ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಮ ಮಂದಿರ ದೇಣಿಗೆ ಕಳವು ಪ್ರಕರಣದ ಚಾರ್ಜ್‌ಶೀಟ್; ಆರೋಪಪಟ್ಟಿಯಲ್ಲಿಲ್ಲ ಟ್ರಸ್ಟಿಗಳ ಹೆಸರು

Ram Temple Donation Theft Case: ಅಯೋಧ್ಯೆ ರಾಮ ಮಂದಿರ ದೇಣಿಗೆ ಕಳವು ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಜಾಮೀನು ಅರ್ಜಿಗಳ ವಿಚಾರಣೆಯನ್ನು ಮುಂದೂಡಲಾಗಿದೆ. ಸೋಮವಾರ ವಿಶೇಷ ನ್ಯಾಯಾಲಯವು ಮೂವರು ಆರೋಪಿಗಳಾದ ಅವಿನಾಶ್ ಶುಕ್ಲಾ, ಮನೀಶ್ ಕುಮಾರ್ ಯಾದವ್ ಮತ್ತು ರಾಮ್ ಶಂಕರ್ ಮಿಶ್ರಾ ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿತ್ತು.

ರಾಮ ಮಂದಿರ ದೇಣಿಗೆ ಕಳವು ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆ

ರಾಮ ಮಂದಿರ (ಸಂಗ್ರಹ ಚಿತ್ರ) -

Priyanka P
Priyanka P Sep 24, 2026 6:18 PM

ಲಖನೌ, ಸೆ. 24: ರಾಮ ಮಂದಿರ ದೇಣಿಗೆ ಕಳವು ಪ್ರಕರಣದಲ್ಲಿ (Ram Temple Donation Theft Case) ಇಬ್ಬರು ಆರೋಪಿಗಳ ಜಾಮೀನು ಅರ್ಜಿಗಳ ವಿಚಾರಣೆಯನ್ನು ಮುಂದೂಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ ಹಿನ್ನೆಲೆಯಲ್ಲಿ ಸ್ಥಳೀಯ ವಕೀಲರ ಸಂಘ ಆಕ್ಷೇಪ ವ್ಯಕ್ತಪಡಿಸಿದ ನಂತರ ವಿಚಾರಣೆ ಮುಂದೂಡಲಾಯಿತು ಎಂದು ಆರೋಪಿಗಳ ಪರ ವಕೀಲರು ತಿಳಿಸಿದ್ದಾರೆ. ಆರೋಪಿಗಳಾದ ಸುಭಾಷ್ ಶ್ರೀವಾಸ್ತವ ಮತ್ತು ರಾಮಶಂಕರ್ ಅಲಿಯಾಸ್ ಟಿನ್ನು ಯಾದವ್ ಅವರ ಜಾಮೀನು ಅರ್ಜಿಗಳ ವಿಚಾರಣೆಯನ್ನು ಗುರುವಾರ (ಸೆಪ್ಟೆಂಬರ್‌ 24) ನಡೆಸಲಾಗುವುದು ಎಂದು ವಕೀಲ ಕುಲ್ ಶೇಖರ್ ಸಿಂಗ್ ತಿಳಿಸಿದ್ದರು.

ಸೋಮವಾರ (ಸೆಪ್ಟೆಂಬರ್‌ 21) ವಿಶೇಷ ನ್ಯಾಯಾಲಯವು ಮೂವರು ಆರೋಪಿಗಳಾದ ಅವಿನಾಶ್ ಶುಕ್ಲಾ, ಮನೀಶ್ ಕುಮಾರ್ ಯಾದವ್ ಮತ್ತು ರಾಮ್ ಶಂಕರ್ ಮಿಶ್ರಾ ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿತ್ತು. ಮಂಗಳವಾರ ಅನುಕಲ್ಪ್ ಮಿಶ್ರಾ, ಲವ್ ಕುಶ್ ಮಿಶ್ರಾ ಮತ್ತು ಕರುಣೇಶ್ ಪಾಂಡೆ ಅವರಿಗೆ ಜಾಮೀನು ನಿರಾಕರಿಸಿತ್ತು.

ವಕೀಲ ಸಿಂಗ್‌ ತಿಳಿಸಿದಂತೆ, ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ರಜತ್ ವರ್ಮಾ ಅವರ ಮುಂದೆ ಬುಧವಾರ (ಸೆಪ್ಟೆಂಬರ್‌ 23) ವಿಚಾರಣೆ ನಿಗದಿಯಾಗಿತ್ತು. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ ಬಳಿಕ ವಕೀಲರ ಸಂಘ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ವಿಚಾರಣೆ ನಡೆಯಲು ಸಾಧ್ಯವಾಗಲಿಲ್ಲ. ಅದನ್ನು ಗುರುವಾರಕ್ಕೆ ಮುಂದೂಡಲಾಯಿತು.

ಅಯೋಧ್ಯೆ ರಾಮ ಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜಿತೇಂದ್ರ ಮಿಶ್ರಾ ಆಯ್ಕೆ

ಸಾವಿರಾರು ಪುಟಗಳನ್ನು ಒಳಗೊಂಡಿರುವ ಚಾರ್ಜ್‌ಶೀಟ್‌ನ ಪ್ರತಿಯನ್ನು ನಾವು ಸ್ವೀಕರಿಸಿದ ಬಳಿಕ, ನಮ್ಮ ಕಡೆಯಿಂದ ಕೈಗೊಳ್ಳಬೇಕಾದ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು ಎಂದು ಅವರು ಹೇಳಿದರು. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಾಜಿ ಅಧಿಕಾರಿಗಳಾದ ಅನಿಲ್ ಮಿಶ್ರಾ, ಚಂಪತ್ ರಾಯ್ ಮತ್ತು ಗೋಪಾಲ್ ರಾವ್ ಅವರ ಹೆಸರನ್ನು ಆರೋಪಪಟ್ಟಿಯಲ್ಲಿ ಸೇರಿಸಲಾಗಿಲ್ಲ. ಅವರ ವಿರುದ್ಧ ಯಾವುದೇ ಆರೋಪಗಳನ್ನು ಹೊರಿಸಲಾಗಿಲ್ಲ ಎಂದು ವಕೀಲರು ಹೇಳಿದರು.

ಈ ಹಿಂದೆ, ಟ್ರಸ್ಟ್ ಅಧಿಕಾರಿಗಳನ್ನು ಸಹ ತನಿಖೆಯ ವ್ಯಾಪ್ತಿಗೆ ತರಬೇಕೆಂದು ಕೋರಿ ಬಾರ್ ಅಸೋಸಿಯೇಷನ್ ​​ಪೊಲೀಸರಿಗೆ ಅರ್ಜಿ ಸಲ್ಲಿಸಿತ್ತು. ಜಾಮೀನು ಅರ್ಜಿ ತಿರಸ್ಕೃತಗೊಂಡ ಆರು ಆರೋಪಿಗಳ ನ್ಯಾಯಾಂಗ ಬಂಧನವನ್ನು ನಂತರ 14 ದಿನಗಳವರೆಗೆ ವಿಸ್ತರಿಸಲಾಗಿದೆ ಎಂದು ವಕೀಲ ಕುಲ್ ಶೇಖರ್ ಸಿಂಗ್ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಬಂಧಿಸಲಾದ ಹೆಚ್ಚಿನ ಆರೋಪಿಗಳು ದೇವಾಲಯದಲ್ಲಿ ಭಕ್ತರಿಂದ ಬಂದ ನಗದು ದೇಣಿಗೆಯನ್ನು ಎಣಿಸುವ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಬ್ಯಾಂಕ್‌ ಉದ್ಯೋಗಿಗಳಾಗಿದ್ದಾರೆ. ಸುಭಾಷ್ ಶ್ರೀವಾಸ್ತವ ದೇಣಿಗೆ ಎಣಿಸುವ ಪ್ರಕ್ರಿಯೆಯ ಉಸ್ತುವಾರಿ ವಹಿಸಿದ್ದರು ಎನ್ನಲಾಗಿದೆ. ಟಿನ್ನು ಯಾದವ್ ಚಾಲಕರಾಗಿ ಕೆಲಸ ಮಾಡುತ್ತಿದ್ದು, ಮಾಜಿ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ಸಹಾಯಕರಾಗಿದ್ದರು.

ಅಯೋಧ್ಯೆ ರಾಮ ಮಂದಿರ ದೇಣಿಗೆ ಕಳವು ಪ್ರಕರಣ: ಟ್ರಸ್ಟ್‌ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್‌ಗೆ ಕ್ಲೀನ್‌ಚಿಟ್

ಈ ಪ್ರಕರಣವು ರಾಮ ಮಂದಿರದಲ್ಲಿ ಭಕ್ತರು ಅರ್ಪಿಸಿದ ನಗದು ಮತ್ತು ಬೆಲೆಬಾಳುವ ವಸ್ತುಗಳ ದುರುಪಯೋಗ ಮತ್ತು ಕಳ್ಳತನದ ಆರೋಪಗಳಿಗೆ ಸಂಬಂಧಿಸಿದೆ. ರಾಜ್ಯ ಸರ್ಕಾರ ರಚಿಸಿದ ವಿಶೇಷ ತನಿಖಾ ತಂಡದ ಪ್ರಾಥಮಿಕ ವರದಿಯ ನಂತರ ಜೂನ್ 25ರಂದು ಎಫ್‌ಐಆರ್ ದಾಖಲಿಸಿದ ನಂತರ ಎಂಟು ಜನರನ್ನು ಬಂಧಿಸಲಾಯಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು 79.85 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪ್ರಾಸಿಕ್ಯೂಷನ್ ಹೇಳಿದೆ. ತನಿಖೆಯನ್ನು ಎಸ್‌ಐಟಿ ನಡೆಸುತ್ತಿದ್ದು, ಸೆಪ್ಟೆಂಬರ್ 25 ರೊಳಗೆ ತನ್ನ ಆರೋಪಪಟ್ಟಿಯನ್ನು ಸಲ್ಲಿಸಲಾಗುವುದು ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.