ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

“ಜಾಗತಿಕ ದಕ್ಷಿಣವು ನಿರ್ಧಾರ ತೆಗೆದುಕೊಳ್ಳುವಂತಾಗಬೇಕು”: ವಿಶ್ವ ನಾಯಕರನ್ನುದ್ದೇಶಿಸಿ ಬ್ರಿಕ್ಸ್‌ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಖಡಕ್‌ ಮಾತು

PM Narendra Modi speech: ಜಾಗತಿಕ ದಕ್ಷಿಣವು ನಿರ್ಧಾರ ತೆಗೆದುಕೊಳ್ಳುವ ರಾಷ್ಟ್ರವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದು, ಪ್ರತಿಯೊಂದು ಸದಸ್ಯ ರಾಷ್ಟ್ರವೂ ಧ್ವನಿ ಎತ್ತುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಪ್ರತಿಯೊಂದು ಸದಸ್ಯ ರಾಷ್ಟ್ರವೂ ತನ್ನದೇ ಆದ ಧ್ವನಿಯನ್ನು ಹೊಂದಿರಬೇಕಾದ ಅಗತ್ಯದ ಬಗ್ಗೆ ಅವರು ಬ್ರಿಕ್ಸ್ ಶೃಂಗಸಭೆಯಲ್ಲಿ ಮಾತನಾಡಿದರು.

ವಿಶ್ವ ನಾಯಕರನ್ನುದ್ದೇಶಿಸಿ ಪ್ರಧಾನಿ ಮೋದಿ ಹೇಳಿದ್ದೇನು?

ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ -

Priyanka P
Priyanka P Sep 12, 2026 3:32 PM

ನವದೆಹಲಿ, ಸೆ. 12: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ವಿಶ್ವ ನಾಯಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಜಾಗತಿಕ ದಕ್ಷಿಣವು (Global South) ನಿರ್ಧಾರ ತೆಗೆದುಕೊಳ್ಳುವ ರಾಷ್ಟ್ರವಾಗಬೇಕೆಂಬ ಆಶಯ ವ್ಯಕ್ತಪಡಿಸಿದ್ದಾರೆ. ಪ್ರತಿಯೊಂದು ಸದಸ್ಯ ರಾಷ್ಟ್ರವೂ ಧ್ವನಿ ಎತ್ತುವ ಅಗತ್ಯವನ್ನು ಅವರು ಒತ್ತಿ ಹೇಳಿದ್ದಾರೆ. ಜಾಗತಿಕ ದಕ್ಷಿಣ ವಲಯವು ಕೇವಲ ವೀಕ್ಷಕನಾಗಿರದೆ ಜಾಗತಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಪ್ರಮುಖ ನಿರ್ಣಾಯಕ ಶಕ್ತಿಯಾಗಬೇಕು. ಅಲ್ಲದೆ, ಪ್ರತಿಯೊಂದು ಸದಸ್ಯ ರಾಷ್ಟ್ರವೂ ತನ್ನದೇ ಆದ ಧ್ವನಿಯನ್ನು ಹೊಂದಿರಬೇಕಾದ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಬ್ರಿಕ್ಸ್ ರಾಷ್ಟ್ರಗಳು ಯಾರ ವಿರುದ್ಧವೂ ಅಲ್ಲ, ಒಮ್ಮತದಿಂದ ಮುಂದುವರಿಯುತ್ತವೆ ಎಂದು ತಿಳಿಸಿದ್ದಾರೆ.

ಜಾಗತಿಕ ದಕ್ಷಿಣದ ದೇಶಗಳು ಜಾಗತಿಕ ಸಂಸ್ಥೆಗಳ ಮುಂಚೂಣಿಯ ಸಾಲಿನಲ್ಲಿ ಕುಳಿತಿದ್ದರೂ, ನಿರ್ಧಾರಗಳನ್ನು ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಇನ್ನೂ ಕೊನೆಯ ಸಾಲಿನಲ್ಲಿಯೇ ಉಳಿದಿವೆ. ನಾವು ಈ ಸವಲತ್ತುಗಳ ಪಿರಮಿಡ್ ಅನ್ನು ಸಹಭಾಗಿತ್ವದ ವೇದಿಕೆಯಾಗಿ ಪರಿವರ್ತಿಸಬೇಕು. ಅಲ್ಲಿ ಪ್ರತಿಯೊಂದು ರಾಷ್ಟ್ರಕ್ಕೂ ತನ್ನದೇ ಆದ ಧ್ವನಿ ಇರುತ್ತದೆ. ಪ್ರತಿಯೊಬ್ಬ ಸದಸ್ಯನಿಗೂ ಅದರಲ್ಲಿ ಪಾಲು ಇರಬೇಕು. ಮಾನವೀಯತೆಯ ಪ್ರಗತಿಯೇ ಪ್ರತಿಯೊಂದು ಪ್ರಯತ್ನದ ಪ್ರಮುಖ ಕೇಂದ್ರಬಿಂದುವಾಗಿರಬೇಕು ಎಂದು ಮೋದಿ ಹೇಳಿದ್ದಾರೆ.