ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರೂರ್ ಕಾಲ್ತುಳಿತ ಪ್ರಕರಣ; ಟಿವಿಕೆ ಮುಖ್ಯಸ್ಥ, ನಟ ವಿಜಯ್‌ಗೆ ಸಿಬಿಐ ಸಮನ್ಸ್

Vijay: ಚಿತ್ರರಂಗ ತೊರೆಯುತ್ತಿರುವುದಾಗಿ ಈಗಾಗಲೇ ವಿಜಯ್‌ ಘೋಷಿಸಿದ್ದು, ಸದ್ಯ ಅವರ ಕೊನೆಯ ಸಿನಿಮಾ ʼಜನ ನಾಯಗನ್‌ʼ ತೆರೆಗೆ ಬರಲು ಸಜ್ಜಾಗಿದೆ. ಜನವರಿ 9ರಂದು ಈ ಸಿನಿಮಾ ಬಿಡುಗಡೆಯಾಗಲಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಆದರೆ ಚಿತ್ರಕ್ಕೆ ಸೆನ್ಸಾರ್ ಮಂಡಳಿಯು (CBFC) ಪ್ರಮಾಣಪತ್ರ ನೀಡಲು ವಿಳಂಬ ಮಾಡುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಕರೂರ್ ಕಾಲ್ತುಳಿತ ಪ್ರಕರಣ; ಟಿವಿಕೆ ಮುಖ್ಯಸ್ಥ ವಿಜಯ್‌ಗೆ ಸಿಬಿಐ ಸಮನ್ಸ್

Vijay -

Abhilash BC
Abhilash BC Jan 6, 2026 3:22 PM

ಚೆನ್ನೈ, ಜ.6: ಕರೂರ್ ಕಾಲ್ತುಳಿತ ಪ್ರಕರಣದಲ್ಲಿ(Karur stampede case) ವಿಚಾರಣೆಗೆ ಹಾಜರಾಗುವಂತೆ ನಟ-ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ (Tamilaga Vettri Kazhagam) ಸಂಸ್ಥಾಪಕ ವಿಜಯ್(Vijay) ಅವರಿಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಸಮನ್ಸ್ ಜಾರಿ ಮಾಡಿದೆ. ಸೆಪ್ಟೆಂಬರ್‌ 27ರಂದು ಕರೂರಿನಲ್ಲಿ ಟಿವಿಕೆ ಮುಖ್ಯಸ್ಥ, ಖ್ಯಾತ ನಟ ವಿಜಯ್‌ ಅವರು ಭಾಗವಹಿಸಿದ್ದ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಮಂದಿ ಮೃತಪಟ್ಟಿದ್ದರು. ಮತ್ತು 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಪ್ರಕರಣದ ಎಸ್‌ಐಟಿ ತನಿಖೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಟಿವಿಕೆ, ಸ್ವತಂತ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿತ್ತು. ಎಸ್‌ಐಟಿಯಲ್ಲಿ ತಮಿಳುನಾಡಿನ ಪೊಲೀಸರು ಮಾತ್ರ ಇರುವುದರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಹೇಳಿತ್ತು. ಆದರೆ ಈ ಘಟನೆ ರಾಜಕೀಯ ಕೋಲಾಹಲಕ್ಕೆ ಕಾರಣವಾದ ಬಳಿಕ ತಮಿಳುನಾಡು ಪೊಲೀಸರು ಕೈಗೆತ್ತಿಕೊಂಡಿದ್ದ ತನಿಖೆಯನ್ನು ಸುಪ್ರೀಂ ಕೋರ್ಟ್‌ ಸಿಬಿಐಗೆ ಹಸ್ತಾಂತರಿಸಿತ್ತು. ಸಿಬಿಐ ತನಿಖೆಯ ಮೇಲ್ವಿಚಾರಣೆಗೆ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಜಯ್‌ ರಸ್ತೋಗಿ ನೇತೃತ್ವದ ಸಮಿತಿಯನ್ನೂ ರಚಿಸಿತ್ತು.

ʼಜನ ನಾಯಗನ್‌ʼ ಸಿಮಾದಲ್ಲಿ ವಿಜಯ್‌ ಬ್ಯೂಸಿ

ಚಿತ್ರರಂಗ ತೊರೆಯುತ್ತಿರುವುದಾಗಿ ಈಗಾಗಲೇ ವಿಜಯ್‌ ಘೋಷಿಸಿದ್ದು, ಸದ್ಯ ಅವರ ಕೊನೆಯ ಸಿನಿಮಾ ʼಜನ ನಾಯಗನ್‌ʼ ತೆರೆಗೆ ಬರಲು ಸಜ್ಜಾಗಿದೆ. ಜನವರಿ 9ರಂದು ಈ ಸಿನಿಮಾ ಬಿಡುಗಡೆಯಾಗಲಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಅಭಿಮಾನಿಗಳು ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಸಜ್ಜಾಗಿದ್ದು, ಮೂಲಕ ತಮ್ಮ ನೆಚ್ಚಿನ ನಾಯಕನ ಕೊನೆ ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ಗೆಲ್ಲಿಸಲು ಮುಂದಾಗಿದ್ದಾರೆ. ಎಚ್‌. ವಿನೋತ್‌ ನಿರ್ದೇಶನದ ಈ ಚಿತ್ರದಲ್ಲಿ ನಾಯಕಿಯಾಗಿ ಕನ್ನಡತಿ ಪೂಜಾ ಹೆಗ್ಡೆ ನಟಿಸಿದ್ದಾರೆ.

ʻದಳಪತಿʼ ಅಭಿಮಾನಿಗಳ ಆತಂಕಕ್ಕೆ ಕಾರಣವೇನು?

ಚಿತ್ರಕ್ಕೆ ಸೆನ್ಸಾರ್ ಮಂಡಳಿಯು (CBFC) ಪ್ರಮಾಣಪತ್ರ ನೀಡಲು ವಿಳಂಬ ಮಾಡುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಕರ್ನಾಟಕದಲ್ಲಿ ಈಗಾಗಲೇ ಬುಕಿಂಗ್ ಆರಂಭವಾಗಿ ಹೌಸ್‌ಫುಲ್ ಆಗಿದ್ದರೂ, ತಮಿಳುನಾಡು ಮತ್ತು ತೆಲುಗು ರಾಜ್ಯಗಳಲ್ಲಿ ಬುಕಿಂಗ್ ಆರಂಭವಾಗಿಲ್ಲ.

ಕಳೆದ ವಾರ ಬಿಡುಗಡೆಯಾದ ಜನ ನಾಯಗನ್‌ ಚಿತ್ರದ ಟ್ರೈಲರ್‌ನಲ್ಲಿ ರಾಜಕೀಯ ಪ್ರೇರಿತ ಸಂಭಾಷಣೆಗಳಿರುವ ಸ್ಪಷ್ಟ ಸುಳಿವು ಸಿಕ್ಕಿತ್ತು. ಈ ಚಿತ್ರವು ಇನ್ನೂ ತನ್ನ ಸೆನ್ಸಾರ್ ಪ್ರಮಾಣಪತ್ರಕ್ಕಾಗಿ ಕಾಯುತ್ತಿದೆ. ಮಂಡಳಿಯು ಸರಿಯಾದ ಸಮಯಕ್ಕೆ ಪ್ರಮಾಣ ಪತ್ರ ನೀಡಲಿದೆಯಾ ಎಂಬ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಲಭ್ಯವಿಲ್ಲ.

ಒಂದು ವೇಳೆ ಪ್ರಮಾಣ ಪತ್ರ ಸಿಗುವುದು ವಿಳಂಬವಾದರೆ ಚಿತ್ರವು ಜನವರಿ 9ರಂದು ಬಿಡುಗಡೆ ಆಗುವುದು ಡೌಟ್‌ ಎನ್ನಲಾಗಿದೆ. ಇದರಿಂದ ಸಂಕ್ರಾಂತಿಗೆ ರಿಲೀಸ್‌ ಆಗುತ್ತಿರುವ ಇತರೆ ಸಿನಿಮಾಗಳಿಗೆ ಅನುಕೂಲವಾಗಬಹುದು. ಸದ್ಯದ ಮಾಹಿತಿ ಪ್ರಕಾರ, ಸೆನ್ಸಾರ್‌ ಪ್ರಮಾಣ ಪತ್ರ ತಡವಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರತಂಡವು ನ್ಯಾಯಾಲಯದ ಮೊರೆ ಹೋಗಲು ರೆಡಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.‌