ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Indian Airlines: ಚಂಡೀಗಢ, ಶ್ರೀನಗರ ಸೇರಿದಂತೆ ದೇಶಾದ್ಯಂತ 24 ವಿಮಾನ ನಿಲ್ದಾಣಗಳಲ್ಲಿ ನಾಗರಿಕ ವಿಮಾನ ಕಾರ್ಯಾಚರಣೆ ಸ್ಥಗಿತ

ಜಮ್ಮು, ಪಂಜಾಬ್, ಗುಜರಾತ್ ಮತ್ತು ರಾಜಸ್ಥಾನದ ಭಾರತೀಯ ನಗರಗಳ ಮೇಲೆ ಪಾಕಿಸ್ತಾನ ಡ್ರೋನ್ ಮತ್ತು ಕ್ಷಿಪಣಿ ಮೂಲಕ ದಾಳಿ ನಡೆಸಿದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಸಂಜೆಯ ವೇಳೆಗೆ 24 ವಿಮಾನ ನಿಲ್ದಾಣಗಳಲ್ಲಿ ನಾಗರಿಕ ವಿಮಾನ ಕಾರ್ಯಾಚರಣೆಗಳನ್ನು ಮುಚ್ಚಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.

ದೇಶಾದ್ಯಂತ  24 ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆ ಸ್ಥಗಿತ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ (India pakistan war) ನಡುವೆ ಉದ್ವಿಗ್ನತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ 24 ವಿಮಾನ ನಿಲ್ದಾಣಗಳಲ್ಲಿ ನಾಗರಿಕ ವಿಮಾನ (civil flight operations) ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ. ಜಮ್ಮು, ಪಂಜಾಬ್, ಗುಜರಾತ್ ಮತ್ತು ರಾಜಸ್ಥಾನದ ಭಾರತೀಯ ನಗರಗಳ ಮೇಲೆ ಪಾಕಿಸ್ತಾನ ಡ್ರೋನ್ ಮತ್ತು ಕ್ಷಿಪಣಿ ಮೂಲಕ ದಾಳಿ ನಡೆಸಿದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಸಂಜೆಯ ವೇಳೆಗೆ 24 ವಿಮಾನ ನಿಲ್ದಾಣಗಳಲ್ಲಿ ನಾಗರಿಕ ವಿಮಾನ ಕಾರ್ಯಾಚರಣೆಗಳನ್ನು ಮುಚ್ಚಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ (Civil Aviation Ministry) ತಿಳಿಸಿದೆ.

ನಾಗರಿಕ ವಿಮಾನ ಕಾರ್ಯಾಚರಣೆಗಳಿಗಾಗಿ ಮುಚ್ಚಲಾದ ವಿಮಾನ ನಿಲ್ದಾಣಗಳಲ್ಲಿ ಚಂಡೀಗಢ, ಶ್ರೀನಗರ, ಜೈಸಲ್ಮೇರ್, ಶಿಮ್ಲಾ ಮತ್ತು ಇನ್ನು ಹಲವು ನಗರಗಳು ಸೇರಿವೆ.

ಮುಚ್ಚಲಾದ ವಿಮಾನ ನಿಲ್ದಾಣಗಳು

ಚಂಡೀಗಢ, ಶ್ರೀನಗರ, ಅಮೃತಸರ, ಲುಧಿಯಾನ, ಭುಂತರ್, ಕಿಶೆಂಗಢ, ಶಿಮ್ಲಾ, ಕಾಂಗ್ರಾ- ಗಗ್ಗಲ್, ಬಥಿಂಡಾ, ಜೈಸಲ್ಮೇರ್, ಜೋಧಪುರ, ಬಿಕಾನೇರ್, ಹಲ್ವಾರಾ, ಪಠಾಣ್‌ಕೋಟ್, ಜಮ್ಮು, ಲೆಹ್, ಮುಂದ್ರಾ, ಜಾಮ್‌ನಗರ, ಹಿರಾಸ (ರಾಜ್‌ಕೋಟ್), ಪೋರ್ ಬಂದರ್, ಕೇಶೋದ್, ಕಾಂಡ್ಲಾ ಮತ್ತು ಭುಜ್, ಜಮ್ಮು, ಪಂಜಾಬ್ ಮತ್ತು ರಾಜಸ್ಥಾನದ ನಗರ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದ್ದರಿಂದ ಗುರುವಾರ ಸಂಜೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾಗಿದೆ. ಅಲ್ಲದೇ ಬಳಿಕ ನಡೆದ ಹಲವು ದಾಳಿಯ ಪ್ರಯತ್ನವನ್ನು ಭಾರತೀಯ ವಾಯು ರಕ್ಷಣಾ ವ್ಯವಸ್ಥೆಗಳು ತಡೆಹಿಡಿದವು. ಇದರಿಂದ ಹಲವಾರು ನಗರಗಳಲ್ಲಿ ಬ್ಲಾಕೌಟ್‌ಗಳು ನಡೆದವು, ವಾಯುದಾಳಿ ಸೈರನ್‌ಗಳನ್ನು ಮೊಳಗಿದವು.

ಪಂಜಾಬ್‌, ರಾಜಸ್ಥಾನದ ಸೂಕ್ಷ್ಮ ವಲಯಗಳು ಮತ್ತು ಪಶ್ಚಿಮ ಗಡಿಯ ವಿವಿಧ ಭಾಗಗಳಲ್ಲಿ ಸ್ಫೋಟಗಳಾಗುವ ಮುನ್ನ ಭಾರತೀಯ ರಕ್ಷಣಾ ವ್ಯವಸ್ಥೆಯು ಜಮ್ಮುವಿನ ಮೇಲೆ ಬಂದಿದ್ದ ಡ್ರೋನ್ ಮತ್ತು ಕ್ಷಿಪಣಿ ದಾಳಿಯನ್ನು ವಿಫಲಗೊಳಿಸಿತ್ತು ಎಂದು ಮಿಲಿಟರಿ ಮೂಲಗಳು ತಿಳಿಸಿವೆ.

ಭದ್ರತಾ ಕ್ರಮವಾಗಿ ಕೈಗೊಂಡಿರುವ ನಿರ್ಣಯಗಳ ಬಗ್ಗೆ ಪ್ರಯಾಣಿಕರಿಗೆ ಸೂಚನೆ ನೀಡಲಾಗುತ್ತಿದೆ. ಕೆಲವು ವಿಮಾನ ನಿಲ್ದಾಣಗಳಿಗೆ ಶನಿವಾರದವರೆಗೆ ವಿಮಾನ ಹಾರಾಟವನ್ನು ಸ್ಥಗಿತಗೊಳಿಸುವುದಾಗಿ ಹಲವಾರು ವಿಮಾನಯಾನ ಸಂಸ್ಥೆಗಳು ತಿಳಿಸಿವೆ.

ಇದರೊಂದಿಗೆ ಹೆಚ್ಚಿರುವ ಭದ್ರತಾ ತಪಾಸಣೆ ಮತ್ತು ಔಪಚಾರಿಕತೆಗಳನ್ನು ಪೂರೈಸಲು ಹೆಚ್ಚುವರಿ ಸಮಯ ಬೇಕಾಗುತ್ತದೆ. ಇದನ್ನು ಗಮನಿಸಿ ವಿಮಾನ ನಿಲ್ದಾಣಕ್ಕೆ ಬರುವಂತೆ ಪ್ರಯಾಣಿಕರಿಗೆ ವಿಮಾನಯಾನ ಸಂಸ್ಥೆಗಳು ಮನವಿ ಮಾಡಿವೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಇಂಡಿಗೋ, ಈ ಸಂದಿಗ್ದ ಪರಿಸ್ಥಿತಿಯಲ್ಲಿ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಭದ್ರತಾ ತಪಾಸಣೆ ಮತ್ತು ಔಪಚಾರಿಕತೆಗಳನ್ನು ಪೂರೈಸಲು ಪ್ರಯಾಣಕ್ಕೆ ಸ್ವಲ್ಪ ಹೆಚ್ಚುವರಿ ಸಮಯವನ್ನು ನೀಡಬೇಕೆಂದು ಪ್ರಯಾಣಿಕರಲ್ಲಿ ವಿನಂತಿಸಿದೆ.

ಇದನ್ನೂ ಓದಿ: Operation Sindoor: ಬಿಎಸ್‌ಎಫ್ ಶಿಬಿರದ ಮೇಲೆ ಮತ್ತೆ ಪಾಕ್‌ ಡ್ರೋನ್ ದಾಳಿಗೆ ಯತ್ನ

ಸ್ಪೈಸ್‌ಜೆಟ್ ಮತ್ತು ಆಕಾಶ ಏರ್ ಸಹ ಪ್ರಯಾಣಿಕರು ಪ್ರಯಾಣಕ್ಕೆ ಕನಿಷ್ಠ ಮೂರು ಗಂಟೆಗಳ ಮೊದಲು ವಿಮಾನ ನಿಲ್ದಾಣಗಳನ್ನು ತಲುಪಲು ವಿನಂತಿಸಿದೆ.

ಇಂಡಿಗೋ ವಿಮಾನಯಾನ ಸಂಸ್ಥೆಗಳು ಬುಧವಾರ 165 ವಿಮಾನಗಳನ್ನು ರದ್ದುಗೊಳಿಸಿದರೆ, ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕೂಡ ಹಲವು ವಿಮಾನ ಪ್ರಯಾಣವನ್ನು ರದ್ದುಗೊಳಿಸಿವೆ.

ರಕ್ಷಣಾ ಇಲಾಖೆಯ ಸೂಚನೆ ಮೇರೆಗೆ ಗುರುವಾರ ಸಂಜೆ ಕೆಲವು ವಿಮಾನ ನಿಲ್ದಾಣಗಳ ಹಠಾತ್ ಮುಚ್ಚಿದ್ದರಿಂದ ಲಾಹೋರ್‌ ಸಮೀಪದ ಅಮೃತಸರದಿಂದ ನವದೆಹಲಿಗೆ ಹೋಗುವ ಎರಡು ಅಂತಾರಾಷ್ಟ್ರೀಯ ವಿಮಾನಗಳನ್ನು ಬೇರೆ ಕಡೆಗೆ ತಿರುಗಿಸಿರುವುದಾಗಿ ಏರ್ ಇಂಡಿಯಾ ತಿಳಿಸಿದೆ.