ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಸ್ವತಂತ್ರ ಸ್ಫರ್ಧೆ: ಕೆ.ಅಣ್ಣಾಮಲೈ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಸ್ವತಂತ್ರ ಸ್ಫರ್ಧೆ: ಕೆ.ಅಣ್ಣಾಮಲೈ

image-34b84d59-ddf8-4eae-858d-d4f0a16a03ae.jpg
ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ, ತಮಿಳುನಾಡಿನಾದ್ಯಂತ ಮುಂಬರುವ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಸ್ವತಂತ್ರ ವಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಆದಾಗ್ಯೂ, 2024ರ ಲೋಕ ಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಎನ್ ಡಿಎ ಮೈತ್ರಿಕೂಟದಲ್ಲಿ ಮುಂದುವರೆಯಲಿದೆ ಎಂದು ಸ್ಪಷ್ಪಪಡಿಸಿ ದರು. ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸಿದ್ದರಿಂದ ಏಕಾಂಗಿಯಾಗಿ ಸ್ಪರ್ಧಿ ಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಣ್ಣಾಮಲೈ ಹೇಳಿದರು. ಎಐಎಡಿಎಂಕೆ ಮುಖಂಡರೊಂದಿಗೆ ಯಾವುದೇ ಸಮಸ್ಯೆಯಿಲ್ಲ, ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ನಿರ್ಧಾರವನ್ನು ರಾಷ್ಟ್ರೀಯ ವರಿಷ್ಠರ ಅನುಮೋದನೆ ದೊರೆತಿದೆ. ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ ಕಷ್ಟ ಎಂದು ಅಣ್ಣಾಮಲೈ ಹೇಳಿದರು. ಚೆನ್ನೈ ಸೇರಿದಂತೆ 21 ಮಹಾನಗರ ಪಾಲಿಕೆ, 138 ನಗರಸಭೆ ಹಾಗೂ 490 ಪಟ್ಟಣ ಪಂಚಾಯಿತಿಗಳಿಗೆ ಫೆಬ್ರವರಿ 19 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.