ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಪರೀಕ್ಷಾ ಸುಧಾರಣೆಗಳಿಗಾಗಿ ನಂದನ್ ನಿಲೇಕಣಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಕಾರ್ಯಪಡೆ ರಚಿಸಿದ ಕೇಂದ್ರ ಸರ್ಕಾರ; ನೀವೂ ಸಲಹೆ ನೀಡಬಹುದು

NEET exam: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ಪರೀಕ್ಷೆಗಳು ಸೇರಿ ಒಟ್ಟಾರೆ ಪರೀಕ್ಷಾ ಸುಧಾರಣೆಗಳಿಗಾಗಿ ಕೇಂದ್ರ ಸರ್ಕಾರವು ನಂದನ್ ನಿಲೇಕಣಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಕಾರ್ಯಪಡೆಯನ್ನು ರಚಿಸಿದೆ. ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಇನ್ಫೋಸಿಸ್ ಸಹ-ಸಂಸ್ಥಾಪಕ ನಿಲೇಕಣಿ ನೇತೃತ್ವದಲ್ಲಿ ಆರು ಸದಸ್ಯರ ಕಾರ್ಯಪಡೆಯನ್ನು ರಚಿಸುವುದಾಗಿ ಘೋಷಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)

ನವದೆಹಲಿ, ಆ. 28: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸುವ ಪರೀಕ್ಷೆಗಳು ಸೇರಿ ಒಟ್ಟಾರೆ ಪರೀಕ್ಷಾ ಸುಧಾರಣೆಗಳಿಗಾಗಿ ಕೇಂದ್ರ ಸರ್ಕಾರವು ನಂದನ್ ನಿಲೇಕಣಿ (Nandan Nilekani) ಅಧ್ಯಕ್ಷತೆಯಲ್ಲಿ ಉನ್ನತ ಶಕ್ತಿಯ ಕಾರ್ಯಪಡೆಯನ್ನು ರಚಿಸಿದೆ. ನೀಟ್ ಪರೀಕ್ಷೆಯಲ್ಲಿ (NEET exam) ಅಕ್ರಮ ನಡೆದಿದೆ ಎಂದು ಆರೋಪಿಸಿ ದೆಹಲಿಯ ಜಂತರ್ ಮಂತರ್ ಮತ್ತು ದೇಶದ ಇತರ ಭಾಗಗಳಲ್ಲಿ 36 ದಿನಗಳ ಕಾಲ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಪ್ರತಿಭಟನೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರ ರಾಜೀನಾಮೆಗೆ ಕಾರಣವಾಗಿತ್ತು. ಜತೆಗೆ ಕೇಂದ್ರವು ಪರೀಕ್ಷಾ ವ್ಯವಸ್ಥೆಯನ್ನು ಸುಧಾರಿಸಲು ಅಗತ್ಯ ಕ್ರಮಗಳನ್ನು ಘೋಷಿಸಿತು.

ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಇನ್ಫೋಸಿಸ್ ಸಹ-ಸಂಸ್ಥಾಪಕ ನಿಲೇಕಣಿ ನೇತೃತ್ವದಲ್ಲಿ ಆರು ಸದಸ್ಯರ ಕಾರ್ಯಪಡೆಯನ್ನು ರಚಿಸುವುದಾಗಿ ಘೋಷಿಸಿದ್ದರು. ಇದು ಎನ್‌ಟಿಎಯ ಪರೀಕ್ಷಾ ವ್ಯವಸ್ಥೆಯನ್ನು ಕೂಲಂಕುಷವಾಗಿ ಪರಿಶೀಲಿಸಲು ತಾಂತ್ರಿಕ ವ್ಯವಸ್ಥೆಗಳ ಸಹಾಯ ಪಡೆಯಲಿದೆ ಮತ್ತು ರಚನಾತ್ಮಕ ಸುಧಾರಣೆಗಳನ್ನು ಶಿಫಾರಸು ಮಾಡಲಿದೆ ಎಂದು ಅವರು ಹೇಳಿದ್ದರು.

ನಿಲೇಕಣಿ ಅವರಲ್ಲದೆ, ಸಮಿತಿಯಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಾಜಿ ಅಧ್ಯಕ್ಷ ಎಸ್. ಸೋಮನಾಥ್, ಗುಪ್ತಚರ ಬ್ಯೂರೋದ ಮಾಜಿ ನಿರ್ದೇಶಕ ತಪನ್ ದೇಕಾ, ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ, ಮಾಜಿ ಶಿಕ್ಷಣ ಕಾರ್ಯದರ್ಶಿ ಅನಿತಾ ಕರ್ವಾಲ್ ಮತ್ತು ಲಾಜಿಸ್ಟಿಕ್ಸ್ ತಜ್ಞ ಅಮೃತ್ ಲಾಲ್ ಮೀನಾ ಇರಲಿದ್ದಾರೆ.

ಮತ್ತೊಂದು ಸುತ್ತಿನ ಸಮರಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ; ಸೆಪ್ಟೆಂಬರ್‌ 5ರಂದು ಪ್ರತಿಭಟನೆಗೆ ಸಿದ್ಧತೆ

ಸಾರ್ವಜನಿಕ ಪರೀಕ್ಷೆಗಳ ನಿರ್ವಹಣೆ, ಭದ್ರತೆ, ವಿನ್ಯಾಸ ಮತ್ತು ಆಡಳಿತಕ್ಕೆ ಸಂಬಂಧಿಸಿದಂತೆ ಸಮಗ್ರ ಸುಧಾರಣೆಗಳನ್ನು ಪರಿಶೀಲಿಸುವ ಮತ್ತು ಶಿಫಾರಸು ಮಾಡುವ ಜವಾಬ್ದಾರಿಯನ್ನು ಈ ಕಾರ್ಯಪಡೆಗೆ ವಹಿಸಲಾಗಿದೆ ಎಂದು ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯ ಹೇಳಿದೆ.

ಸಾಂಸ್ಥಿಕ ವ್ಯವಸ್ಥೆಗಳು ಮತ್ತು ಪ್ರಕ್ರಿಯೆಗಳನ್ನು ಬಲಪಡಿಸುವುದು, ಪರೀಕ್ಷೆಗಳಲ್ಲಿ ಪ್ರಾಮಾಣಿಕತೆ ಮತ್ತು ಭದ್ರತೆಯನ್ನು ಖಚಿತಪಡಿಸುವುದು ಹಾಗೂ ಸೂಕ್ತ ತಂತ್ರಜ್ಞಾನಗಳನ್ನು ಅಳವಡಿಸುವ ಕ್ರಮಗಳ ಕುರಿತು ಈ ಕಾರ್ಯಪಡೆಯು ಪರಿಶೀಲನೆ ನಡೆಸಲಿದೆ. ಇದರೊಂದಿಗೆ ಪರೀಕ್ಷಾ ಮೂಲಸೌಕರ್ಯಗಳನ್ನು ಹೆಚ್ಚಿಸುವುದು ಹಾಗೂ ವಿದ್ಯಾರ್ಥಿಗಳ ಯೋಗಕ್ಷೇಮವನ್ನು ರಕ್ಷಿಸುವ ವಿಷಯಗಳ ಬಗ್ಗೆಯೂ ಇದು ಗಮನಹರಿಸಲಿದೆ ಎಂದು ಸಚಿವಾಲಯ ತಿಳಿಸಿದೆ. ಜತೆಗೆ ಸೆಪ್ಟೆಂಬರ್‌ 13ರ ತನಕ ಸಾರ್ವಜನಿಕರು ಸಲಹೆ ನೀಡಬಹುದು.