ಕರ್ನಾಟಕ ಬಜೆಟ್​ ವಿದೇಶ ಮಹಿಳಾ ದಿನಾಚರಣೆ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Naxal Encounter: ಭದ್ರತಾ ಪಡೆಗಳ ಭರ್ಜರಿ ಬೇಟೆ: ಗುಂಡಿನ ಚಕಮಕಿಯಲ್ಲಿ 31 ನಕ್ಸಲರ ಎನ್‌ಕೌಂಟರ್!

ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು(ಫೆ.9) ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 31 ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಛತ್ತೀಸ್‌ಗಢದಲ್ಲಿ 31 ನಕ್ಸಲರ ಎನ್‌ಕೌಂಟರ್!

Naxal Encounter

Profile Deekshith Nair Feb 9, 2025 1:05 PM

ರಾಯ್‌ಪುರ: ಭಾರತದಲ್ಲಿ ನಕ್ಸಲಿಸಂ ಅನ್ನು ತೊಡೆದು ಹಾಕುವಲ್ಲಿ ಭದ್ರತಾ ಪಡೆ ಮಹತ್ವದ ಹೆಜ್ಜೆಯನ್ನು ಇಡುತ್ತಿದೆ. ಕಳೆದ ವಾರವಷ್ಟೇ ಛತ್ತೀಸ್‌ಗಢದಲ್ಲಿ(Chhattisgarh) 8 ನಕ್ಸಲರನ್ನು ಎನ್‌ಕೌಂಟರ್‌ ಮಾಡಲಾಗಿತ್ತು. 29 ನಕ್ಸಲರು ಶರಣಾಗಿದ್ದರು. ಇದರ ಬೆನ್ನಲ್ಲೇ ಇಂದು(ಫೆ.9) ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 31 ನಕ್ಸಲರು ಹತರಾಗಿದ್ದಾರೆ(Naxal Encounter) ಎಂದು ಪೊಲೀಸರು ತಿಳಿಸಿದ್ದಾರೆ. ಮಾವೋವಾದಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಬೆಳಗ್ಗೆ ವಿವಿಧ ಭದ್ರತಾ ಪಡೆಗಳ ಜಂಟಿ ತಂಡ ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಭಾರೀ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಗುಂಡಿನ ಚಕಮಕಿಯಲ್ಲಿ 31 ನಕ್ಸಲರು ಹತರಾಗಿದ್ದಾರೆ. ಅವರೆಲ್ಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಭದ್ರತಾ ಸಿಬ್ಬಂದಿಯ ಮೃತದೇಹಗಳನ್ನು ಹೊರತೆಗೆಯಲು ಮತ್ತು ಗಾಯಗೊಂಡ ಯೋಧರನ್ನು ಸ್ಥಳಾಂತರಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.



ಜನವರಿ 31 ರಂದು ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದು ಎಂಟು ಮಾವೋವಾದಿಗಳು ಮೃತಪಟ್ಟಿದ್ದರು. ಪಶ್ಚಿಮ ಬಸ್ತಾರ್ ಪ್ರದೇಶದಲ್ಲಿ ನಕ್ಸಲಿಗರು ಬೀಡು ಬಿಟ್ಟಿರುವ ಸುಳಿವು ಸಿಕ್ಕ ಬೆನ್ನಲ್ಲೇ ಜಿಲ್ಲಾ ಮೀಸಲು ಪಡೆ, ರಾಜ್ಯ ಪೊಲೀಸರ ವಿಶೇಷ ಕಾರ್ಯಪಡೆಯ ಸಿಬ್ಬಂದಿ, ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಮತ್ತು ಕೋಬ್ರಾ(ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು.

ಈ ಸುದ್ದಿಯನ್ನೂ ಓದಿ:Naxalites encounter: ಛತ್ತೀಸ್‌ಗಡದಲ್ಲಿ ಭದ್ರತಾ ಸಿಬ್ಬಂದಿಗಳ ಭರ್ಜರಿ ಬೇಟೆ ; 12 ನಕ್ಸಲರ ಎನ್‌ಕೌಂಟರ್‌

ನಕ್ಸಲಿಸಂಗೆ ಮತ್ತೊಂದು ಹೊಡೆತ: ಅಮಿತ್‌ ಶಾ

ಇತ್ತೀಚೆಗಷ್ಟೇ ಛತ್ತೀಸಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 14 ಮಂದಿ ನಕ್ಸಲರು ಹತರಾಗಿದ್ದರು. ಈ ಭರ್ಜರಿ ಕಾರ್ಯಾಚರಣೆಯಿಂದಾಗಿ ನಕ್ಸಲಿಸಂಗೆ ಮತ್ತೊಂದು ಹೊಡೆತವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದರು. ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಅಮಿತ್ ಶಾ, ನಕ್ಸಲ್ ಮುಕ್ತ ಭಾರತವನ್ನು ನಿರ್ಮಿಸುವಲ್ಲಿ ನಮ್ಮ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಗಳನ್ನು ನಡೆಸುತ್ತಿರುತ್ತದೆ. ಈಗ ನಡೆದಿರುವ ಕಾರ್ಯಾಚರಣೆಯಿಂದಾಗಿ ನಕ್ಸಲಿಸಂಗೆ ಭಾರಿ ಹೊಡೆತವಾಗಿದೆ ಎಂದು ತಿಳಿಸಿದ್ದರು.