Bomb Threat: 237 ಪ್ರಯಾಣಿಕರಿದ್ದ ಅಂತಾರಾಷ್ಟ್ರೀಯ ವಿಮಾನಕ್ಕೆ ಬಾಂಬ್ ಬೆದರಿಕೆ
ಚೆನ್ನೈನ ಅಂತರಾಷ್ಟ್ರೀಯ ವಿಮಾನಯಾನ ಸಂಸ್ಥೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಮಾನ ನಿಲ್ದಾಣದ ಅಧಿಕಾರಿಗಳು ಆತಂಕಕ್ಕೊಳಗಾಗಿದ್ದರು. ಆದರೆ ಅದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸರಿ ಸುಮಾರು 237 ಪ್ರಯಾಣಿಕರಿದ್ದ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಲಾಗಿದೆ. ವಿಮಾನದಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಕಂಡುಬಂದಿಲ್ಲ ಎನ್ನಲಾಗಿದೆ.
ಚೆನ್ನೈ: ಚೆನ್ನೈನ ಅಂತರಾಷ್ಟ್ರೀಯ ವಿಮಾನಯಾನ (Bound International Flight) ಸಂಸ್ಥೆಗೆ ಬಾಂಬ್ ಬೆದರಿಕೆ(Bomb Threat) ಕರೆ ಬಂದಿದ್ದು, ವಿಮಾನ ನಿಲ್ದಾಣದ ಅಧಿಕಾರಿಗಳು ಆತಂಕಕ್ಕೊಳಗಾಗಿದ್ದರು. ಆದರೆ ಅದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸರಿ ಸುಮಾರು 237 ಪ್ರಯಾಣಿಕರಿದ್ದ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ಅಧಿಕಾರಿಗಳು ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಿದ್ದಾರೆ. ವಿಮಾನದಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಕಂಡುಬಂದಿಲ್ಲ ಎನ್ನಲಾಗಿದೆ.
728 ಹುಸಿ ಬಾಂಬ್ ಬೆದರಿಕೆ, 13 ಜನ ಅರೆಸ್ಟ್
2024 ರಲ್ಲಿ ವಿಮಾನಯಾನ ಸಂಸ್ಥೆಗಳಿಗೆ ಒಟ್ಟು 728 ಹುಸಿ ಬಾಂಬ್ ಬೆದರಿಕೆ ಕರೆಗಳು ಬಂದಿದ್ದು, ಈ ಪೈಕಿ ಇಂಡಿಗೋ ಏರ್‌ಲೈನ್ಸ್ ಅತಿ ಹೆಚ್ಚು ಬಾಂಬ್ ಬೆದರಿಕೆಗಳನ್ನು ಸ್ವೀಕರಿಸಿದೆ. ಏರ್ ಇಂಡಿಯಾ ಮತ್ತು ವಿಸ್ತಾರಾ ನಂತರದ ಸ್ಥಾನದಲ್ಲಿ ಇವೆ.
ಈ ಸುದ್ದಿಯನ್ನೂ ಓದಿ:Bomb Threat: ಮುಂಬೈ, ಬೆಂಗಳೂರು ಬಳಿಕ ಇದೀಗ ಉಡುಪಿಯ ಶಾಲೆಗೆ ಬಾಂಬ್ ಬೆದರಿಕೆ
2024 ರಲ್ಲಿ ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇವಲ 13 ಜನರನ್ನು ಮಾತ್ರ ಬಂಧಿಸಲಾಗಿದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಪ್ರಕಾರ, 2024 ರಲ್ಲಿ 728 ಬಾಂಬ್ ಬೆದರಿಕೆಗಳು ಬಂದಿವೆ. ಅವುಗಳಲ್ಲಿ 714 ದೇಶೀಯ ವಿಮಾನಯಾನ ಸಂಸ್ಥೆಗಳು ಸ್ವೀಕರಿಸಿದ್ದು,ಉಳಿದವು ಕೆಲವು ಅಂತರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳು ಸ್ವೀಕರಿಸಿವೆ.
ಕೆಲ ತಿಂಗಳುಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯ ಹತ್ತು ಹಲವು ಶಾಲೆಗಳಿಗೆ ನಿರಂತರವಾಗಿ ಹುಸಿ ಬಾಂಬ್ ಕರೆಗಳು ಬಂದಿದ್ದವು. ಕಳೆದ ತಿಂಗಳು ಮುಂಬೈನ(Mumbai) ಜೋಗೇಶ್ವರಿ-ಓಶಿವಾರ ಪ್ರದೇಶದ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆಯ ಇಮೇಲ್ ಸಂದೇಶವೊಂದು ಬಂದಿದೆ. ಬಾಂಬ್ ಬೆದರಿಕೆಯನ್ನು ಕಳುಹಿಸಿರುವ ವ್ಯಕ್ತಿ ತನ್ನನ್ನು ಅಫ್ಜಲ್ ಗ್ಯಾಂಗ್‌ನವನು ಎಂದು ಹೇಳಿಕೊಂಡಿದ್ದ. ಇಮೇಲ್ ಸ್ವೀಕರಿಸಿದ ನಂತರ ಶಾಲೆಯ ಆಡಳಿತ ಮಂಡಳಿ ಪೋಲಿಸರಿಗೆ ದೂರು ನೀಡಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ಬಾಂಬ್ ಸ್ಕ್ವಾಡ್ ತಂಡ ಶಾಲೆಗೆ ಆಗಮಿಸಿ ಸ್ಥಳ ಮಹಜರು ಮಾಡಿದ್ದರು.
ಅದಕ್ಕೂ ಮುನ್ನ ದೆಹಲಿಯ ಸುಮಾರು 30 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ವಿಷಯ ತಿಳಿದ ಪೊಲೀಸರು ಬಾಂಬ್ ಪತ್ತೆ ತಂಡ, ಶ್ವಾನದಳ ಹಾಗೂ ಅಗ್ನಿಶಾಮಕ ದಳದೊಂದಿಗೆ ದೌಡಾಯಿಸಿ, ಶಾಲಾ ಕಟ್ಟಡಗಳು ಮತ್ತು ಆವರಣಗಳಲ್ಲಿ ತೀವ್ರ ತಪಾಸಣೆ ನಡೆಸಿತ್ತು. ಆದರೆ, ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿರಲಿಲ್ಲ. ಇದೊಂದು ಹುಸಿ ಬೆದರಿಕೆ ಎಂದು ಪೊಲೀಸರು ಖಚಿತಪಡಿಸಿದ್ದರು.