ಅಖಿಲೇಶ್ ಯಾದವ್ ರ್ಯಾಲಿಯಲ್ಲಿ ಭೀಕರ ದುರಂತ: ಪುಷ್ಪಾರ್ಚನೆ ವೇಳೆ ಬುಲ್ಡೋಜರ್ ಹರಿದು ಬಿಜೆಪಿ ನಾಯಕನ 12 ವರ್ಷದ ಪುತ್ರ ಸಾವು
Akhilesh Yadav roadshow: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಚುನಾವಣಾ ರ್ಯಾಲಿ ವೇಳೆ ಭೀಕರ ದುರಂತವೊಂದು ಸಂಭವಿಸಿದೆ. ರ್ಯಾಲಿಯಲ್ಲಿದ್ದ ಬುಲ್ಡೋಜರ್ ಡಿಕ್ಕಿ ಹೊಡೆದ ಪರಿಣಾಮ ಉತ್ತರ ಪ್ರದೇಶದ ಬಿಜೆಪಿ ನಾಯಕರೊಬ್ಬರ 12 ವರ್ಷದ ಪುತ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಖಿಲೇಶ್ ಯಾದವ್ ಅವರ ರ್ಯಾಲಿ ಮತ್ತು ಮೃತ ಬಾಲಕ -
ಲಖನೌ, ನ. 19: ಸಮಾಜವಾದಿ ಪಕ್ಷದ (SP) ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ (Akhilesh Yada) ಅವರ ರ್ಯಾಲಿ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಉತ್ತರ ಪ್ರದೇಶದ ಬಿಜೆಪಿ ನಾಯಕರೊಬ್ಬರ ಪುತ್ರ ದಾರುಣವಾಗಿ ಮೃತಪಟ್ಟಿದ್ದಾರೆ. ರ್ಯಾಲಿಯ ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಬುಲ್ಡೋಜರ್ ಬಾಲಕನಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತ ಬಾಲಕನನ್ನು 12 ವರ್ಷದ ಆರ್ಯವರ್ಧನ್ ಸಿಂಗ್ ಎಂದು ಗುರುತಿಸಲಾಗಿದ್ದು, ಆತ ಚೌರಿ ಚೌರಾದ ರಾಜಧಾನಿ ಗ್ರಾಮದ ನಿವಾಸಿಯಾಗಿದ್ದಾನೆ.
ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಬುಲ್ಡೋಜರ್ ಅನ್ನು ವಶಕ್ಕೆ ಪಡೆದಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಘಟನೆ ರಾಜಕೀಯ ವಲಯದಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಬಿಜೆಪಿ ನಾಯಕನ ಪುತ್ರನ ದಾರುಣ ಅಂತ್ಯ:
गोरखपुर में अखिलेश यादव के स्वागत के उन्माद में सपाइयों ने एक 12 वर्षीय मासूम की जिंदगी छीन ली! PDA रथ यात्रा के दौरान JCB की चपेट में आकर बच्चे की दर्दनाक मौत, सपाइयों के हुड़दंग और गैर-जिम्मेदाराना रवैये का नतीजा है। अभी सत्ता से बाहर रहकर ये हाल है, तो सोचिए सत्ता में आ गए तो क्या कहर बरपाएंगे! इन्हें सपाई कहें या बलवाई? इनके लिए सत्ता का प्रदर्शन, एक मासूम की जिंदगी से भी ज्यादा कीमती है?
— BJP Uttar Pradesh (@BJP4UP) November 18, 2026
ಸ್ಥಳದಲ್ಲೇ ಮೃತಪಟ್ಟ ಬಾಲಕ
ಬಾಲಕನ ತಂದೆ ಸ್ಥಳೀಯ ಬಿಜೆಪಿ ನಾಯಕ ಓಂಕಾರ್ ಸಿಂಗ್ ಪ್ರಕಾರ, ರ್ಯಾಲಿಯಲ್ಲಿ ಬುಲ್ಡೋಜರ್ ಮೂಲಕ ಪುಷ್ಪಾರ್ಚನೆ ಮಾಡಲಾಗುತ್ತಿತ್ತು. ಯಾದವ್ ಅವರ ಬೆಂಗಾವಲು ಪಡೆ ಮುಂದೆ ಸಾಗಿತ್ತು, ಈ ವೇಳೆ ವೇಗವಾಗಿ ಬಂದ ಬುಲ್ಡೋಜರ್ ತಮ್ಮ ಮಗನಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆರ್ಯವರ್ಧನ್ ರಸ್ತೆ ಡಿವೈಡರ್ಗೆ ಅಪ್ಪಳಿಸಿದ್ದು, ತಲೆಯ ಹಿಂಭಾಗಕ್ಕೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರ್ಯಾಲಿ ವೇಳೆ ಸಾರ್ವಜನಿಕರ ಸುರಕ್ಷತೆಗೆ ಕೈಗೊಂಡ ಕ್ರಮಗಳ ಬಗ್ಗೆ ಮತ್ತು ಜನಸಂದಣಿಯ ನಡುವೆ ಭಾರಿ ವಾಹನಗಳ ಸಂಚಾರದ ಬಗ್ಗೆ ಪ್ರಶ್ನೆಗಳು ಎದ್ದಿವೆ. ರ್ಯಾಲಿಯಲ್ಲಿ ಭಾಗವಹಿಸಿದ್ದ ವಾಹನಗಳ ಸಂಚಾರವನ್ನು ನಿಯಂತ್ರಿಸುವ ಜವಾಬ್ದಾರಿ ವಿಫಲವಾಗಿದೆ ಎಂದು ಆರೋಪಿಸಲಾಗಿದೆ.
ಘಟನೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಖಿಲೇಶ್ ಯಾದವ್, ಬಾಲಕನ ಸಾವಿನ ಬಗ್ಗೆ ತಮಗೆ ಮಾಹಿತಿ ಇಲ್ಲ. ರೋಡ್ ಶೋಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ಆಡಳಿತ ವಿಫಲವಾಗಿದೆ. ಜನರು ಬಿಜೆಪಿ ಸದಸ್ಯರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಅವರು ಯಾರನ್ನಾದರೂ ಸುಳ್ಳು ಪ್ರಕರಣದಲ್ಲಿ ಸಿಲುಕಿಸುತ್ತಾರೆ ಎಂದು ಹೇಳಿದರು.
ಸ್ವಚ್ಛ ಭಾರತ ಜಾಗೃತಿಗೆ ಎನ್ಸಿಸಿ ಕೆಡೆಟ್ಗಳ ರ್ಯಾಲಿ
ಬಿಜೆಪಿಯಿಂದ ಆಕ್ರೋಶ
ಈ ದುರ್ಘಟನೆಯ ಕುರಿತು ಉತ್ತರ ಪ್ರದೇಶ ಬಿಜೆಪಿ ಘಟಕ ಮತ್ತು ಪಕ್ಷದ ಹಿರಿಯ ಮುಖಂಡರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಮೃತ ಬಾಲಕನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. "ಅಗಲಿದ ಯುವಕನ ಆತ್ಮಕ್ಕೆ ಶಾಂತಿ ಸಿಗಲಿ, ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ" ಎಂದು ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ. ಇದೇ ವೇಳೆ, ರ್ಯಾಲಿಗಳಲ್ಲಿ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ ಬುಲ್ಡೋಜರ್ಗಳನ್ನು ಬಳಸುತ್ತಿರುವುದಕ್ಕೆ ಬಿಜೆಪಿ ಮುಖಂಡರು ಸಮಾಜವಾದಿ ಪಕ್ಷದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸದ್ಯ ಪೊಲೀಸರು ಬುಲ್ಡೋಜರ್ ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.