜ್ಯಗಳ ಬಿಜೆಪಿ ಅಧ್ಯಕ್ಷರನ್ನು ದೆಹಲಿಗೆ ಕರೆಸುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಜನವರಿ 18 ರಿಂದ ಜನವರಿ 20 ರೊಳಗೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಪೂರ್ಣಗೊಳ್ಳುವ ನಿರೀಕ್ಷೆಯಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ನಬಿನ್‌ ಆಯ್ಕೆ ಸಾಧ್ಯತೆ

ನಿತಿನ್‌ ನಬಿನ್‌ -

Vishakha Bhat
Vishakha Bhat Dec 27, 2025 8:17 PM

ನವದೆಹಲಿ: ಬಿಜೆಪಿಗೆ ನೂತನ ರಾಷ್ಟ್ರೀಯ ಅಧ್ಯಕ್ಷರನ್ನು (Nitin Nabin) ಆಯ್ಕೆ ಮಾಡಲಾಗುತ್ತಿದ್ದು, ಹೊಸ ವರ್ಷದ ಮೊದಲ ತಿಂಗಳಿನಲ್ಲಿ (ಜನವರಿ) ರಾಜ್ಯಗಳ (BJP National President) ಬಿಜೆಪಿ ಅಧ್ಯಕ್ಷರನ್ನು ದೆಹಲಿಗೆ ಕರೆಸುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಜನವರಿ 18 ರಿಂದ ಜನವರಿ 20 ರೊಳಗೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಪೂರ್ಣಗೊಳ್ಳುವ ನಿರೀಕ್ಷೆಯಿದೆ. ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ನೇಮಕವನ್ನು ಜನವರಿ 20ರೊಳಗೆ ಪ್ರಕಟಿಸುವ ಸಾಧ್ಯತೆ ಇದೆ. ಹೊಸ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರ ನೇಮಕವನ್ನು ಜನವರಿ 20 ರೊಳಗೆ ಘೋಷಿಸುವ ಸಾಧ್ಯತೆಯಿದೆ. ಬಿಜೆಪಿ ಆಡಳಿತವಿರುವ ಅರ್ಧಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಸಾಂಸ್ಥಿಕ ಚುನಾವಣಾ ಪ್ರಕ್ರಿಯೆಯು ಪೂರ್ಣಗೊಂಡಿದ್ದು, 37 ರಾಜ್ಯಗಳಲ್ಲಿ 29 ರಾಜ್ಯಗಳು ತಮ್ಮ ಆಂತರಿಕ ಚುನಾವಣೆಗಳನ್ನು ಅಂತಿಮಗೊಳಿಸಿವೆ.

ಈ ರಾಜ್ಯಗಳ ಮುಖ್ಯಸ್ಥರು ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಿತಿನ್ ನಬಿನ್ ಅವರ ಉಮೇದುವಾರಿಕೆಯನ್ನು ಬೆಂಬಲಿಸುವ ಒಂದು ಸೆಟ್ ನಾಮಪತ್ರಗಳನ್ನು ಸಲ್ಲಿಸಲಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಮಂಡಳಿಯ ಸದಸ್ಯರು ಮತ್ತೊಂದು ಸೆಟ್ ನಾಮಪತ್ರಗಳನ್ನು ಸಲ್ಲಿಸಲಿದ್ದಾರೆ. ನಿತಿನ್ ನಬಿನ್ ಅವರನ್ನು ಬೆಂಬಲಿಸುವ ನಾಮಪತ್ರಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಹಿಗಳನ್ನು ಸಹ ಹೊಂದಿರುತ್ತವೆ ಎಂದು ಮೂಲಗಳು ತಿಳಿಸಿವೆ.

ನಿತಿನ್ ನಬಿನ್ ಮಾತ್ರ ನಾಮಪತ್ರ ಸಲ್ಲಿಸುವ ನಿರೀಕ್ಷೆಯಿರುವುದರಿಂದ, ಬಿಜೆಪಿ ಮುಖ್ಯ ಚುನಾವಣಾ ಅಧಿಕಾರಿ ಕೆ. ಲಕ್ಷ್ಮಣ್ ಅವರು ನಾಮಪತ್ರಗಳ ಪರಿಶೀಲನೆಯ ನಂತರ ರಾಷ್ಟ್ರೀಯ ಅಧ್ಯಕ್ಷರಾಗಿ ಅವರ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಲಾಗುತ್ತದೆ. ಬಿಜೆಪಿ ಆಡಳಿತವಿರುವ ರಾಜ್ಯಗಳ ಎಲ್ಲಾ ಮುಖ್ಯಮಂತ್ರಿಗಳು ಮತ್ತು ರಾಜ್ಯಾಧ್ಯಕ್ಷರು ಈ ಸಂದರ್ಭದಲ್ಲಿ ದೆಹಲಿಯಲ್ಲಿ ಹಾಜರಿರುವಂತೆ ಸೂಚಿಸಲಾಗಿದೆ. ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಆಯ್ಕೆಯಾದರೆ, ಅವರ ಅವಧಿ ಜನವರಿ 2026 ರಿಂದ ಜನವರಿ 2029 ರವರೆಗೆ ಇರುತ್ತದೆ ಎಂದು ಮೂಲಗಳು ತಿಳಿಸಿವೆ.

ಕೇರಳದಲ್ಲಿ ಇತಿಹಾಸ ಬರೆದ ಬಿಜೆಪಿ; ತಿರುವನಂತರಪುರಂ ಮೇಯರ್ ಆಗಿ ವಿ.ವಿ. ರಾಜೇಶ್ ಆಯ್ಕೆ

2029ಕ್ಕೆ ಲೋಕಸಭಾ ಚುನಾವಣೆ ನಡೆಯಲಿದ್ದು, ಅವರ ಸೇವಾವಧಿ ಒಂದು ವರ್ಷ ವಿಸ್ತರಣೆಯಾಗುವ ಸಾಧ್ಯತೆಯಿದೆ. 45 ವರ್ಷದ ನಿತಿನ್ ನಬಿನ್ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವುದರೊಂದಿಗೆ ಯುವ ಜನತೆಯನ್ನು ಸೆಳೆಯುವ ಪ್ರಯತ್ನ ಮಾಡಲಿದೆ ಎಂದು ಹೇಳಲಾಗಿದೆ.