ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಿಜೆಪಿ- ಕೇಂದ್ರ ಸರ್ಕಾರದ ನಡುವೆ ಇಂದು ಮೂರನೇ ಹಂತದ ಮಾತುಕತೆ; ರಾಜೀನಾಮೆ ನೀಡ್ತಾರಾ ಪ್ರಧಾನ್‌?

ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಕ್ಷ ಶನಿವಾರ ತಮ್ಮ ಮೂರನೇ ಸುತ್ತಿನ ಮಾತುಕತೆಗಳನ್ನು ನಡೆಸಲಿವೆ. ನಿನ್ನೆ ಸರ್ಕಾರದೊಂದಿಗೆ ನಡೆದ ಎರಡನೇ ಸುತ್ತಿನ ಮಾತುಕತೆಯ ನಂತರ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು ಅಥವಾ ಅವರನ್ನು ವಜಾಗೊಳಿಸಬೇಕು ಎಂಬ ತನ್ನ ಬೇಡಿಕೆಯನ್ನು 'ಕಾಕ್ರೋಚ್ ಜನತಾ ಪಾರ್ಟಿ ಒತ್ತಿ ಹೇಳಿದೆ.

ಸಿಜೆಪಿ- ಕೇಂದ್ರ ಸರ್ಕಾರದ ನಡುವೆ ಇಂದು ಮೂರನೇ ಹಂತದ ಮಾತುಕತೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jul 25, 2026 9:45 AM

ನವದೆಹಲಿ: ಕೇಂದ್ರ ಸರ್ಕಾರ (Central government) ಮತ್ತು ಕಾಕ್ರೋಚ್ ಜನತಾ ಪಕ್ಷ (CJP) ಶನಿವಾರ ತಮ್ಮ ಮೂರನೇ ಸುತ್ತಿನ ಮಾತುಕತೆಗಳನ್ನು ನಡೆಸಲಿವೆ. ನಿನ್ನೆ ಸರ್ಕಾರದೊಂದಿಗೆ ನಡೆದ ಎರಡನೇ ಸುತ್ತಿನ ಮಾತುಕತೆಯ ನಂತರ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ರಾಜೀನಾಮೆ ನೀಡಬೇಕು ಅಥವಾ ಅವರನ್ನು ವಜಾಗೊಳಿಸಬೇಕು ಎಂಬ ತನ್ನ ಬೇಡಿಕೆಯನ್ನು 'ಕಾಕ್ರೋಚ್ ಜನತಾ ಪಾರ್ಟಿ ಒತ್ತಿ ಹೇಳಿದೆ. ಏತನ್ಮಧ್ಯೆ, ಪ್ರತಿಭಟನೆಗಳ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಾದ್ಯಂತ ಭದ್ರತೆಯನ್ನು ತೀವ್ರಗೊಳಿಸಲಾಗಿದೆ.

ನಿನ್ನೆ ಸಭೆಯಲ್ಲಿ ಸರ್ಕಾರದ ಪರವಾಗಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ಪ್ರಧಾನ ಮಂತ್ರಿಗಳ ಕಚೇರಿಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಭಾಗವಹಿಸಿದ್ದರು. ಸಿಜೆಪಿ ಪರವಾಗಿ ಅದರ ರಾಷ್ಟ್ರೀಯ ವಕ್ತಾರರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಪಾಲ್ಗೊಂಡಿದ್ದರು. ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ಎರಡೂ ಪಕ್ಷಗಳು ಮಾಹಿತಿ ಹಂಚಿಕೊಂಡಿದ್ದವು. ಸಭೆಯಲ್ಲಿ ನೀಟ್‌ ಅಕ್ರಮದ ಹಿನ್ನೆಲೆಯಲ್ಲಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಮತ್ತು ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲಿನ ಪ್ರಕರಣಗಳನ್ನು ಕೈಬಿಡುವ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸಿದೆ ಎಂದು ಸಿಜೆಪಿ ತಿಳಿಸಿದೆ.

ಕೇಂದ್ರ ಸರ್ಕಾರ ಈಗಾಗಲೇ ಪ್ರಶ್ನೆ ಪತ್ರಿಕೆ ಸೋರಿಕೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ. ಪರೀಕ್ಷಾ ಅಕ್ರಮಗಳ ತಡೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬೆನ್ನಲ್ಲೇ 47 ಅಧಿಕಾರಿಗಳನ್ನು ಎನ್‌ಟಿಎ ವಜಾ ಮಾಡಿದೆ. ಮುಂದಿನ ಒಂದು ತಿಂಗಳೊಳಗೆ ವ್ಯಾಪಕ ರಚನಾತ್ಮಕ ಹಾಗೂ ತಾಂತ್ರಿಕ ಸುಧಾರಣೆಗಳನ್ನು ಜಾರಿಗೆ ತರುವ ಯೋಜನೆ ರೂಪಿಸಿರುವ ಕೇಂದ್ರ ಸರ್ಕಾರ, ಈ ಪ್ರಕ್ರಿಯೆಯ ಭಾಗವಾಗಿ ಈ ಶಿಸ್ತು ಕ್ರಮ ನಡೆದಿದೆ.

ತಮ್ಮ ಪ್ರಮುಖ ಬೇಡಿಕೆಗಳ ಕುರಿತು ಸರ್ಕಾರವು ಭರವಸೆ ನೀಡಿದ ಹಿನ್ನೆಲೆಯಲ್ಲಿ, ಸೋನಮ್ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹ ಅಂತ್ಯ ಮಾಡಿದ್ದಾರೆ. 26 ದಿನಗಳ ಉಪವಾಸ ಮುರಿದಿರುವ ಸೋನಮ್‌ ವಾಂಗ್‌ಚುಕ್‌, ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಭರವಸೆ ವ್ಯಕ್ತಪಡಿಸಿದ್ದಾರೆ.

ಸಿಜೆಪಿ ಪ್ರತಿಭಟನೆ ನಡುವೆ ಉನ್ನತ ಶಿಕ್ಷಣ ಇಲಾಖೆಯ ನೂತನ ಕಾರ್ಯದರ್ಶಿಯಾಗಿ ನರೇಶ್ ಪಾಲ್ ಗಂಗ್ವಾರ್ ನೇಮಕ

ಇನ್ನು ದೆಹಲಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ದೆಹಲಿ ಮೆಟ್ರೋ ರೈಲು ನಿಗಮ (ಡಿಎಂಆರ್‌ಸಿ) ಹಲವಾರು ಮೆಟ್ರೋ ನಿಲ್ದಾಣಗಳನ್ನು ಮುಚ್ಚಿದೆ. ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಸರ್ಕಾರ ಆದೇಶ ಹೊರಡಿಸಿದೆ. ದೆಹಲಿ ಪೊಲೀಸರು ಎಲ್ಲಾ ಸಿಬ್ಬಂದಿಗೆ ನಿಯಮಿತ ರಜೆ ರದ್ದುಗೊಳಿಸಲಾಗಿದೆ.