ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದೆಹಲಿಯಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿತ; ಮೂರು ವರ್ಷದ ಮಗು ಸೇರಿ ಇಬ್ಬರು ಸಾವು

Building Collapses In Delhi: ರಾಷ್ಟ್ರ ರಾಜಧಾನಿ ದೆಹಲಿಯ ಪೂರ್ವ ಭಾಗದಲ್ಲಿರುವ ವಿವೇಕ್ ವಿಹಾರ್ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಎರಡು ಅಂತಸ್ತಿನ ಹಳೆಯ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಪುಟ್ಟ ಮಗು ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

ಸಂಗ್ರಹ ಚಿತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಪೂರ್ವ ಭಾಗದಲ್ಲಿರುವ ವಿವೇಕ್ ವಿಹಾರ್ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಎರಡು ಅಂತಸ್ತಿನ ಹಳೆಯ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ (Building Collapses In Delhi) ಪುಟ್ಟ ಮಗು ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಶಹದಾರ ಜಿಲ್ಲೆಯ ಕಸ್ತೂರ್ಬಾ ನಗರದಲ್ಲಿ ಬೆಳಿಗ್ಗೆ 10.13ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ .

ಕಟ್ಟಡದ ಮೇಲ್ಛಾವಣಿ ಏಕಾಏಕಿ ಕುಸಿದಿದ್ದರಿಂದ, ಮನೆಯಲ್ಲಿ ವಾಸವಿದ್ದ ಬಾಡಿಗೆದಾರರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ . ಘಟನೆಯಲ್ಲಿ 35 ವರ್ಷದ ಪಿಂಟು ಹಾಗೂ ಒಂದು ಪುಟ್ಟ ಮಗು ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ದೆಹಲಿ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಘಟನೆ ಕುರಿತು ಪ್ರತಿಕ್ರಿಯಿಸಿರುವ ಉತ್ತರ ದೆಹಲಿ ಮಹಾನಗರ ಪಾಲಿಕೆ (MCD) ಅಧ್ಯಕ್ಷ ಪಂಕಜ್ ಲೂತ್ರಾ, ಕುಸಿದಿರುವ ಕಟ್ಟಡವು ಸುಮಾರು 40 ರಿಂದ 50 ವರ್ಷಗಳಷ್ಟು ಹಳೆಯದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕೆಲ ದಿನಗಳ ಹಿಂದೆ ಹೊಸದಿಲ್ಲಿಯ ಚಾವ್ರಿ ಬಜಾರ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿತ್ತು. ಹೊಸದಿಲ್ಲಿಯಲ್ಲಿ ಕಟ್ಟಡ ಕುಸಿತದ ಸರಣಿ ದುರಂತಗಳು ಸಂಭವಿಸುತ್ತಿವೆ. ಕಳೆದ ಅಕ್ಟೋಬರ್‌ನಲ್ಲಿ ಈಶಾನ್ಯ ದೆಹಲಿಯ ಸೀಮಾಪುರಿಯಲ್ಲಿ ಐದಂಸ್ತಿನ ಕಟ್ಟಡ ಕುಸಿತ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದರು. ಮೃತಪಟ್ಟವರಲ್ಲಿ ಇಬ್ಬರು ಮಕ್ಕಳು ಮತ್ತು ಓರ್ವ ಗರ್ಭಣಿ ಸೇರಿದ್ದರು.

ಇದಕ್ಕೂ ಮೊದಲು ಸತ್ಯನಿಕೇತನ ಬಳಿಯ ಹಾಸ್ಟೇಲ್‌ ಡೇಜ್‌ ಪಿಜಿ ಕಟ್ಟಡ ಕುಸಿತ ಪ್ರಕರಣದಲ್ಲಿ, ಏಳು ಜನ ತಮ್ಮ ಪ್ರಾಣ ಕಳೆದುಕೊಂಡಿದ್ದರು. ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ವಿದ್ಯಾರ್ಥಿಗಳು ಸ್ನೇಹಿತರಿಗೆ ವಾಟ್ಸಪ್‌ ಲೈವ್‌ ಲೋಕೇಶನ್‌ ಕಳುಹಿಸಿದ್ದು, ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿ ಅವರನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿತ್ತು.

Vishakha Bhat Heggar

View all posts by this author