ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bomb Threat: ಬಾಂಬ್ ಬೆದರಿಕೆ; ಕೇರಳ ಸಿಎಂ ನಿವಾಸ, ಜಿಲ್ಲಾ ನ್ಯಾಯಾಲಯದಲ್ಲಿ ಶೋಧ

ಕೇರಳ ಮುಖ್ಯಮಂತ್ರಿಯ ಅಧಿಕೃತ ನಿವಾಸ ಮತ್ತು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ತೀವ್ರ ಶೋಧ ಕಾರ್ಯಾಚರಣೆಯನ್ನು ನಡೆಸಲಾಗಿದೆ. ಇಮೇಲ್ ಮೂಲಕ ಬೆದರಿಕೆ ಬಂದ ಬಳಿಕ ಸೋಮವಾರ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಯಿತು.

ಬಾಂಬ್ ಬೆದರಿಕೆ: ಕೇರಳದಲ್ಲಿ ಶೋಧ

Horoscope -

ತಿರುವನಂತಪುರಂ: ಮುಂಬೈಯಲ್ಲಿ (Mumbai) ಬಾಂಬ್ ಬೆದರಿಕೆ (Bomb threat) ಬಂದ ಕೆಲವು ದಿನಗಳ ಬಳಿಕ ಕೇರಳದಲ್ಲೂ (Kerala) ಇದೇ ರೀತಿಯ ಬೆದರಿಕೆ ಕರೆ ಬಂದಿದೆ. ಕೇರಳದ ಮುಖ್ಯಮಂತ್ರಿಯ ಅಧಿಕೃತ ನಿವಾಸ (Kerala chief minister official residence) ಮತ್ತು ಜಿಲ್ಲಾ ನ್ಯಾಯಾಲಯಕ್ಕೆ (Thiruvananthapuram District Court) ಬೆದರಿಕೆ ಸಂದೇಶ ಬಂದಿದ್ದು, ಇದನ್ನು ಕಳುಹಿಸಿದವರನ್ನು ಪತ್ತೆ ಹಚ್ಚಲು ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಜಿಲ್ಲಾ ನ್ಯಾಯಾಲಯದ ಅಧಿಕೃತ ಇಮೇಲ್ ಐಡಿಗೆ ಸೋಮವಾರ ಬೆಳಗ್ಗೆ ಈ ಕುರಿತು ಸಂದೇಶವನ್ನು ಕಳುಹಿಸಲಾಗಿತ್ತು.

ಕೇರಳ ಮುಖ್ಯಮಂತ್ರಿಯ ಅಧಿಕೃತ ನಿವಾಸ ಮತ್ತು ತಿರುವನಂತಪುರಂ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎನ್ನುವ ಕುರಿತು ಸೋಮವಾರ ಬೆಳಗ್ಗೆ ಇಮೇಲ್ ಸಂದೇಶ ಬಂದ ಬಳಿಕ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದರು.

ಜಿಲ್ಲಾ ನ್ಯಾಯಾಲಯದ ಅಧಿಕೃತ ಇಮೇಲ್ ಐಡಿಗೆ ಸೋಮವಾರ ಬೆಳಗ್ಗೆ ಬೆದರಿಕೆ ಸಂದೇಶ ಬಂದಿದ್ದು, ತಕ್ಷಣ ಕೈಗೊಂಡ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸಿದರು. ಬೆದರಿಕೆ ಸಂದೇಶವು ತಮಿಳುನಾಡಿನಿಂದ ಬಂದಿದೆ ಎನ್ನಲಾಗಿದ್ದು, ಇದರಲ್ಲಿ ತಮಿಳುನಾಡು ರಾಜಕೀಯದ ಉಲ್ಲೇಖಗಳಿವೆ ಎನ್ನಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ನ್ಯಾಯಾಲಯ ಸಂಕೀರ್ಣ, ಕ್ಲಿಫ್ ಹೌಸ್‌ನಲ್ಲಿ ಶೋಧ ನಡೆಸಲು ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ (ಬಿಡಿಡಿಎಸ್), ಶ್ವಾನ ದಳದ ತಂಡಗಳನ್ನು ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಯಾವುದೇ ಸ್ಫೋಟಕ ಕಂಡುಬಂದಿಲ್ಲ ಮತ್ತು ಇಮೇಲ್ ಬೆದರಿಕೆ ಸುಳ್ಳು. ಇಮೇಲ್ ಕಳುಹಿಸಿದವರನ್ನು ಗುರುತಿಸಲು ತನಿಖೆ ಪ್ರಾರಂಭಿಸಲಾಗಿದೆ ಮತ್ತು ಕಳುಹಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಹೇಳಿದರು.

ಈ ವರ್ಷ ಇಲ್ಲಿಯವರೆಗೆ ಸುಮಾರು 28 ಇಂತಹ ವಂಚನೆ ಇಮೇಲ್‌ಗಳು ಬಂದಿವೆ. ಸಾಮಾನ್ಯವಾಗಿ ಕ್ಲಿಫ್ ಹೌಸ್, ರಾಜಭವನ, ವಿಮಾನ ನಿಲ್ದಾಣ ಮತ್ತು ನ್ಯಾಯಾಲಯಗಳನ್ನು ಗುರಿಯಾಗಿರಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಕಳೆದ ವಾರ ಮುಂಬೈಯ ನಾಯರ್ ಆಸ್ಪತ್ರೆ ಮತ್ತು ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಈ ಪ್ರದೇಶಗಳಲ್ಲಿಯೂ ಕೂಡ ಪೊಲೀಸರಿಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಅಥವಾ ಚಟುವಟಿಕೆ ಕಂಡುಬಂದಿಲ್ಲ.

ಇದನ್ನೂ ಓದಿ: Viral Video: ರೈಲಿನಲ್ಲಿ ಪತ್ನಿಗೆ ಕಾಲ್ಗೆಜ್ಜೆ ತೊಡಿಸಿದ ವೃದ್ಧ ಪತಿ; ಇವರನ್ನು ನೋಡಿ ಕಲಿಯಿರಿ ಎಂದ ನೆಟ್ಟಿಗರು

ಇದಕ್ಕೂ ಮೊದಲು ಅಶ್ವಿನಿ ಕುಮಾರ್ ಎಂಬಾತ ಮುಂಬೈ ನಗರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದು, ನಗರದಾದ್ಯಂತ ವಾಹನಗಳಲ್ಲಿ ಬಹು ಬಾಂಬ್‌ಗಳನ್ನು ಇಡಲಾಗಿದೆ ಎಂದು ಹೇಳಿಕೊಂಡಿದ್ದ. ಆತ ತಾನು ಪಾಕಿಸ್ತಾನ ಮೂಲದ ಜಿಹಾದಿ ಗುಂಪಿನ ಸದಸ್ಯನೆಂದು ಹೇಳಿಕೊಂಡಿದ್ದು, 14 ಭಯೋತ್ಪಾದಕರು ನಗರವನ್ನು ಪ್ರವೇಶಿಸಿದ್ದಾರೆ ಎಂದು ಹೇಳಿದ್ದ. ಈ ಕುರಿತು ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.