ಪಂಜಾಬ್ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದಲ್ಲಿ ಭುಗಿಲೆದ್ದ ಹಿಂಸಾಚಾರ: ಮಧ್ಯಂತರ ಪರೀಕ್ಷೆ ಮುಂದೂಡಿಕೆ
Classes Suspended in Punjab VV: ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಪಂಜಾಬ್ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ತರಗತಿಗಳನ್ನು 10 ದಿನಗಳವರೆಗೆ ಸ್ಥಗಿತಗೊಳಿಸಲಾಗಿದೆ. ಮುಂದಿನ ಸೂಚನೆ ಬರುವವರೆಗೆ ಮಧ್ಯಂತರ ಪರೀಕ್ಷೆಗಳನ್ನು ಮುಂದೂಡಿದೆ. ವಿದ್ಯಾರ್ಥಿಗಳಿಗೆ ನೀಡಿದ ನೋಟಿಸ್‌ನಲ್ಲಿ, ಎಲ್‌ಪಿಯು ಸೆಪ್ಟೆಂಬರ್ 28ರಿಂದ ಜಾರಿಗೆ ಬರುವಂತೆ 10 ದಿನಗಳವರೆಗೆ ನಿಯಮಿತ ತರಗತಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದೆ.
ಲವ್ಲಿ ಪ್ರೊಫೆಷನಲ್ ವಿವಿ ಲೋಗೋ ಮತ್ತು ವಿದ್ಯಾರ್ಥಿಗಳಿಂದ ನಡೆದ ಪ್ರತಿಭಟನೆ -
ಚಂಡೀಗಢ, ಸೆ. 28: ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ವಿಶ್ವ ವಿದ್ಯಾಲಯದಲ್ಲಿ (Lovely Professional University) ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ (Students Protest) ನಡೆಸಿದ ಹಿನ್ನೆಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ವಿವಿಯು 10 ದಿನಗಳವರೆಗೆ ತರಗತಿಗಳನ್ನು ಸ್ಥಗಿತಗೊಳಿಸಿದೆ. ಮುಂದಿನ ಸೂಚನೆ ಬರುವವರೆಗೆ ತನ್ನ ಮಧ್ಯಂತರ ಪರೀಕ್ಷೆಗಳನ್ನು ಮುಂದೂಡಿದೆ.
ವಿದ್ಯಾರ್ಥಿಗಳಿಗೆ ನೀಡಿದ ನೋಟಿಸ್‌ನಲ್ಲಿ, ಎಲ್‌ಪಿಯು ಸೆಪ್ಟೆಂಬರ್ 28ರಿಂದ ಜಾರಿಗೆ ಬರುವಂತೆ 10 ದಿನಗಳವರೆಗೆ ನಿಯಮಿತ ತರಗತಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದೆ. ಮಧ್ಯಾವಧಿ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ವಿಶ್ವವಿದ್ಯಾಲಯ ನಿರ್ವಹಣಾ ವ್ಯವಸ್ಥೆ (ಯುಎಂಎಸ್) ಮೂಲಕ ಪ್ರತ್ಯೇಕವಾಗಿ ತಿಳಿಸಲಾಗುವುದು ಎಂದು ತಿಳಿಸಿದೆ.
ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಿಕೆ:
#WATCH | Phagwara, Punjab | Latest visuals from Lovely Professional University (LPU) where heavy Police deployment has been made and students are leaving for their homes. Regular classes have been suspended here for 10 days from 28th September; mid-term examinations have also… pic.twitter.com/d1sEJuOesE
— ANI (@ANI) September 28, 2026
“ಸೆಪ್ಟೆಂಬರ್ 28ರಿಂದ (ಸೋಮವಾರ) ಜಾರಿಗೆ ಬರುವಂತೆ 10 ದಿನಗಳವರೆಗೆ ನಿಯಮಿತ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. ಮಧ್ಯಾವಧಿ ಪರೀಕ್ಷೆಗಳನ್ನು ಮುಂದಿನ ಸೂಚನೆ ಬರುವವರೆಗೆ ಮುಂದೂಡಲಾಗಿದೆ. ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಯುಎಂಎಸ್ ಮೂಲಕ ಪ್ರತ್ಯೇಕವಾಗಿ ತಿಳಿಸಲಾಗುವುದು” ಎಂದು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ: ಸಾವಿಗೂ ಮುನ್ನ ತಪ್ಪು ಮಾಡಿದ್ದಾಗಿ ಸ್ನೇಹಿತೆ ಬಳಿ ಹೇಳಿದ್ದೇಕೆ ಸಾಹಿಲ್ ವಕೋಡೆ
ಹಾಗೆಯೇ ವಿದ್ಯಾರ್ಥಿಗಳಿಗೆ 10 ದಿನಗಳ ಅವಧಿಯಲ್ಲಿ ತಮ್ಮ ಊರುಗಳಿಗೆ ಪ್ರಯಾಣಿಸಲು ವಿಶ್ವವಿದ್ಯಾನಿಲಯವು ಅವಕಾಶ ನೀಡಿದೆ. ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್‌ಗಳಲ್ಲಿ ಅಥವಾ ವಾಸಸ್ಥಳಗಳಲ್ಲಿಯೇ ಉಳಿಯುವಂತೆ ಮತ್ತು ಅಶಾಂತಿಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸೂಚಿಸಲಾಗಿದೆ.
ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಪಂಜಾಬ್‌ನ ಚಿತ್ಕಾರಾ ವಿಶ್ವವಿದ್ಯಾಲಯವು ಸೆಪ್ಟೆಂಬರ್ 28ರಿಂದ ಅಕ್ಟೋಬರ್ 1ರವರೆಗೆ ಬೋಧನಾ ಚಟುವಟಿಕೆಗಳಿಲ್ಲದ ಕೆಲಸದ ದಿನಗಳು ಎಂದು ಘೋಷಿಸಿದೆ. ವಿಶ್ವ ವಿದ್ಯಾಲಯವು ಹೊರಡಿಸಿರುವ ಸೂಚನೆಯಲ್ಲಿ, ಆಡಳಿತಾತ್ಮಕ ಕಾರಣಗಳಿಂದ ಈ ಅವಧಿಯನ್ನು ಬೋಧನಾ ಚಟುವಟಿಕೆಗಳಿಲ್ಲದ ಕೆಲಸದ ದಿನಗಳಾಗಿ ಪರಿಗಣಿಸಲಾಗುವುದು ಎಂದು ಬೋಧಕ ಸಿಬ್ಬಂದಿ ಮತ್ತು ಇತರ ಸಿಬ್ಬಂದಿಗೆ ತಿಳಿಸಿದೆ.
ಅಂದಹಾಗೆ, ಪಂಜಾಬ್‌ನ ಫಾಗ್ವಾರಾದ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಲವ್ಲಿ ಪ್ರೊಫೆಷನಲ್ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು 15 ಗಂಟೆಗಳಿಗೂ ಹೆಚ್ಚು ಕಾಲ ತಡೆಹಿಡಿದಿದ್ದ ಸಂಚಾರವನ್ನು ಪುನಃಸ್ಥಾಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಭಾನುವಾರ (ಸೆ. 27) ಮತ್ತು ಸೋಮವಾರದ (ಸೆ. 28) ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಪುನಃ ಸ್ಥಾಪನೆಯಾಗಿದ್ದು, ಪರಿಸ್ಥಿತಿ ಶಾಂತವಾಗಿದೆ ಎಂದು ಜಲಂಧರ್ ಪೊಲೀಸ್ ಆಯುಕ್ತ ಸತೀಂದರ್ ಸಿಂಗ್ ತಿಳಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಸೋಮವಾರ (ಸೆ. 28) ಬೆಳಗ್ಗೆಯೂ ಎಲ್‌ಪಿಯು ಕ್ಯಾಂಪಸ್‌ನ ಹೊರಗೆ ಪೊಲೀಸ್ ತುಕಡಿಯನ್ನು ನಿಯೋಜಿಸಲಾಗಿತ್ತು.
ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಪ್ರಾಧ್ಯಾಪಕನಿಗೆ ಕಡ್ಡಾಯ ರಜೆ ನೀಡಿದ ಐಐಟಿ ಬಾಂಬೆ
ಕ್ಯಾಂಪಸ್ ಆವರಣದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿದೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಲ್ಲಿ ಸುದ್ದಿಯೊಂದು ಹರಿದಾಡಿತ್ತು. ಇದರಿಂದ ಸಿಟ್ಟಿಗೆದ್ದ ವಿದ್ಯಾರ್ಥಿ ಸಮೂಹ ಲವ್ಲಿ ಪ್ರೊಫೆಷನಲ್ ವಿಶ್ವ ವಿದ್ಯಾಲಯದಲ್ಲಿ ಬೃಹತ್ ಪ್ರತಿಭಟನೆ ನಡೆಸಿದವು. ಆದರೆ ಅತ್ಯಾಚಾರ ನಡೆದಿಲ್ಲ, ವದಂತಿ ಎಂದು ವಿವಿ ಹೇಳಿದೆ.
ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಹೇಳಿಕೆಗಳನ್ನು ಇನ್ನೂ ಪರಿಶೀಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಸತ್ಯಾಸತ್ಯತೆಗಳನ್ನು ತಿಳಿಯಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಆದರೆ ಆರೋಪಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಹಲವು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.