ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ನಾಸಿಕ್‌ನಲ್ಲಿ ಘೋರ ದುರಂತ, ಕಾರು ಬಾವಿಗೆ ಬಿದ್ದು 8 ಮಂದಿ ದುರ್ಮರಣ

ಕಾರು ನಾಸಿಕ್‌ನ ಪೆತ್ ತಾಲೂಕಿನ ಮುಖಾಬಾದ್ ರಸ್ತೆಯಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದೆ. ವೇಗವಾಗಿ ಬಂದ ಕಾರು ನೇರವಾಗಿ ರಸ್ತೆ ಪಕ್ಕದಲ್ಲಿದ್ದ ತೆರೆದ ಬಾವಿಗೆ ಬಿದ್ದಿದೆ. ಬಾವಿಯಲ್ಲಿ ನೀರು ತುಂಬಿದ್ದರಿಂದ ಕಾರಿನಲ್ಲಿದ್ದವರು ಹೊರಬರಲಾಗದೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನಾಸಿಕ್‌ನಲ್ಲಿ ಅಪಘಾತ

ನಾಸಿಕ್, ಏ.04: ಮಹಾರಾಷ್ಟ್ರದ (Maharashtra) ನಾಸಿಕ್ (Nasik) ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ (car accident) ಎಂಟು ಜನರು ಮೃತಪಟ್ಟಿದ್ದಾರೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಬಾವಿಗೆ ಉರುಳಿ ಬಿದ್ದಿದ್ದರಿಂದ ಈ ದುರಂತ ಸಂಭವಿಸಿದೆ.

ವರದಿಗಳ ಪ್ರಕಾರ, ಕಾರು ನಾಸಿಕ್‌ನ ಪೆತ್ ತಾಲೂಕಿನ ಮುಖಾಬಾದ್ ರಸ್ತೆಯಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದೆ. ವೇಗವಾಗಿ ಬಂದ ಕಾರು ನೇರವಾಗಿ ರಸ್ತೆ ಪಕ್ಕದಲ್ಲಿದ್ದ ತೆರೆದ ಬಾವಿಗೆ ಬಿದ್ದಿದೆ. ಬಾವಿಯಲ್ಲಿ ನೀರು ತುಂಬಿದ್ದರಿಂದ ಕಾರಿನಲ್ಲಿದ್ದವರು ಹೊರಬರಲಾಗದೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ನಡೆದ ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ ಮತ್ತು ರಕ್ಷಣಾ ಪಡೆಗಳು, ಸ್ಥಳೀಯರ ನೆರವಿನೊಂದಿಗೆ ಬಾವಿಯಿಂದ ಕಾರನ್ನು ಮೇಲೆತ್ತಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಕಾರಿನಲ್ಲಿದ್ದ ಎಂಟೂ ಮಂದಿ ಪ್ರಾಣ ಕಳೆದುಕೊಂಡಿದ್ದರು.

CJ Roy death: ಮೃತ ಉದ್ಯಮಿ ಸಿಜೆ ರಾಯ್‌ಗೆ ಆಗಿತ್ತು ಸಿನಿಮಾ ನಟಿಯಿಂದ ಹನಿ ಟ್ರ್ಯಾಪ್‌!

“ಅಪಘಾತದ ತೀವ್ರತೆ ಹೆಚ್ಚಾಗಿದ್ದು, ಬಾವಿಯಲ್ಲಿ ನೀರು ತುಂಬಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡಚಣೆಯಾಯಿತು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ,” ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತರ ಕುಟುಂಬದಲ್ಲಿ ಈಗ ಶೋಕ ಸಾಗರ ಆವರಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಹರೀಶ್‌ ಕೇರ

View all posts by this author