ನವದೆಹಲಿ: ಕೇಂದ್ರ ಸರ್ಕಾರ ನೀಡಿರುವ ಭರವಸೆಯನ್ನು ಈಡೇರಿಸದೇ ಇರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 5ರಂದು ನಡೆಯಲಿದ್ದ ಇಂಡಿಯಾ ಗೇಟ್ ಮೆರವಣಿಗೆ (September 5 CJP march) ನಿರ್ಧಾರವನ್ನು ವಾಪಾಸ್ ಪಡೆಯುವುದಾಗಿ ಕಾಕ್ರೋಚ್ ಜನತಾ ಪಕ್ಷ (Cockroach Janta Party) ಸುಪ್ರೀಂ ಕೋರ್ಟ್ (Supreme Court) ಗೆ ತಿಳಿಸಿದೆ. ನ್ಯಾಯಾಲಯದಲ್ಲಿ ಕೇಂದ್ರ ಸರ್ಕಾರ ನೀಡಿದ ಭರವಸೆ ಹಾಗೂ ನ್ಯಾಯಾಲಯ ಎಫ್‌ಐಆರ್ ಅನ್ನು ರದ್ದು ಪಡಿಸುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಮೆರವಣಿಗೆ (India Gate march) ಕರೆಯನ್ನು ಹಿಂತೆಗೆದುಕೊಳ್ಳುತ್ತಿರುವುದಾಗಿ ಸಿಜೆಪಿ ವಕ್ತಾರ ಸೌರವ್ ದಾಸ್ (Saurav Das) ಮಂಗಳವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ.
ಕಳೆದ ಜುಲೈ ತಿಂಗಳಲ್ಲಿ ನಡೆದ ಪ್ರತಿಭಟನೆಯನ್ನು ಕೊನೆಗೊಳಿಸಲು ಕೇಂದ್ರ ಸರ್ಕಾರ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಲು ವಿಫಲವಾದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 5 ರಂದು ಇಂಡಿಯಾ ಗೇಟ್‌ನಿಂದ ದೆಹಲಿ ಪೊಲೀಸ್ ಪ್ರಧಾನ ಕಚೇರಿಗೆ ಶಾಂತಿಯುತ ಮೆರವಣಿಗೆ ನಡೆಸುವುದಾಗಿ ಸಿಜೆಪಿ ಇತ್ತೀಚೆಗೆ ಘೋಷಿಸಿತ್ತು.
ಸಿಜೆಪಿ ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ ಬಿಗ್ ರಿಲೀಫ್; ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ಈ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಹೇಳಿಕೆ ನೀಡಿದ ಸೌರವ್ ದಾಸ್, ಭಾರತ ಸರ್ಕಾರದ ಸಕಾರಾತ್ಮಕ ಭರವಸೆಗಳು ಮತ್ತು ಅವರಿಗೆ ನೀಡಲಾದ ನ್ಯಾಯಾಂಗ ಪಾವಿತ್ರ್ಯ ಮತ್ತು ನ್ಯಾಯಾಲಯವು ಅಂಗೀಕರಿಸಿದ ಆದೇಶವನ್ನು ಗಮನದಲ್ಲಿಟ್ಟುಕೊಂಡು ಸೆಪ್ಟೆಂಬರ್ 5 ರಂದು ಮೆರವಣಿಗೆಯ ಕರೆಯನ್ನು ಹಿಂತೆಗೆದುಕೊಳ್ಳುವುದು ಸೂಕ್ತವೆಂದು ಸಿಜೆಪಿ ಪರಿಗಣಿಸುತ್ತದೆ ಎಂದು ತಿಳಿಸಿದರು.
ಸುಪ್ರೀಂ ಕೋರ್ಟ್ ನಲ್ಲಿ ಮಂಗಳವಾರ ನಡೆದ ವಿಚಾರಣೆ ಸಂದರ್ಭದಲ್ಲಿ ಆತ್ಮಹತ್ಯೆಯಿಂದ ಸಾವನ್ನಪ್ಪಿದ ನೀಟ್ ಆಕಾಂಕ್ಷಿಗಳ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಸಿಜೆಪಿಗೆ ನೀಡಿದ ಭರವಸೆಗಳನ್ನು ಗೌರವಿಸಲು ಕೇಂದ್ರವು ಬದ್ಧವಾಗಿದೆ ಮತ್ತು ಮೂರು ತಿಂಗಳೊಳಗೆ ಇದನ್ನು ಮಾಡುವುದಾಗಿ ಕೇಂದ್ರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು.
SIR: ಮಹಾರಾಷ್ಟ್ರದಲ್ಲಿ ಮತದಾರರ ಪಟ್ಟಿಯಿಂದ 2 ಕೋಟಿಗೂ ಹೆಚ್ಚು ಹೆಸರು ಡಿಲೀಟ್: ಕಾಂಗ್ರೆಸ್ ವಾಗ್ದಾಳಿ
ಜುಲೈ 20 ರಿಂದ ಜುಲೈ 25 ರ ನಡುವೆ ದೇಶಾದ್ಯಂತ ನೀಟ್ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ ಎಫ್‌ಐಆರ್‌ಗಳನ್ನು ರದ್ದುಗೊಳಿಸಲು ತನ್ನ ಅಧಿಕಾರವನ್ನು ಬಳಸುವಂತೆ ಕೇಂದ್ರವು ಸುಪ್ರೀಂ ಕೋರ್ಟ್ ಅನ್ನು ಒತ್ತಾಯಿಸಿತು. ಈ ಕುರಿತು ದೆಹಲಿ ಪೊಲೀಸರು ಸೋಮವಾರ ಸಂಜೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಈ ಕುರಿತು ಮಂಗಳವಾರ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ ಮೋಹನ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿ ಸಿಜೆಪಿ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ರದ್ದು ಪಡಿಸಿ ಆದೇಶಿಸಿದೆ.