ಸತ್ಯೇಂದ್ರ ಜೈನ್ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ
ಸತ್ಯೇಂದ್ರ ಜೈನ್ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ
-
Vishwavani News
Jul 27, 2022 4:04 PM
ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಚಿವ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.
ಪ್ರಕರಣದಲ್ಲಿ ಭಾಗಿಯಾಗಿರುವ ಇತರರ ಮೇಲೂ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದೆ. ಸತ್ಯೇಂದ್ರ ಜೈನ್ ಮತ್ತು ಇತರ ಇಬ್ಬರು ಪ್ರಸ್ತುತ ನ್ಯಾಯಾಂಗ ಬಂಧನ ದಲ್ಲಿದ್ದಾರೆ. ಮೇ 30, 2022 ರಂದು ಸತ್ಯೇಂದ್ರ ಜೈನ್ ಅವರನ್ನು ಅಕ್ರಮ ಹಣ ವರ್ಗಾ ವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿದೆ.
ಬಳಿಕ ಆಗಸ್ಟ್ 24, 2017 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ ಎಫ್‌ಐಆರ್ ಆಧರಿಸಿ ಇಡಿ ಹಣ ವರ್ಗಾವಣೆ ತನಿಖೆಯನ್ನು ಪ್ರಾರಂಭಿಸಿದೆ. ಸತ್ಯೇಂದ್ರ ಜೈನ್ ಮತ್ತು ಇತರರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.